Tokyo Olympic: ಜಾವೆಲಿನ್ ಥ್ರೋನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ನೀರಜ್ ಚೋಪ್ರಾ

Neeraj Chopra: ನೀರಜ್ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಪ್ರದರ್ಶನ ತೋರಿ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ. ಫೈನಲ್ ಪಂದ್ಯ ಆಗಸ್ಟ್ 7 ರಂದು ನಡೆಯಲಿದೆ.

Tokyo Olympic: ಜಾವೆಲಿನ್ ಥ್ರೋನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ನೀರಜ್ ಚೋಪ್ರಾ
ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಇದು ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಭಾರತದ ಮೊದಲ ಚಿನ್ನದ ಪದಕ ಎಂಬುದು ವಿಶೇಷ. ಹಾಗೆಯೇ ವೈಯುಕ್ತಿಕ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಎರಡನೇ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಕೂಡ ನೀರಜ್​ಗೆ ಸಲ್ಲುತ್ತದೆ. ಇದಕ್ಕೂ ಮೊದಲು, ಅಭಿನವ್ ಬಿಂದ್ರಾ 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಇದೀಗ ನೀರಜ್ ಸಾಧನೆಗೆ ಪ್ರೋತ್ಸಾಹಗಳ ಸುರಿಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಯುವ ಜಾವೆಲಿನ್ ಎಸೆತಗಾರನ ಸಾಧನೆಯನ್ನು ಭಾರತದ ಅಥ್ಲೆಟಿಕ್ಸ್ ಫೆಡರೇಶನ್ ವಿಶೇಷವಾಗಿ ಗೌರವಿಸಿದೆ.
Follow us
TV9 Web
| Updated By: Vinay Bhat

Updated on:Aug 04, 2021 | 7:07 AM

ಟೋಕಿಯೋ ಒಲಿಂಪಿಕ್ಸ್ (Tokyo Olympic) 2020 ರಲ್ಲಿ ಇಂದು ಮುಂಜಾನೆ ನಡೆದ ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತದ ನೀರಜ್ ಚೋಪ್ರಾ (Neeraj Chopra) ಅವರು ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಗ್ರೂಪ್ ಎ ಯಲ್ಲಿ ಸ್ಫರ್ದಿಸಿದ ನೀರಜ್ ಮೊದಲ ಪ್ರಯತ್ನದಲ್ಲೇ 86.65 ಮೀಟರ್ ದೂರದ ಸಾಧನೆ ಮಾಡಿದರು. ಈ ವಿಭಾಗದಲ್ಲಿ ವಿಶ್ವದ ನಂಬರ್ ಒನ್ ಜರ್ಮನಿಯ ಜೊಹಾನ್ಸ್ ವೆಟರ್ 82.04 ಮೀಟರ್ ಸಾಧನೆ ಮಾಡಿದರು. ಆದರೆ, ನೀರಜ್ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಪ್ರದರ್ಶನ ತೋರಿ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ. ಫೈನಲ್ ಪಂದ್ಯ ಆಗಸ್ಟ್ 7 ರಂದು ನಡೆಯಲಿದ್ದು ಭಾರತ ಮತ್ತೊಂದು ಪದಕದ ನಿರೀಕ್ಷೆಯಲ್ಲಿದೆ.

ನೀರಜ್ ಅವರು ಈ ಹಿಂದೆ ಗೋಲ್ಡ್ಕೋಸ್ಟ್​​ನಲ್ಲಿ ನಡೆದಿದ್ದ ಕಾಮನ್ವೆಲ್ತ್ ಮತ್ತು ಜಕಾರ್ತದಲ್ಲಿ ಜರುಗಿದ್ದ ಏಷ್ಯನ್ ಕ್ರೀಡಾಕೂಟಗಳಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದರು. ಭುವನೇಶ್ವರದಲ್ಲಿ ಆಯೋಜನೆಯಾಗಿದ್ದ ಏಷ್ಯನ್ ಚಾಂಪಿಯನ್ಷಿಪ್ ನಲ್ಲೂ ಚಿನ್ನಕ್ಕೆ ಕೊರಳೊಡ್ಡಿದ್ದರು. ಅಂತೆಯೆ ಗುವಾಹಟಿಯಲ್ಲಿ ನಡೆದಿದ್ದ ದಕ್ಷಿಣ ಏಷ್ಯನ್ ಕ್ರೀಡಾಕೂಟ ಮತ್ತು ಪೋಲೆಂಡ್​ನಲ್ಲಿ ನಡೆದಿದ್ದ ವಿಶ್ವ ಜೂನಿಯರ್ ಚಾಂಪಿಯನ್​ಶಿಪ್​ನಲ್ಲಿ ಚಿನ್ನ ಜಯಿಸಿ ಭಾರತದ ಕೀರ್ತಿ ಪತಾಕೆ ಹಾರಿಸಿದ್ದರು.

ನಿನ್ನೆ ನಡೆದ ಮಹಿಳಾ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ನಿರಾಸೆಯಾಯಿತು. ರಾಣಿ ಪದಕದಾಸೆ ಕೈ ಚೆಲ್ಲಿದರು. ಗ್ರೂಪ್ ಹಂತದ ಸ್ಪರ್ಧೇಯಲ್ಲಿ ರಾಣಿ ಫೈನಲ್‌ಗೂ ಅರ್ಹತೆ ಗಿಟ್ಟಿಸಿಕೊಳ್ಳದೆ ಸ್ಪರ್ಧೆ ಮುಗಿಸಿದ್ದಾರೆ. ನೀರಸ ಪ್ರದರ್ಶನದೊಂದಿಗೆ ರಾಣಿ 14ನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಿದ್ದಾರೆ. ಆರಂಭಿಕ ಥ್ರೋನಲ್ಲಿ 50.35 ಮೀಟರ್ ಸಾಧನೆ ತೋರಿದರು. ದ್ವಿತೀಯ ಎಸೆತದ ವೇಳೆ ಕೊಂಚ ಸುಧಾರಣೆ ತೋರಿದರು. ದ್ವಿತೀಯ ಪ್ರಯತ್ನದಲ್ಲಿ ರಾಣಿ 53.19 ಮೀಟರ್ ದೂರದ ಸಾಧನೆ ತೋರಿದರು. ಗ್ರೂಪ್‌ ‘ಎ’ಯಲ್ಲಿದ್ದ ರಾಣಿ ಸೇರಿ ಈ ವಿಭಾಗದಲ್ಲಿ ಒಟ್ಟು 14 ಸ್ಪರ್ಧಿಗಳಿದ್ದರು.

ಸದ್ಯ ಈ ಭಾರಿಯ ಒಲಿಂಪಿಕ್ಸ್​ನಲ್ಲಿ ಭಾರತದ ಕಡೆಯಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿಲ್ಲ. ಈವರೆಗೆ ಕೇವಲ ಎರಡು ಪದಕಗಳನ್ನಷ್ಟೆ ಭಾರತ ಬಾಜಿಕೊಂಡಿದೆ. ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು (49 ಕೆಜಿ ವಿಭಾಗ) ಭಾರತಕ್ಕೆ ಬೆಳ್ಳಿ ಮೆರಗು ತಂದಿದ್ದಾರೆ. ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು ಕಂಚು ಗೆದ್ದಿದ್ದಾರೆ.

ಮಹಿಳೆಯರ 69 ಕೆಜಿ ವಿಭಾಗದ ಬಾಕ್ಸಿಂಗ್ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಲವ್ಲಿನಾ ಬರ್ಗಹೈನ್ ಅವರು ಚೈನೀಸ್ ತೈಪೆಯ ಚೆನ್ ನಿಯೆನ್-ಚಿನ್ ವಿರುದ್ಧ 4-1 ಅಂತರದಲ್ಲಿ ಜಯ ಸಾಧಿಸುವುದರ ಮೂಲಕ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಇದರೊಂದಿಗೆ ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸೆಮಿ ಫೈನಲ್ ಪಂದ್ಯ ನಡೆಯಲಿದೆ.

ಸ್ಟೋಕ್ಸ್ ಅವರಂತೆ ಬೇರೆ ಆಟಗಾರರು ಸಹ ಬಯೊ-ಬಬಲ್ ಬದುಕಿನಿಂದ ಬೇಸತ್ತು ಕ್ರಿಕೆಟ್​ನಿಂದ ಬ್ರೇಕ್ ತೆಗೆದುಕೊಳ್ಳಬಹುದು: ವಿರಾಟ್ ಕೊಹ್ಲಿ

ಕಾಂಗರೂಗಳಿಗೆ ಶಾಕ್​ ಮೇಲೆ ಶಾಕ್; ಮೊದಲ ಟಿ-20 ಯಲ್ಲಿ ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ಆಘಾತ ನೀಡಿದ ಬಾಂಗ್ಲಾದೇಶ

(Tokyo Olympics Updates Neeraj Chopra Qualifies For Mens Javelin Throw Final)

Published On - 6:46 am, Wed, 4 August 21