AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಫೆನ್ಸಿಂಗ್‌ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳೆ ಭವಾನಿ ದೇವಿ!

Tokyo Olympics: ಭಾರತದಿಂದ ಫೆನ್ಸಿಂಗ್‌ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್​ಗೆ ತೆರಳುತ್ತಿರುವ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ವಿಶ್ವ ಶ್ರೇಯಾಂಕದ ಆಧಾರದ ಮೇಲೆ ಭಾವನಿಗೆ ಟೋಕಿಯೊ ಒಲಿಂಪಿಕ್ಸ್‌ಗೆ ಟಿಕೆಟ್ ಸಿಕ್ಕಿದೆ.

Tokyo Olympics: ಫೆನ್ಸಿಂಗ್‌ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳೆ ಭವಾನಿ ದೇವಿ!
ಭವಾನಿ ದೇವಿ
ಪೃಥ್ವಿಶಂಕರ
|

Updated on:Mar 15, 2021 | 12:30 PM

Share

ಜಪಾನ್‌ನಲ್ಲಿ ನಡೆಯುವ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಮೂಲಕ ಭಾರತದ ಫೆನ್ಸಿಂಗ್‌ ಪಟು ಸಿಎ ಭವಾನಿ ದೇವಿ ಇತಿಹಾಸ ಸೃಷ್ಟಿಸಿದ್ದಾರೆ. ಜೊತೆಗೆ ಭಾರತದಿಂದ ಫೆನ್ಸಿಂಗ್‌ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್​ಗೆ ತೆರಳುತ್ತಿರುವ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ವಿಶ್ವ ಶ್ರೇಯಾಂಕದ ಆಧಾರದ ಮೇಲೆ ಭವಾನಿಗೆ ಟೋಕಿಯೊ ಒಲಿಂಪಿಕ್ಸ್‌ಗೆ ಟಿಕೆಟ್ ಸಿಕ್ಕಿದೆ. ಭವಾನಿ ದೇವಿ ಫೆನ್ಸಿಂಗ್‌ನ ಸಬರ್ ಈವೆಂಟ್‌ನಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಮೂಲತಃ ಚೆನ್ನೈನವರಾದ ಭವಾನಿ ಅವರು 2004 ರಲ್ಲಿಯೇ ತಾವು ಓದುತ್ತಿದ್ದ ಶಾಲೆಯಲ್ಲಿ ಫೆನ್ಸಿಂಗ್‌ ತರಬೇತಿಯನ್ನು ಆರಂಭಿಸಿದ್ದರು.

ಎಂಟು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಾರೆ.. ಇಟಲಿಯಲ್ಲಿ ಅನೇಕ ಚಿನ್ನದ ಪದಕ ವಿಜೇತರಿಗೆ ತರಬೇತಿ ನೀಡಿದ ನಿಕೋಲಾ ಜಾನೊಟ್ಟಿ ಅವರ ಬಳಿ ಭವಾನಿ 2016 ರಿಂದ ತರಬೇತಿ ಪಡೆಯುತ್ತಿದ್ದಾರೆ. 2004 ರಲ್ಲಿ ಫೆನ್ಸಿಂಗ್ ಪ್ರಾರಂಭಿಸಿದ ಭವಾನಿ ಎಂಟು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಾರೆ. 2016 ರಲ್ಲಿ ರಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ತೀರ ಸನಿಹದಲ್ಲಿದ್ದ ಭವಾನಿ ಅಂತಿಮ ಹಂತದಲ್ಲಿ ವಿಫಲರಾಗಿದ್ದರು.

2010 ರಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು.. 10 ನೇ ತರಗತಿಯ ನಂತರ ಕೇರಳದ ತಲಶೇರಿಯಲ್ಲಿರುವ ಸಾಯಿ ಕೇಂದ್ರದಲ್ಲಿ ತರಬೇತಿ ಪ್ರಾರಂಭಿಸಿದ ಭವಾನಿ. ತನ್ನ 14 ನೇ ವಯಸ್ಸಿನಲ್ಲಿ ಟರ್ಕಿಯಲ್ಲಿ ನಡೆದಿದ್ದ ತನ್ನ ಮೊದಲ ಅಂತರರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಆದರೆ ಪಂದ್ಯಾವಳಿ ನಡೆಯುವ ಸ್ಥಳಕ್ಕೆ ತಡವಾಗಿ ಬಂದ ಕಾರಣ ಕಪ್ಪು ಕಾರ್ಡ್‌ ತೋರಿಸಿ ಅವರನ್ನು ಅಲ್ಲಿಂದ ವಾಪಸ್ ಕಳುಹಿಸಲಾಯಿತು. ಹಾಗಾಗಿ 2010 ರಲ್ಲಿ ಫಿಲಿಪೈನ್ಸ್‌ನಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದರು.

ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅಭಿನಂದನೆ.. ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಭವಾನಿ ದೇವಿ ಅವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದನ್ನು ಅಭಿನಂದಿಸಿದರು. “ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಭಾರತೀಯ ಫೆನ್ಸರ್ ಭವಾನಿ ದೇವಿ ಅವರಿಗೆ ಅಭಿನಂದನೆಗಳು! ಈ ಸಾಧನೆ ಮಾಡಿದ ಮೊದಲ ಭಾರತೀಯ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಖ್ಯಾತ ಮಹಿಳಾ ಓಟಗಾರ್ತಿ ಸೇರಿದಂತೆ ಭಾರತದ ಇಬ್ಬರು ಅಥ್ಲೀಟ್​ಗಳು ಡೋಪಿಂಗ್ ಟೆಸ್ಟ್​ನಲ್ಲಿ ವಿಫಲ

Published On - 12:29 pm, Mon, 15 March 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು