ಹೃದಯ ಸಂಬಂಧಿ ಕಾಯಿಲೆ; ಏಮ್ಸ್‌ ಆಸ್ಪತ್ರೆಗೆ ದಾಖಲಾದ ಪ್ಯಾರಾಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಶರದ್ ಕುಮಾರ್

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಅವರನ್ನು ಈ ವಾರದ ಆರಂಭದಲ್ಲಿ ಬಿಡುಗಡೆ ಮಾಡಲಾಯಿತು. ಆದರೆ ಕೆಲವು ಪರೀಕ್ಷೆಗಳಿಗಾಗಿ ಮರಳಿ ಅವರು ಆಸ್ಪತ್ರೆಗೆ ಬರಬೇಕಾಯಿತು.

ಹೃದಯ ಸಂಬಂಧಿ ಕಾಯಿಲೆ; ಏಮ್ಸ್‌ ಆಸ್ಪತ್ರೆಗೆ ದಾಖಲಾದ ಪ್ಯಾರಾಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಶರದ್ ಕುಮಾರ್
ಪ್ಯಾರಾಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಶರದ್ ಕುಮಾರ್
Follow us
TV9 Web
| Updated By: ಪೃಥ್ವಿಶಂಕರ

Updated on: Sep 23, 2021 | 6:21 PM

ಟೋಕಿಯೊ ಪ್ಯಾರಾಲಿಂಪಿಕ್ಸ್ -2020 ರಲ್ಲಿ ಭಾರತಕ್ಕೆ ಕಂಚಿನ ಪದಕ ಜಯಿಸಿದ ಹೈ ಜಂಪರ್ ಶರದ್ ಕುಮಾರ್ ಹೃದಯದಲ್ಲಿನ ಪಾರ್ಶ್ವವಾಯುವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಲಾಗಿದ್ದು ಈ ಪರೀಕ್ಷೆಗಳ ವರದಿಗಳು ಇನ್ನೂ ಬರಬೇಕಿದೆ. ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್‌ನಲ್ಲಿ ಕುಮಾರ್ ಟಿ -42 ಹೈಜಂಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದರು. ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರಿಗೆ ಹೃದಯ ಸಮಸ್ಯೆ ಇರುವುದು ಪತ್ತೆಯಾಗಿತ್ತು.

ಪಾಟ್ನಾದಲ್ಲಿ ಜನಿಸಿದ ಕುಮಾರ್ ದೆಹಲಿಯ ಛತರ್‌ಪುರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಅವರನ್ನು ಈ ವಾರದ ಆರಂಭದಲ್ಲಿ ಬಿಡುಗಡೆ ಮಾಡಲಾಯಿತು. ಆದರೆ ಕೆಲವು ಪರೀಕ್ಷೆಗಳಿಗಾಗಿ ಮರಳಿ ಅವರು ಆಸ್ಪತ್ರೆಗೆ ಬರಬೇಕಾಯಿತು.ಈ ಬಗ್ಗೆ ಮಾತನಾಡಿದ ಕುಮಾರ್, ನಾನು ಹೆಚ್ಚಿನ ಪರೀಕ್ಷೆಗಳಿಗಾಗಿ ಇಲ್ಲಿಗೆ ಬಂದಿದ್ದೇನೆ. ನಾನು ಆಸ್ಪತ್ರೆಯಿಂದ ಕೊಂಚ ದೂರದಲ್ಲಿ ವಾಸಿಸುತ್ತಿದ್ದೇನೆ, ಹಾಗಾಗಿ ನಾನು ಮನೆಗೆ ಹೋಗಲು ಆಸ್ಪತ್ರೆಯ ಅಧಿಕಾರಿಗಳಿಂದ ಅನುಮತಿ ಕೋರಿದ್ದೆ ಎಂದಿದ್ದಾರೆ.

ಬಾಲ್ಯದಲ್ಲಿ ಪೋಲಿಯೊ ಕುಮಾರ್ ಅವರ ಬಾಲ್ಯದಲ್ಲಿ ತಪ್ಪು ಪೋಲಿಯೋ ಔಷಧದಿಂದಾಗಿ ಎಡಗಾಲಿನಲ್ಲಿ ಪಾರ್ಶ್ವವಾಯುವಿಗೆ ಒಳಗಾಗಿದ್ದರು. ಅವರು ಕಳೆದ ತಿಂಗಳು ಟೋಕಿಯೊದಲ್ಲಿ ನಡೆದ ಟಿ -42 ಫೈನಲ್‌ನಲ್ಲಿ ತಮ್ಮ ಕಾರ್ಯಕ್ರಮಕ್ಕೆ ಮುನ್ನ ತರಬೇತಿಯ ವೇಳೆ ಮೊಣಕಾಲಿನ ಗಾಯಕ್ಕೆ ತುತ್ತಾದರು. ಗಾಯದ ಕಾರಣದಿಂದ ಸ್ಪರ್ಧೆಯಿಂದ ಹಿಂದೆ ಸರಿಯುವ ಆಲೋಚನೆಯಲ್ಲಿದ್ದರು. ಆದರೆ ಇದನ್ನೇಲ್ಲ ಮೆಟ್ಟಿ ನಿಂತ ಕುಮಾರ್ ಒಲಂಪಿಕ್ಸ್​ನಲ್ಲಿ 1.83 ಮೀಟರ್ ನ ಜಿಗಿತದೊಂದಿಗೆ ಕಂಚಿನ ಪದಕವನ್ನು ಗೆದ್ದರು. 2014 ಮತ್ತು 2018 ರ ಏಷ್ಯನ್ ಪ್ಯಾರಾ ಗೇಮ್ಸ್​ನಲ್ಲಿ ಚಾಂಪಿಯನ್ ಆದರು. 2019 ರಲ್ಲಿ, ಅವರು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದರು.

ಖೇಲ್ ರತ್ನಕ್ಕೆ ನಾಮನಿರ್ದೇಶನಗೊಂಡಿದ್ದಾರೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗಾಗಿ ಭಾರತದ ಪ್ಯಾರಾಲಿಂಪಿಕ್ ಸಮಿತಿಯು (ಪಿಸಿಐ) ಕಳುಹಿಸಿದ ಆಟಗಾರರಲ್ಲಿ ಶರತ್ ಕೂಡ ಒಬ್ಬರು. ಅವರನ್ನು ಹೊರತುಪಡಿಸಿ, ಶೂಟರ್ ಮನೀಶ್ ನರ್ವಾಲ್, ಬ್ಯಾಡ್ಮಿಂಟನ್ ಆಟಗಾರ ಪ್ರಮೋಜ್ ಭಗತ್, ಜಾವೆಲಿನ್ ಎಸೆತಗಾರ ಸುಂದರ್ ಸಿಂಗ್ ಗುರ್ಜರ್ ಅವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ.

ವೃತ್ತಿ ಜೀವನ ಹೀಗಿದೆ 2010 ರಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಶರದ್ ತನ್ನ ಅಂತರಾಷ್ಟ್ರೀಯ ಪಾದಾರ್ಪಣೆ ಮಾಡಿದರು. ಅವರು 2012 ರಲ್ಲಿ ಲಂಡನ್ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಗಳಿಸುವಲ್ಲಿ ಯಶಸ್ವಿಯಾದರು. 19 ನೇ ವಯಸ್ಸಿನಲ್ಲಿ, ಅವರು ನಂ .1 ಶ್ರೇಯಾಂಕಿತ ಆಟಗಾರರಾದರು, ಆದರೆ ಡೋಪ್ ಪರೀಕ್ಷೆಯಲ್ಲಿ ವಿಫಲವಾದ ಕಾರಣ ಲಂಡನ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಅವರು 2014 ರಲ್ಲಿ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಗೆದ್ದರು.

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?