AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2021: ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ಕೇಜ್ರಿವಾಲ್ ಸರ್ಕಾರ

Tokyo Olympics 2021: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ದೆಹಲಿಯ ಕ್ರೀಡಾಪಟುಗಳಿಗೆ ರೂ. 3 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂ. ಬಹುಮಾನ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ.

Tokyo Olympics 2021: ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ಕೇಜ್ರಿವಾಲ್ ಸರ್ಕಾರ
ಟೊಕಿಯೊ ಒಲಂಪಿಕ್ಸ್ ಲೊಗೊ
TV9 Web
| Edited By: |

Updated on: Jul 10, 2021 | 4:22 PM

Share

ಈ ಬಾರಿ ಒಲಿಂಪಿಕ್ ಕ್ರೀಡಾಕೂಟ ಜಪಾನಿನ ರಾಜಧಾನಿ ಟೋಕಿಯೊದಲ್ಲಿ ನಡೆಯಲಿದೆ. ಜುಲೈ 23 ರಂದು ಒಲಿಂಪಿಕ್ ಕ್ರೀಡಾಕೂಟ ಪ್ರಾರಂಭವಾಗುತ್ತದೆ. ಭಾರತದ ಕುರಿತು ಮಾತನಾಡುವುದಾದರೆ ಅನೇಕ ಆಟಗಾರರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಾರೆ. ಈ ಬಾರಿ ದೆಹಲಿಯ ನಾಲ್ವರು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಈ ಕ್ರೀಡಾಪಟುಗಳಲ್ಲಿ ದೀಪಕ್ ಕುಮಾರ್, ಮಾನಿಕಾ ಬಾತ್ರಾ, ಅಮೋಜ್ ಜಾಕೋಬ್ ಮತ್ತು ಸರ್ತಕ್ ಭಾಂಬ್ರಿ ಸೇರಿದ್ದಾರೆ.

ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ದೆಹಲಿಯ ಕ್ರೀಡಾಪಟುಗಳಿಗೆ ರೂ. 3 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂ. ಬಹುಮಾನ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ. ಇದಲ್ಲದೆ ಪದಕ ಗೆದ್ದ ಕ್ರೀಡಾಪಟುಗಳ ತರಬೇತುದಾರರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿದೆ ಟೋಕಿಯೊ ಒಲಿಂಪಿಕ್ಸ್ ಬಗ್ಗೆ ಜಗತ್ತು ಉತ್ಸುಕವಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ಪ್ರತಿಯೊಂದು ದೇಶವೂ ಪದಕಗಳನ್ನು ಗೆಲ್ಲಲು ಬಯಸುತ್ತದೆ. ಈ ಕಾರಣಕ್ಕಾಗಿ ನಾವು ಬಹುಮಾನದ ಹಣವನ್ನು ಸಹ ಘೋಷಿಸಿದ್ದೇವೆ.

ಕ್ರೀಡಾ ಪ್ರತಿಭೆಗಳಿಗೆ ಆ ವೇದಿಕೆಯನ್ನು ನೀಡುವುದು ನಮ್ಮ ಪ್ರಯತ್ನ ಇಂದು ದೆಹಲಿ ಕ್ರೀಡಾ ವಿಶ್ವವಿದ್ಯಾಲಯದ ಉಪಕುಲಪತಿ ಕರಣ್ ಮಲ್ಲೇಶ್ವರಿ ಅವರೊಂದಿಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದರೆ ಕೇಜ್ರಿವಾಲ್ ಸರ್ಕಾರ ದೆಹಲಿ ಆಟಗಾರರಿಗೆ 3 ಕೋಟಿ ರೂ.ಗಳ ಬಹುಮಾನ ನೀಡಲಿದೆ ಎಂದರು. ಸಿಸೋಡಿಯಾ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿ ಕ್ರೀಡಾ ಪ್ರತಿಭೆಗಳಿಗೆ ಆ ವೇದಿಕೆಯನ್ನು ನೀಡುವುದು ನಮ್ಮ ಪ್ರಯತ್ನ. ಜೊತಗೆ ಇಲ್ಲಿ ಅವರಿಗೆ ಸೌಲಭ್ಯಗಳು ಮತ್ತು ಅವಕಾಶಗಳ ಕೊರತೆಯಿಲ್ಲ ಎಂದು ಬರೆದಿದ್ದಾರೆ. ನಮ್ಮೊಳಗಿನ ಅನೇಕ ಪ್ರತಿಭೆಗಳಿಂದ ಭವಿಷ್ಯದಲ್ಲಿ ಒಲಿಂಪಿಕ್ ಪದಕಗಳನ್ನು ಗೆಲ್ಲುವ ಮೂಲಕ ಭಾರತವು ಪ್ರಪಂಚದಾದ್ಯಂತ ಹೆಸರು ಮಾಡುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು