ಕರ್ನಾಟಕದ ಜನತೆಯ ಪ್ರೀತಿಗೆ ನಾನು ಆಭಾರಿ; ಪದಕದೊಂದಿಗೆ ದೆಹಲಿಗೆ ಬಂದಿಳಿದ ಸುಹಾಸ್ ಮೊದಲ ಮಾತು

Tokyo paralympics: ಕರ್ನಾಟಕದ ಜನತೆ ಕೈಮುಗಿದು ಧನ್ಯವಾದ ಹೇಳುತ್ತೇನೆ. ಏನ್ ಹೇಳಬೇಕು ಅಂತಾ ಗೊತ್ತಾಗಿತ್ತಿಲ್ಲ. ಸಿಎಂ ಹಾಗೂ ಶಿವಮೊಗ್ಗದ ಜನರಿಗೆ ತಲೆಬಾಗಿ ವಂದಿಸುತ್ತೇನೆ. ಬೇಗನೇ ಪ್ಲಾನ್ ಮಾಡಿಕೊಂಡು ಕರ್ನಾಟಕಕ್ಕೆ ಬರುತ್ತೇನೆ.

ಕರ್ನಾಟಕದ ಜನತೆಯ ಪ್ರೀತಿಗೆ ನಾನು ಆಭಾರಿ; ಪದಕದೊಂದಿಗೆ ದೆಹಲಿಗೆ ಬಂದಿಳಿದ ಸುಹಾಸ್ ಮೊದಲ ಮಾತು
ಸುಹಾಸ್ ಎಲ್​ ವೈ
Follow us
TV9 Web
| Updated By: ಪೃಥ್ವಿಶಂಕರ

Updated on:Sep 06, 2021 | 6:24 PM

ಜಪಾನ್​ನ ಟೋಕಿಯೊದಲ್ಲಿ ನಡೆದ ಪ್ಯಾರಾಲಂಪಿಕ್​ನಲ್ಲಿ ಬ್ಯಾಡ್ಮಿಂಟನ್​ ಫೈನಲ್ ಮ್ಯಾಚ್​ನಲ್ಲಿ ಫ್ರಾನ್ಸ್​ನ ಸ್ಪರ್ಧಿ ವಿರುದ್ಧ ವೀರೋಚಿತ ಪರಾಜಯವಾದರೂ ಬೆಳ್ಳಿ ಪದಕಕ್ಕೆ ಮುತ್ತಿಟ್ಟು ಭಾರತಕ್ಕೆ ಕೀರ್ತಿ ತಂದಿದ್ದ ಸುಹಾಸ್ ಭಾರತಕ್ಕೆ ವಾಪಸ್ಸಾಗಿದ್ದಾರೆ. ಇಂದು ದೆಹಲಿಗೆ ಬಂದಿಳಿದ ಸುಹಾಸ್ ತಾಯ್ನಾಡಿನ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಈ ಬಗ್ಗೆ ಟಿವಿ9 ವಾಹಿನಿಯೊಂದಿಗೆ ಮಾತನಾಡಿದ ಸುಹಾಸ್, ಕರ್ನಾಟಕದ ಜನತೆಯ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಶಿವಮೊಗ್ಗದಲ್ಲಿ ಓದಬೇಕಾದ್ರೆ ಹೀಗೆಲ್ಲ ಆಗುತ್ತೆ ಅಂತ ಅಂದುಕೊಂಡಿರಿಲ್ಲ. ಮೆಡಲ್ ತೆಗೆದುಕೊಳ್ಳುವ ಅವಕಾಶ ಸಿಕ್ಕಿದೆ. ಇದು ವ್ಯಕ್ತಿಯ ಜೀವನದಲ್ಲಿ ಅತ್ಯಂತ ಮಹತ್ವದ್ದು ಎಂದಿದ್ದಾರೆ.

ಕರ್ನಾಟಕದ ಜನತೆ ಕೈಮುಗಿದು ಧನ್ಯವಾದ ಹೇಳುತ್ತೇನೆ. ಏನ್ ಹೇಳಬೇಕು ಅಂತಾ ಗೊತ್ತಾಗಿತ್ತಿಲ್ಲ. ಸಿಎಂ ಹಾಗೂ ಶಿವಮೊಗ್ಗದ ಜನರಿಗೆ ತಲೆಬಾಗಿ ವಂದಿಸುತ್ತೇನೆ. ಬೇಗನೇ ಪ್ಲಾನ್ ಮಾಡಿಕೊಂಡು ಕರ್ನಾಟಕಕ್ಕೆ ಬರುತ್ತೇನೆ. ಬೇಗನೆ ಬರಬೇಕು ಎನ್ನುವ ತುಡಿತ ,ಆಸೆ ಇದೆ ಎಂದು ನವದೆಹಲಿ ಏರ್ ಪೋರ್ಟ್​ನಲ್ಲಿ ಟಿವಿ9 ಗೆ ಐಎಎಸ್ ಅಧಿಕಾರಿ ಸುಹಾಸ್ ಪ್ರತಿಕ್ರಿಯೆ ನೀಡಿದ್ದಾರೆ.

ಪಂದ್ಯದ ವಿವರ ಸಾಕಷ್ಟು ರೋಚಕತೆ ಸೃಷ್ಟಿಸಿದ ಪಂದ್ಯದ ಮೊದಲ ಸೆಟ್​ನಲ್ಲೇ ಸುಹಾಸ್ 21-15 ಮುನ್ನಡೆ ಪಡೆದುಕೊಂಡು ಚೊಚ್ಚಲ ಅಂಕ ಸಂಪಾದಿಸಿದರು. ಎರಡನೇ ರೌಂಡ್​ನಲ್ಲೂ ಎದುರಾಳಿ 17-21 ಮುನ್ನಡೆ ಪಡೆದುಕೊಂಡ ಪರಿಣಾಮ 1-1 ಅಂತರದ ಸಮಬಲವಾಯಿತು. ಇಲ್ಲಿಂದ ಪಂದ್ಯ ಮತ್ತಷ್ಟು ರೋಚಕತೆ ಸೃಷ್ಟಿಸಿತು. ಅಂತಿಮವಾಗಿ ಮೂರನೇ ಸೆಟ್​ನಲ್ಲಿ ಸುಹಾಸ್ 15-21 ಅಂಕಗಳ ಹಿನ್ನಡೆ ಸಾಧಿಸಿ 1-2 ಸೆಟ್​ಗಳ ಅಂತರದಿಂದ ಸೋತ ಪರಿಣಾಮ ಬೆಳ್ಳಿ ಪದಕ ತಮ್ಮದಾಗಿಸಿದರು. ಇದಕ್ಕೂ ಮುನ್ನ ಶನಿವಾರ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಸುಹಾಸ್ ಅವರು ಇಂಡೋನೇಷ್ಯಾದ ಫ್ರೆಡಿ ಸೆಟಿಯಾವನ್ ವಿರುದ್ಧ 21-9, 21-15ರ ಅಂತರದಲ್ಲಿ ಗೆಲುವು ದಾಖಲಿಸಿದ್ದರು.

ಎಲ್.ವೈ.ಸುಹಾಸ್ ಅವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯವರು. ಸದ್ಯ ಉತ್ತರಪ್ರದೇಶದ ನೋಯ್ಡಾ ಡಿಸಿ ಆಗಿ ಸುಹಾಸ್ ಸೇವೆ ಸಲ್ಲಿಸುತ್ತಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮೊದಲ ಐಎಎಸ್ ಅಧಿಕಾರಿ ಸುಹಾಸ್ ಆಗಿದ್ದಾರೆ. ಕರ್ನಾಟಕದ ಹಾಸನದಲ್ಲಿ 1983ರ ಜುಲೈ 2ರಂದು ಹುಟ್ಟಿದ ಸುಹಾಸ್ ಇಂಜಿನಿಯರ್ ಪದವೀಧರರು. ಸುರತ್ಕಲ್ ನ ಎನ್‌ಐಟಿಕೆ ಯಿಂದ ಕಂಪ್ಯೂಟರ್ ಎಂಜಿನಿಯರ್ ಆಗಿ ಪದವಿ ಪಡೆದಿರುವ ಸುಹಾಸ್, ಈ ಹಿಂದೆ ಪ್ರಯಾಗರಾಜ್, ಆಗ್ರಾ, ಅಝಮ್‌ಗಡ, ಜೌನ್‌ಪುರ, ಸೋನ್‌ಭದ್ರಾ ಜಿಲ್ಲೆಗಳ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದಾರೆ.

Published On - 6:20 pm, Mon, 6 September 21

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ