AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಸೆಕ್ಸ್ ಮಾಡೋಕೆ ಅವಕಾಶವಿಲ್ಲ: ಟೋಕಿಯೊ ಒಲಿಂಪಿಕ್ಸ್​ನಲ್ಲಿ ಒಬ್ಬರಿಗೆ ಒಂದೇ ಬೆಡ್

ಆ್ಯಂಟಿ ಸೆಕ್ಸ್​ ಬೆಡ್​ಗಳನ್ನು ಕಾರ್ಡ್​ಬೋರ್ಡ್​ಗಳಿಂದ ಮಾಡಲ್ಪಟ್ಟಿದೆ. ಅಲ್ಲದೆ ಅದರಲ್ಲಿ ಒಬ್ಬ ವ್ಯಕ್ತಿ ಮಾತ್ರ ಮಲಗಲು ಸಾಧ್ಯವಿದೆ ಮತ್ತು ಒಬ್ಬ ವ್ಯಕ್ತಿಯ ತೂಕವನ್ನು ತಡೆಯುವ ಸಾಮರ್ಥ್ಯವಿದೆ.

Tokyo Olympics: ಸೆಕ್ಸ್ ಮಾಡೋಕೆ ಅವಕಾಶವಿಲ್ಲ: ಟೋಕಿಯೊ ಒಲಿಂಪಿಕ್ಸ್​ನಲ್ಲಿ ಒಬ್ಬರಿಗೆ ಒಂದೇ ಬೆಡ್
Anti-sex beds in Tokyo Olympics
TV9 Web
| Updated By: Vinay Bhat|

Updated on:Jul 19, 2021 | 12:16 PM

Share

ಜುಲೈ 23ರಂದು ಬಹುನಿರೀಕ್ಷಿತ ಟೋಕಿಯೊ ಒಲಿಂಪಿಕ್ಸ್ (Tokyo Olympics)​ ಆರಂಭವಾಗಲಿದೆ. ಆದರೆ ಈ ಹಿಂದೆ ಇದ್ದಷ್ಟು ಸೌಕರ್ಯಗಳೊಂದಿಗೆ ಈ ಬಾರಿಯ ಒಲಿಂಪಿಕ್ಸ್​ ಇರುವುದಿಲ್ಲ. ಕೊರೋನಾದಿಂದ ಕೆಲವೊಂದು ಮಾರ್ಪಾಡು ಮಾಡಲಾಗಿದ್ದು, ಅದರಲ್ಲಿ ಮುಖ್ಯವಾಗಿ ಕ್ರೀಡಾಪಟುಗಳಿಗೆ ಆ್ಯಂಟಿ ಸೆಕ್ಸ್​ ಬೆಡ್ (Anti-sex beds)​ ನೀಡಿರುವುದೂ ಎಲ್ಲರ ಆಸಕ್ತಿ ಕೆರಳಿಸುತ್ತಿದೆ.

ಕ್ರೀಡಾಪಟುಗಳು ಲೈಂಗಿಕಾಸಕ್ತಿ ತೋರದೆ ಕೇವಲ ಕ್ರೀಡಾಸ್ಪರ್ಧೆಗಳತ್ತ ಗಮನ ಹರಿಸಲಿ ಎಂಬ ಉದ್ದೇಶವನ್ನು ಇಟ್ಟುಕೊಂಡು ಟೋಕಿಯೊ ಒಲಿಂಪಿಕ್ ಕ್ರೀಡಾ ಗ್ರಾಮದಲ್ಲಿ ಆ್ಯಂಟಿ-ಸೆಕ್ಸ್ ಬೆಡ್​​ಗಳನ್ನು ಅಳವಡಿಸಲಾಗಿದೆ. ಕ್ರೀಡಾಪಟುಗಳು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೊರೋನಾ ಹರಡುವಿಕೆಯ ಭೀತಿಯಿಂದ ದೂರವಿರಲಿ ಎಂಬುದು ಇದರ ಉದ್ದೇಶವಾಗಿದೆ.

ವಿಶೇಷವಾಗಿ ಈ ಆ್ಯಂಟಿ ಸೆಕ್ಸ್​ ಬೆಡ್​ಗಳನ್ನು ಕಾರ್ಡ್​ಬೋರ್ಡ್​ಗಳಿಂದ ಮಾಡಲ್ಪಟ್ಟಿದೆ. ಅಲ್ಲದೆ ಅದರಲ್ಲಿ ಒಬ್ಬ ವ್ಯಕ್ತಿ ಮಾತ್ರ ಮಲಗಲು ಸಾಧ್ಯವಿದೆ ಮತ್ತು ಒಬ್ಬ ವ್ಯಕ್ತಿಯ ತೂಕವನ್ನು ತಡೆಯುವ ಸಾಮರ್ಥ್ಯವಿದೆ. ಬೇರೊಬ್ಬರು ಸೇರಿದಂತೆ ಅಥವಾ ಯಾವುದೇ ಹಠಾತ್ ಚಲನೆಗಳಾದರೆ ಈ ಹಾಸಿಗೆಗಳು ಮುರಿಯುವ ನಿರೀಕ್ಷೆಯಿದೆ. ಹಾಗಾಗಿ ಈ ಬಾರಿ ಕ್ರೀಡಾಪಟುಗಳಿಗೆ ಪ್ರಣಯಕ್ಕೆ ಬ್ರೇಕ್ ಹಾಕಲಾಗಿದೆ.

ಇನ್ನೂ ಒಂದು ವೇಳೆ ಕೊರೊನಾ ನಿಯಮಗಳನ್ನು ಪಾಲಿಸದಿದ್ದರೆ ಅಥವಾ ದೈಹಿಕ ಅಂತರ ಅನುಸರಿಸದಿದ್ದರೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಅನರ್ಹಗೊಳಿಸಲಾಗುತ್ತದೆ ಅಥವಾ ಹೊರಹಾಕಲಾಗುವುದು ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಎಚ್ಚರಿಸಿದೆ.

ಇತ್ತ ಕಾರ್ಡ್​​ಬೋರ್ಡ್​ನಿಂದ ಮಾಡಿದ ಮಂಚವನ್ನು ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಅಮೆರಿಕಾದ ಓಟಗಾರ ಪೌಲ್​ ಕೆಲಿಮೋ ತನಗೆ ನೀಡಿರುವ ಕಾರ್ಡ್​​ಬೋರ್ಡ್​​​ ಮಂಚದ ಫೋಟೋಗಳನ್ನು ಟ್ವಿಟ್ಟರ್​ನಲ್ಲಿ ಶೇರ್​​ ಮಾಡಿದ್ದಾರೆ. ಇಂಥ ಬೆಡ್​ಗಳ ಮೇಲೆ ಸೆಕ್ಸ್​ ಮಾಡುವುದು ನಿಜಕ್ಕೂ ಅಪಾಯಕಾರಿ. ಇನ್ಮುಂದೆ ನೆಲದ ಮೇಲೆ ಮಲಗುವುದನ್ನು ಅಭ್ಯಾಸ ಮಾಡಿಕೊಳ್ಳುತ್ತೇನೆ. ಇದರಲ್ಲಿ ನೆಮ್ಮದಿಯಾಗಿ ಮಲಗಲು ಸಾಧ್ಯವಾಗಲ್ಲ ಎಂದು ಪೌಲ್​ ದೂರಿದ್ದಾರೆ.

ಅಲ್ಲದೆ ಈ ಬಾರಿ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಸುಮಾರು 11 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳಿಗೆ ತಲಾ 14ರಂತೆ ಒಟ್ಟಾರೆ 1.60 ಲಕ್ಷ ಕಾಂಡೋಮ್‌ಗಳನ್ನು ಸಂಘಟಕರು ವಿತರಿಸಲಿದ್ದಾರೆ. ಆದರೆ ಕ್ರೀಡಾಪಟುಗಳು ಅದನ್ನು ಒಲಿಂಪಿಕ್ಸ್ ಗ್ರಾಮದಲ್ಲಿ ಬಳಸಬಾರದು. ಸ್ಮರಣಿಕೆಗಳ ರೀತಿಯಲ್ಲಿ ತವರಿಗೆ ಕೊಂಡೊಯ್ಯಿರಿ ಎಂದು ಐಒಸಿ ಸೂಚಿಸಿದೆ.

ಕ್ರಿಕೆಟ್ ಇತಿಹಾಸದಲ್ಲೇ ಅತಿ ದೊಡ್ಡ ಸಿಕ್ಸ್: ಲಿವಿಂಗ್​ಸ್ಟನ್ ಚೆಂಡನ್ನ ಸಿಕ್ಸ್​ಗೆ ಅಟ್ಟಿದ ವಿಡಿಯೋ ಇಲ್ಲಿದೆ ನೋಡಿ

ಕ್ವಾರಂಟೈನ್ ನಿಯಮ ಉಲ್ಲಂಘನೆ: ಬ್ರಿಟಿಷ್ ವೀಕ್ಷಕ ವಿವರಣೆಗಾರ್ತಿ ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದಿಂದ ಗಡಿಪಾರು

(Tokyo Olympics Anti-sex beds in Tokyo Olympics American sprinter shares images)

Published On - 12:16 pm, Mon, 19 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ