Tokyo Olympic 2020: ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ

ಭಾರತದ ತ್ರಿಮೂರ್ತಿಗಳಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕಜಕಿಸ್ತಾನದ ವಿರುದ್ಧ 6-2 ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

Tokyo Olympic 2020: ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ
India Archery Team
Follow us
TV9 Web
| Updated By: Vinay Bhat

Updated on: Jul 26, 2021 | 7:57 AM

ಟೋಕಿಯೋ ಒಲಿಂಪಿಕ್ಸ್ 2020 (Tokyo Olympic) ಆರಂಭವಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾರತಕ್ಕೆ ಲಭಿಸಿರುವುದು ಕೇವಲಒಂದು ಪದಕ ಮಾತ್ರ. ಇಂದು ನಾಲ್ಕನೇ ದಿನವಾದ ಸೋಮವಾರ ಭಾರತ ಉತ್ತಮ ಆಟ ಪ್ರಾರಂಭಿಸಿದೆ.

ಚೊಚ್ಚಲ ಬಾರಿಯ ಒಲಿಂಪಿಕ್​ನಲ್ಲಿ ಭವಾನಿದೇವಿ ಸೇಬರ್ ಫೆನ್ಸಿಂಗ್‍ನಲ್ಲಿ ತುನಿಶಿಯಾ ದೇಶದ ನಡಿಯ ಅಝೀಝಿ ಅವರನ್ನು 15-3 ಅಂತರದಿಂದ ಸೋಲಿಸುವುದರ ಮೂಲಕ ಶುಭಾರಂಭ ಮಾಡಿದರು.

ಇದರ ಬೆನ್ನಲ್ಲೆ ಭಾರತದ ತ್ರಿಮೂರ್ತಿಗಳಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕಜಕಿಸ್ತಾನದ ವಿರುದ್ಧ 6-2 ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಈ ಮೂಲಕ ಬಿಲ್ಲುಗಾರರಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಇವರು ಇದು ಬೆಳಗ್ಗೆ 10:15ಕ್ಕೆ ಕೊರಿಯಾ ಸ್ಪರ್ಧಿಗಳ ವಿರುದ್ಧ ಸೆಣಸಾಡಲಿದ್ದಾರೆ.

ವಿಶೇಷ ಎಂದರೆ ಭವಾನಿದೇವಿ ಅವರು ಇದೇ ಮೊದಲ ಬಾರಿಗೆ ಭಾರತದ ಪರ ಸೈಬರ್ ಫೆನ್ಸಿಂಗ್ ಕ್ರೀಡೆಯಲ್ಲಿ ಭಾಗವಹಿಸಿದ ಕ್ರೀಡಾಪಟು ಆಗಿದ್ದಾರೆ. ಆಡಿದ ಮೊದಲನೇ ಪಂದ್ಯದಲ್ಲಿಯೇ ಭವಾನಿ ದೇವಿ ಜಯ ಸಾಧಿಸುವುದರ ಮೂಲಕ ಉತ್ತಮ ಆರಂಭ ಪಡೆದುಕೊಂಡಿದ್ದಾರೆ.

ಸದ್ಯ ಎರಡನೇ ಸುತ್ತಿಗೆ ಆಯ್ಕೆಯಾಗಿರುವ ಇವರಿಗೆ ಅಗ್ನಿ ಪರೀಕ್ಷೆ ಎದುರಾಗಿದೆ. ರಿಯೋ ಒಲಿಂಪಿಕ್ಸ್​ನ ಸೆಮಿ ಫೈನಲಿಸ್ಟ್ ಫ್ರೆಂಚ್​ನ ಮನೊನ್ ಬ್ರೂನೆಟ್ ವಿರುದ್ಧ ಸೆಣೆಸಾಡಲಿದ್ದಾರೆ.

Tokyo Olympic: ಚೊಚ್ಚಲ ಪಂದ್ಯದಲ್ಲೇ ಗೆದ್ದು ಬೀಗಿದ ಭವಾನಿ ದೇವಿ: ಮುಂದಿನ ಸುತ್ತು ಮತ್ತಷ್ಟು ಕಠಿಣ

(Tokyo Olympics Indian archery team reaches quarter-finals after 6-2 win over Kazakhstan)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ