Tokyo Olympics: ಟೋಕಿಯೋ ತಲುಪಿದ ಭಾರತದ ಮೊದಲ ತಂಡ; 54 ಅಥ್ಲೀಟ್​ಗಳಿಗೆ ಶುಭ ಹಾರೈಸಿದ ಅನುರಾಗ್ ಠಾಕೂರ್

Tokyo Olympics: 8 ಕ್ರೀಡೆಗಳ ಅಂದರೆ ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಗೆ ಸಂಬಂಧಿಸಿದ ಅಥ್ಲೀಟ್ ಗಳು ಮತ್ತು ಬೆಂಬಲ ಸಿಬ್ಬಂದಿ ನಿನ್ನೆ ರಾತ್ರಿ ನವದೆಹಲಿಯಿಂದ ಟೋಕಿಯೋಗೆ ಪ್ರಯಾಣ ಬೆಳೆಸಿದರು.

Tokyo Olympics: ಟೋಕಿಯೋ ತಲುಪಿದ ಭಾರತದ ಮೊದಲ ತಂಡ; 54 ಅಥ್ಲೀಟ್​ಗಳಿಗೆ ಶುಭ ಹಾರೈಸಿದ ಅನುರಾಗ್ ಠಾಕೂರ್
ಟೋಕಿಯೋ ತಲುಪಿದ ಭಾರತದ ಮೊದಲ ತಂಡ;
Follow us
TV9 Web
| Updated By: ಪೃಥ್ವಿಶಂಕರ

Updated on: Jul 18, 2021 | 6:16 PM

ಬಹು ನಿರೀಕ್ಷಿತ ಟೋಕಿಯೊ ಒಲಂಪಿಕ್ಸ್​ಗೆ ಭಾರತದ ಮೊದಲ ತಂಡ ಅಂದರೆ 54 ಅಥ್ಲೀಟ್​ಗಳೂ ಸೇರಿದಂತೆ 88 ಸದಸ್ಯರ ಭಾರತದ ತಂಡ ಟೋಕಿಯೋದ ನರಿಟಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ತಲುಪಿದೆ. ಕುರ್ಬೆ ನಗರದ ಪ್ರತಿನಿಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ತಂಡವನ್ನು ಬರಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಉಸ್ತುವಾರಿಗಳು ಮಾಹಿತಿ ನೀಡಿದ್ದಾರೆ. ನಿನ್ನೆ ರಾತ್ರಿ ಇಂದಿರಾಗಾಂಧೀ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವ ಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವ ನಿಶಿತ್ ಪ್ರಮಾಣಿಕ್ ಅವರು, ತಂಡಕ್ಕೆ ಔಪಚಾರಿಕ ಬೀಳ್ಕೊಡುಗೆ ನೀಡಿ, ಶುಭ ಕೋರಿದ್ದರು.

ಟೋಕಿಯೋ ಒಲಿಂಪಿಕ್ಸ್ ಗೆ 127 ಅಥ್ಲೀಟ್​ಗಳು 8 ಕ್ರೀಡೆಗಳ ಅಂದರೆ ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಗೆ ಸಂಬಂಧಿಸಿದ ಅಥ್ಲೀಟ್ ಗಳು ಮತ್ತು ಬೆಂಬಲ ಸಿಬ್ಬಂದಿ ನಿನ್ನೆ ರಾತ್ರಿ ನವದೆಹಲಿಯಿಂದ ಟೋಕಿಯೋಗೆ ಪ್ರಯಾಣ ಬೆಳೆಸಿದರು. ಟೋಕಿಯೋ ಒಲಿಂಪಿಕ್ಸ್ ಗೆ 127 ಅಥ್ಲೀಟ್ ಗಳು ಹೋಗುತ್ತಿದ್ದು, ಇದು ಒಲಿಂಪಿಕ್ಸ್ ಗೆ ತೆರಳಿದ ಭಾರತದ ಅತಿ ದೊಡ್ಡ ಕ್ರೀಡಾಪಟುಗಳ ತಂಡವಾಗಿದೆ.

ಅನುರಾಗ್ ಠಾಕೂರ್ ಶುಭ ಹಾರೈಕೆ ಭಾರತ ತಂಡದೊಂದಿಗೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವೇಳೆ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಟೋಕಿಯೋ ಒಲಿಂಪಿಕ್ಸ್ 2020 ದೇಶಕ್ಕೆ ಒಂದು ಸ್ಮರಣಾರ್ಹ ಸಂದರ್ಭವಾಗಿದೆ 135 ಕೋಟಿ ಜನರ ಶುಭ ಹಾರೈಕೆ ಪಾಲ್ಗೊಳ್ಳುತ್ತಿರುವ ಎಲ್ಲ ಕ್ರೀಡಾಪಟುಗಳ ಮೇಲಿದೆ ಎಂದರು. ಇಂತಹ ಶ್ರೇಷ್ಠ ಅವಕಾಶ ಪಡೆದ ಆಯ್ದ ಕೆಲವೇ ಕೆಲವರಲ್ಲಿ ನೀವೂ ಸೇರಿದ್ದೀರಿ, ನೀವು ಜೀವನದಲ್ಲಿ ಇನ್ನೂ ದೂರ ಸಾಗಬೇಕಾಗಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಲಹೆ ಮಾಡಿರುವಂತೆ ಒತ್ತಡಕ್ಕೆ ಒಳಗಾಗದೆ ನಿಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಎಂದು ತಿಳಿಸಿದರು. ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುವಾಗ ಅಥ್ಲೀಟ್ ಗಳು ಸದೃಢರಾಗಿರಬೇಕು, ಇದು ತಂತ್ರಗಾರಿಕೆ ಆಧರಿಸಿರುವಂತಹುದು ಮತ್ತು ಅಂತಿಮವಾಗಿ ಮನೋಬಲದ ಸಮರ, ಇದು ಅವರ ಪ್ರದರ್ಶನದಲ್ಲಿ ಪ್ರತಿಬಿಂಬಿತವಾಗುತ್ತದೆ ಎಂದರು.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ