AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷಗಳಿಂದ ನನ್ನನ್ನು ಮುಗಿಸಲು ನೋಡ್ತಿದ್ದೀರಿ: ಸಿಡಿದೆದ್ದ ರೊನಾಲ್ಡೊ!

Cristiano Ronaldo: 2026ರ ಫಿಫಾ ವಿಶ್ವಕಪ್ ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದು, ಜಾಗತಿಕ ಫುಟ್‌ಬಾಲ್ ಅಭಿಮಾನಿಗಳ ಕಣ್ಣು ಈಗ ಪೋರ್ಚುಗಲ್ ತಂಡದ ಮೇಲಿದೆ. ಬಲಿಷ್ಠ ಸ್ಪೇನ್ ವಿರುದ್ಧದ ಹೈ-ವೋಲ್ಟೇಜ್ ಪ್ರೀ-ಕ್ವಾರ್ಟರ್ ಫೈನಲ್ (ರೌಂಡ್ ಆಫ್ 16) ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

23 ವರ್ಷಗಳಿಂದ ನನ್ನನ್ನು ಮುಗಿಸಲು ನೋಡ್ತಿದ್ದೀರಿ: ಸಿಡಿದೆದ್ದ ರೊನಾಲ್ಡೊ!
Cristiano Ronaldo Image Credit source: NDTV
ಝಾಹಿರ್ ಯೂಸುಫ್
|

Updated on: Jul 06, 2026 | 12:02 PM

Share

2026ರ ಫಿಫಾ ವಿಶ್ವಕಪ್‌ನ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಕ್ಕೂ ಮುನ್ನ ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಮಾಧ್ಯಮಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಡಲ್ಲಾಸ್ ಸ್ಟೇಡಿಯಂನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ, ರೊನಾಲ್ಡೊಗೆ ನಿವೃತ್ತಿ ಮತ್ತು ಫಾರ್ಮ್ ಬಗ್ಗೆ ಸರಣಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಈ ಪ್ರಶ್ನೆಗೆ ಕ್ರಿಸ್ಟಿಯಾನೊ ಖಡಕ್ ಉತ್ತರ ನೀಡಿ ಗಮನ ಸೆಳೆದಿದ್ದಾರೆ.

ಪೋರ್ಚುಗಲ್ ತಂಡದ ಆರಂಭಿಕ ಆಟಗಾರರ ಪಟ್ಟಿಯಲ್ಲಿ ನಿಮ್ಮನ್ನು ಸೇರಿಸಿಕೊಳ್ಳುವ ಕುರಿತು ಕೇಳಿಬರುತ್ತಿರುವ ನಿರಂತರ ಟೀಕೆಗಳು ಮತ್ತು ಸಂಶಯಗಳನ್ನು ನೀವು ಹೇಗೆ ಎದುರಿಸುತ್ತೀರಿ? ಎಂದು ಕೇಳಲಾಗಿತ್ತು.

ಇಈ ಪ್ರಶ್ನೆಗೆ ಕುಪಿತಗೊಂಡ ಕ್ರಿಸ್ಟಿಯಾನೊ ರೊನಾಲ್ಡೊ, ನೀವು ಕಳೆದ 23 ವರ್ಷಗಳಿಂದ ನನ್ನನ್ನು ಮುಗಿಸಲು (ಆಟದ ವೃತ್ತಿಜೀವನವನ್ನು ಅಂತ್ಯಗೊಳಿಸಲು) ಪ್ರಯತ್ನಿಸುತ್ತಿದ್ದೀರಿ. ಆದರೆ ಅದು ವ್ಯರ್ಥ ಹಾಗೂ ಸಮಯದ ಪೋಲು ಎಂಬುದು ಈಗ ನಿಮಗೇ ಅರ್ಥವಾಗಿರಬೇಕು ಎಂದು ಗುಡುಗಿದ್ದಾರೆ.

41ನೇ ವಯಸ್ಸಿನಲ್ಲಿ ವಿಶ್ವಕಪ್ ಆಡುವುದು, ಇದರಲ್ಲಿ ನಿಮಗೆ ಎದುರಾಗುವ ಅತ್ಯಂತ ಕಠಿಣವಾದ ಸವಾಲು ಅಥವಾ ಕಷ್ಟದ ವಿಷಯ ಏನು ಎಂದು ಕೇಳಿದಾಗ,  ನಾನು ಮೊದಲಿನಂತೆಯೇ ಆಡುತ್ತಿಲ್ಲ ನಿಜ, ಆದರೆ ನಾನೇನು ಕೆಟ್ಟದಾಗಿ ಆಡುತ್ತಿಲ್ಲ. ಈ ವಿಶ್ವಕಪ್‌ನಲ್ಲೇ ಈಗಾಗಲೇ 3 ಗೋಲುಗಳನ್ನು ಬಾರಿಸಿದ್ದೇನೆ ಎಂದು ನೆನಪಿಸಿದರು.

ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ  ಪ್ರಸಿದ್ಧ ಪತ್ರಕರ್ತ ಮಾರ್ಸೆಲೊ ಬೆಕ್ಲರ್ ಅವರನ್ನು ಗುರುತಿಸಿದ ರೊನಾಲ್ಡೊ, “ಆ ಹುಡುಗನಿಗೆ ಮೈಕ್ ಕೊಡಿ, ಅವನಿಗೆ ನಾನೆಂದರೆ ಇಷ್ಟವಿಲ್ಲ. ನನಗೆ ಜನರ ಮುಖಗಳು ಚೆನ್ನಾಗಿ ನೆನಪಿರುತ್ತವೆ ಎಂದು ನಗುತ್ತಲೇ ಕಾಲೆಳೆದರು.

ಇನ್ನು ನಿವೃತ್ತಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರೊನಾಲ್ಡೊ, ಮಾಧ್ಯಮಗಳ ಒತ್ತಡಕ್ಕೆ ಮಣಿದು ತಾನು ನಿವೃತ್ತಿ ಘೋಷಿಸುವುದಿಲ್ಲ. ನನಗೆ ಸರಿ ಎನಿಸಿದಾಗ ಮಾತ್ರ ಆಟದಿಂದ ಹಿಂದೆ ಸರಿಯುವುದಾಗಿ ತಿಳಿಸಿದರು. ಇದಾಗ್ಯೂ ಇದು ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಪಂದ್ಯಾವಳಿ ಎಂಬುದನ್ನು ಅವರು ಖಚಿತಪಡಿಸಿದ್ದಾರೆ.

ತನ್ನ ಮೇಲೆ ಕೇಳಿ ಬರುತ್ತಿರುವ ಟೀಕೆಗಳ ಬಗ್ಗೆ ಮಾತನಾಡಿದ ರೊನಾಲ್ಡೊ, ಈ ವಯಸ್ಸಿನಲ್ಲೂ ನನ್ನ ಮೇಲಾಗುವ ದಾಳಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ಯಾಕಂದರೆ ಈ ಟೀಕೆಗಳೇ ನೀವು ಇನ್ನಷ್ಟು ಬೆಳೆಯಲು ಸಹಾಯ ಮಾಡುತ್ತವೆ ಎಂದು  ಭಾವುಕರಾಗಿ ನುಡಿದರು.

ಒಟ್ಟಾರೆಯಾಗಿ ಹೇಳುವುದಾದರೆ, ಕ್ರಿಸ್ಟಿಯಾನೊ ರೊನಾಲ್ಡೊ ಅವರ ಈ ಉತ್ತರಗಳು ಅವರನ್ನು ಟೀಕಿಸುವರಿಗೆ ಮತ್ತು ಗುರಿಯಾಗಿಸುವವರಿಗೆ ನೀಡಿದ ತಿರುಗೇಟಷ್ಟೇ ಅಲ್ಲ. ಅದು ಅವರ 23 ವರ್ಷಗಳ ಅಪ್ರತಿಮ ಫುಟ್‌ಬಾಲ್ ಪಯಣದ ಹಠ ಮತ್ತು ಬದ್ಧತೆಯ ಸಂಕೇತವಾಗಿದೆ.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ

41ನೇ ವಯಸ್ಸಿನಲ್ಲೂ ವಿಮರ್ಶಕರ ನಕಾರಾತ್ಮಕತೆಯನ್ನು ತಮಗೆ ಪ್ಲಸ್ ಪಾಯಿಂಟ್ ಮಾಡಿಕೊಂಡಿರುವ ಕ್ರಿಸ್ಟಿಯಾನೊ ರೊನಾಲ್ಡೊ ಈ ಬಾರಿಯ ವಿಶ್ವಕಪ್​ನಲ್ಲಿ ಟ್ರೋಫಿ ಎತ್ತಿ ಹಿಡಿಯುವ ಮೂಲಕ ನಿವೃತ್ತಿ ಘೋಷಿಸುವ ಇರಾದೆಯಲ್ಲಿದ್ದಾರೆ. ಇದಕ್ಕಾಗಿ ಪೋರ್ಚುಗಲ್ ಪಡೆ ಇನ್ನೂ 4 ಪಂದ್ಯಗಳನ್ನು ಗೆಲ್ಲಬೇಕಿದೆ.

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ