Tokyo Olympics 2020: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ತಂದಿತ್ತ ಮೀರಾ ಬಾಯಿ

Mirabai Chanu: 49 ಕೆಜಿ ವಿಭಾಗದ ಮಹಿಳಾ ವೇಟ್ಲಿಫ್ಟಿಂಗ್​ನಲ್ಲಿ ಮೀರಾ ಬಾಯಿ ಚಾನು ಬೆಳ್ಳಿ ಗೆದ್ದಿದ್ದಾರೆ.

Tokyo Olympics 2020: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ತಂದಿತ್ತ ಮೀರಾ ಬಾಯಿ
Mirabai Chanu

Updated on: Jul 24, 2021 | 12:36 PM

ಟೋಕಿಯೋ ಒಲಿಂಪಿಕ್ಸ್ 2020 (Tokyo Olympics 2020) ರಲ್ಲಿ ಭಾರತ ದೇಶ ಉತ್ತಮ ಆರಂಭ ಪಡೆದುಕೊಂಡಿದ್ದು, ಚೊಚ್ಚಲ ಪದಕ ಮುಡಿಗೇರಿಸಿಕೊಂಡಿದೆ. 49 ಕೆಜಿ ವಿಭಾಗದ ಮಹಿಳಾ ವೇಟ್ಲಿಫ್ಟಿಂಗ್​ನಲ್ಲಿ ಮೀರಾ ಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಟೋಕಿಯೋ ಒಲಿಂಪಿಕ್ಸ್ 2020ರಲ್ಲಿ ಪದಕದ ಬೇಟೆ ಶುರುಮಾಡಿದೆ. ಒಲಿಂಪಿಕ್ ಇತಿಹಾಸದಲ್ಲಿ ಭಾರತ ಪರ ವೇಟ್ಲಿಫ್ಟಿಂಗ್​ನಲ್ಲಿ ಪದಕ ಗೆದ್ದ ಎರಡನೇ ಕ್ರೀಡಾಪಟು ಮೀರಾ ಬಾಯಿ ಆಗಿದ್ದಾರೆ.

ಮೊದಲ ಪ್ರಯತ್ನದಲ್ಲೇ ಮೀರಾಬಾಯಿ ಚಾನು ಅವರು ಸ್ನ್ಯಾಚ್‌ ವಿಭಾಗದಲ್ಲಿ 84 ಕೆ.ಜಿ ಭಾರವನ್ನು ಲೀಲಾಜಾಲವಾಗಿ ಎತ್ತುವಲ್ಲಿ ಯಶಸ್ವಿಯಾದರು. ಇದಾದ ಬಳಿಕ 87 ಕೆ.ಜಿ. ವೇಟ್‌ ಲಿಫ್ಟ್‌ ಮಾಡುವ ಸ್ಯಾಚ್‌ ಲಿಫ್ಟ್‌ ವಿಭಾಗದಲ್ಲಿ ಎರಡನೇ ಸ್ಥಾನ ಪಡೆದರು. ಇನ್ನು ಚೀನಾದ ಹ್ಯೂ ಜಿಹೈ 94 ಕೆ.ಜಿ ವೇಟ್‌ಲಿಫ್ಟ್‌ ಮಾಡುವ ಮೂಲಕ ಒಲಿಂಪಿಕ್ಸ್‌ ದಾಖಲೆ ಬರೆದಿದ್ದಾರೆ.

ಮೀರಾಬಾಯಿ ಸಾಧನೆಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇದು ಒಲಿಂಪಿಕ್ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ ನಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದಿದ್ದರು. ಅವರು 69 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದರು.

 

ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.

 

 

ಇತ್ತ ಭಾರತ ಹಾಕಿ ತಂಡ ತನ್ನ ಚೊಚ್ಚಲ ಪಂದ್ಯದಲ್ಲೇ ನ್ಯೂಜಿಲೆಂಡ್ ವಿರುದ್ಧ 3-0 ಗೋಲುಗಳ ಅಂತರದಿಂದ ಜಯ ಸಾಧಿಸಿದೆ. 10 ಮೀಟರ್​ನ ಪುರುಷರ ಏರ್ ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಸೌರಭ್ ಚೌಧರಿ (Saurabh Chaudhary) ಅವರು ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತ ಮತ್ತೊಂದು ಪದಕದ ನಿರೀಕ್ಷೆಯಲ್ಲಿದೆ. ಫೈನಲ್ ಪಂದ್ಯ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

Published On - 12:12 pm, Sat, 24 July 21