Tokyo Olympics: ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಚಿನ್ನಕ್ಕೆ ಮುತ್ತಿಟ್ಟ 13 ವರ್ಷ ಪ್ರಾಯದ ಮೊಮಿಜಿ

Momiji Nishiya: ಈ ಬಾರಿಯ ಒಲಂಪಿಕ್ಸ್‌ನಲ್ಲಿ ಹೊಸದಾಗಿ ಆರಂಭಿಸಲಾದ ಸ್ಕೇಟ್‌ ಬೋರ್ಡಿಂಗ್‌ನಲ್ಲಿ ನಿಶಿಯಾ ಟ್ರಿಕ್ಸ್ ವಿಭಾಗದಲ್ಲಿ 15.26 ಅಂಕಗಳಿಸಿ ಚಿನ್ನಕ್ಕೆ ಮುತ್ತಿಟ್ಟರು.

Tokyo Olympics: ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಚಿನ್ನಕ್ಕೆ ಮುತ್ತಿಟ್ಟ 13 ವರ್ಷ ಪ್ರಾಯದ ಮೊಮಿಜಿ
Momiji Nishiya
Follow us
TV9 Web
| Updated By: Vinay Bhat

Updated on: Jul 26, 2021 | 3:31 PM

ಟೋಕಿಯೋ ಒಲಿಂಪಿಕ್ಸ್ (Tokyo Olympics) 2020 ಆರಂಭವಾಗಿ ನಾಲ್ಕು ದಿನವಾಗಿದ್ದು ಭಾರತ ಈವರೆಗೆ ಒಂದು ಪದಕವನ್ನಷ್ಟೆ ಮುಡಿಗೇರಿಸಿಕೊಂಡಿದೆ. ಮಹಿಳೆಯರ 49 ಕೆಜಿ ವೇಟ್ಲಿಫ್ಟಿಂಗ್​ ವಿಭಾಗದಲ್ಲಿ ಮೀರಾಬಾಯಿ ಚಾನು ಅವರು ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ. ಆದರೆ, ಇತ್ತ ಕೇವಲ 13 ವರ್ಷದ ಜಪಾನ್‌ನ ಮೊಮಿಜಿ ನಿಶಿಯಾ (Momiji Nishiya) ಅವರು ಚಿನ್ನಕ್ಕೆ ಮುತ್ತಿಟ್ಟು ತೀವ್ರ ಸಂಚಲನ ಸೃಷ್ಟಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಅತ್ಯಂತ ಕಿರಿಯ ಆಟಗಾರ್ತಿ ಎಂಬ ದಾಖಲೆಯನ್ನು ಮೊಮಿಜಿ ನಿಶಿಯಾ ನಿರ್ಮಿಸಿದ್ದಾರೆ. ಈ ಬಾರಿಯ ಒಲಂಪಿಕ್ಸ್‌ನಲ್ಲಿ ಹೊಸದಾಗಿ ಆರಂಭಿಸಲಾದ ಸ್ಕೇಟ್‌ ಬೋರ್ಡಿಂಗ್‌ನಲ್ಲಿ ನಿಶಿಯಾ ಟ್ರಿಕ್ಸ್ ವಿಭಾಗದಲ್ಲಿ 15.26 ಅಂಕಗಳಿಸಿ ಚಿನ್ನಕ್ಕೆ ಮುತ್ತಿಟ್ಟರು.

ಈ ಮೂಲಕ ಮೊದಲ ಮಹಿಳಾ ಸ್ಕೇಟ್‌ ಬೋರ್ಡಿಂಗ್ ಚಾಂಪಿಯನ್ ನಿಶಿಯಾ ಆಗಿ ಹೊರಹೊಮ್ಮಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಎರಡನೇ ಅತ್ಯಂತ ಕಿರಿಯ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೂ ಮೊದಲು ಬ್ರೆಜಿಲ್‌ನ ರೆಸಾ ಲೀಲ್ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದರು. ಅವರು 13 ವರ್ಷ 203 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು.

ಇತ್ತ ಭಾರತ ಈ ಬಾರಿಯ ಟೋಕಿಯೋ ಒಲಿಂಪಿಕ್ಸ್​ನಲ್ಲಿ ನಿರೀಕ್ಷೆಗೆ ತಕ್ಕಂತೆ ಆಟ ಪ್ರದರ್ಶಿಸುತ್ತಿಲ್ಲ. ಇಂದು ಭಾರತದ ಪುರುಷರ ಟೆನಿಸ್​ನಲ್ಲಿ ಲಿಯಾಂಡರ್ ಪೇಸ್ ಬಳಿಕ ಎರಡನೇ ಸುತ್ತಿಗೇರಿದ ಮೊದಲ ಭಾರತೀಯ ಎಂಬ ಐತಿಹಾಸಿಕ ಸಾಧನೆಯನ್ನು ಸುಮಿತ್ ನಗಾಲ್ ಮಾಡಿದರಿ. ಆದರೆ, ಎರಡನೇ ಸುತ್ತಿನ ಹಣಾಹಣಿಯಲ್ಲಿ ನಗಾಲ್ ಅವರು ವಿಶ್ವ ನಂ. 2 ರ್ಯಾಂಕಿನ ರಷ್ಯಾದ ಡೇನಿಯಲ್ ಮಡ್ವೆಡೆವ್ ವಿರುದ್ಧ 6-2 6-1ರ ಅಂತರದಲ್ಲಿ ಸೋಲು ಅನುಭವಿಸಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಪುರುಷರ ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲೂ ಭಾರತಕ್ಕೆ ನಿರಾಸೆಯಾಗಿದೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್‌ ಎರಡನೇ ಪಂದ್ಯದಲ್ಲಿ ಭಾರತೀಯ ಜೋಡಿ ಸಾತ್ವಿಕ್‌ಸಾಯ್‌ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೋತಿದ್ದಾರೆ. ಇನ್ನೂ ಆರ್ಚರಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ದಕ್ಷಿಣ ಕೊರಿಯಾ ವಿರುದ್ಧ ಸೋಲುಕಂಡು ಪದಕದ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ.

ಈವರೆಗೆ ಅತಿ ಹೆಚ್ಚು ಪದಕ ಗೆದ್ದಿರುವ ಸಾಲಿನಲ್ಲಿ ಚೀನಾ (15 ಪದಕ) ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ 14 ಪದಕದೊಂದಿಗೆ ಅಮೆರಿಕಾ ಇದ್ದರೆ, ಮೂರನೇ ಸ್ಥಾನದಲ್ಲಿ 9 ಪದಕದೊಂದಿಗೆ ಜಪಾನ್ ಇದೆ.

Tokyo Olympics 2020: ಐತಿಹಾಸಿಕ ಸಾಧನೆ ಗೈದು ಒಲಿಂಪಿಕ್ಸ್ ಟೂರ್ನಿಯಿಂದ ಹೊರಬಿದ್ದ ಸುಮಿತ್ ನಗಾಲ್

Tokyo Olympics: ಆರ್ಚರಿಯಲ್ಲಿ ಮತ್ತೆ ನಿರಾಸೆ: ಭಾರತದ ಪದಕದ ಆಸೆಗೆ ತಣ್ಣೀರೆರಚಿದ ದ. ಕೊರಿಯಾ

(Tokyo Olympics Japans Momiji Nishiya 13 years old girl wins skateboarding womens street gold)

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ