Tokyo Olympics 2020: ನಾಲ್ಕನೇ ದಿನ ಭಾರತ ಉತ್ತಮ ಆರಂಭ: ಮುಂದಿನ ಸುತ್ತಿಗೆ ಮನು-ಸೌರಭ್

ಮನು ಭಾಕರ್ ಮತ್ತು ಸೌರಭ್ ಚೌಧರಿ ಜೋಡಿ 10 ಮೀ. ಏರ್ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ 582 ಅಂಕಗಳನ್ನು ಗಳಿಸಿ ಟಾಪ್ 1ನೇ ಸ್ಥಾನವನ್ನು ಪಡೆದುಕೊಂಡರು.

Tokyo Olympics 2020: ನಾಲ್ಕನೇ ದಿನ ಭಾರತ ಉತ್ತಮ ಆರಂಭ: ಮುಂದಿನ ಸುತ್ತಿಗೆ ಮನು-ಸೌರಭ್
Saurabh Chaudhary and Manu Bhaker
Follow us
TV9 Web
| Updated By: Vinay Bhat

Updated on: Jul 27, 2021 | 7:01 AM

ಟೋಕಿಯೋ ಒಲಿಂಪಿಕ್ಸ್​ನ (Tokyo Olympics 2020) ನಾಲ್ಕನೇ ದಿನ ಭಾರತ ಭರ್ಜರಿ ಶುಭಾರಂಭ ಮಾಡಿದೆ. ಮಂಗಳವಾರ ಮುಂಜಾನೆ ನಡೆದ 10 ಮೀಟರ್ ಏರ್ ಪಿಸ್ತೂಲ್ ಮಿಶ್ರಿತ ಗುಂಪು ಹಂತದ ಮೊದಲ ಸುತ್ತಿನ ಪಂದ್ಯದಲ್ಲಿ ಮನು ಭಾಕರ್ ಹಾಗೂ ಸೌರಭ್ ಚೌಧರಿ ಉತ್ತಮ ಆಟ ಪ್ರದರ್ಶಿಸಿದ್ದಾರೆ. 10 ಮೀ. ಏರ್ ಪಿಸ್ತೂಲ್​ನ ಅರ್ಹತಾ ಸುತ್ತಿನಲ್ಲಿ ಈ ಜೋಡಿ ಟಾಪ್ 1ನೇ ಸ್ಥಾನ ಪಡೆದುಕೊಂಡಿದೆ.

ಮೊದಲ ಸುತ್ತಿನಲ್ಲೇ ಪಾಲ್ಗೊಂಡಿದ್ದ ಭಾರತದ ಮತ್ತೊಂದು ಜೋಡಿ ಅಭಿಷೇಕ್ ಶರ್ಮಾ ಮತ್ತು ಯಶಸ್ವಿನಿ ದೆಸ್ವಾಲ್ ನಿರೀಕ್ಷೆಗೆ ತಕ್ಕಂತ ಪ್ರದರ್ಶನ ನೀಡಲಿಲ್ಲ. ಮನು ಭಾಕರ್ ಮತ್ತು ಸೌರಭ್ ಚೌಧರಿ ಜೋಡಿ 10 ಮೀ. ಏರ್ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ 582 ಅಂಕಗಳನ್ನು ಗಳಿಸಿ ಟಾಪ್ 1ನೇ ಸ್ಥಾನವನ್ನು ಪಡೆದುಕೊಂಡರು. ಈ ಮೂಲಕ ಎರಡನೇ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.

ಇತ್ತ ಅಭಿಷೇಕ್ ವರ್ಮಾ ಮತ್ತು ಯಶಸ್ವಿನಿ ದೆಸ್ವಾಲ್ 564 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ 17ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ನಿಯಮದ ಪ್ರಕಾರ ಅರ್ಹತಾ ಸುತ್ತಿನಲ್ಲಿ ಟಾಪ್ 8 ಸ್ಥಾನಗಳನ್ನು ಪಡೆದ ಜೋಡಿಗಳಿಗೆ ಮಾತ್ರ ಎರಡನೇ ಸುತ್ತಿಗೆ ಪ್ರವೇಶ ಪಡೆಯುವ ಅವಕಾಶ ಸಿಗುತ್ತದೆ. ಹೀಗಾಗಿ ಅಭಿಷೇಕ್ ವರ್ಮಾ ಮತ್ತು ಯಶಸ್ವಿನಿ ದೆಸ್ವಾಲ್ ಜೋಡಿ ಸ್ಪರ್ಧೆಯಿಂದ ಹೊರಬಿದ್ದಿದೆ.

ಇನ್ನೊಂದೆಡೆ ಭಾರತ ತಂಡ ಹಾಕಿ ಪಂದ್ಯದಲ್ಲಿ ಸ್ಪೇನ್ ವಿರುದ್ಧ ಸೆಣೆಸಾಡುತ್ತಿದೆ. ಒಲಿಂಪಿಕ್ಸ್​ನ ಚೊಚ್ಚಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಅಂತರದ ಪ್ರಯಾಸಕರ ಗೆಲುವು ದಾಖಲಿಸಿದ್ದ ಮನ್ಪ್ರೀತ್ ಸಿಂಗ್ ಪಡೆ ಎರಡನೇ ಪಂದ್ಯದಲ್ಲಿ ಆಸ್ಸೀಗಳ ವಿರುದ್ಧ 1-7 ಅಂತರದ ಹೀನಾಯ ಸೋಲು ಅನುಭವಿಸಿತ್ತು. ಹೀಗಾಗಿ ಈ ಪಂದ್ಯ ಭಾರತಕ್ಕೆ ಮುಖ್ಯವಾಗಿದೆ.

ಟೊಕಿಯೋ ಒಲಂಪಿಕ್ಸ್ 2020: ಕ್ವಾರ್ಟರ್​ ಫೈನಲ್ ಹಂತ ತಲುಪಬೇಕಾದರೆ ಮಂಗಳವಾರ ಸ್ಪೇನನ್ನು ಭಾರತ ಮಣಿಸಲೇಬೇಕು.

Tokyo Olympics 2020: ಸೋತು ಹತಾಷತರಾದ ಭವಾನಿ ದೇವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯಿಂದ ಸಾಂತ್ವನ

(Tokyo Olympics Saurabh Chaudhary and Manu Bhaker storm pistol mixed team qualifying stage 2)

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ