AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್-19 ಏಷ್ಯಾಕಪ್ ಸೆಮಿಫೈನಲ್: ಭಾರತಕ್ಕೆ ಅಫ್ಘಾನಿಸ್ತಾನದ ಸವಾಲು

ಅಂಡರ್-19 ಏಷ್ಯಾಕಪ್ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಭಾರತ ನೆಪಾಲ ಮತ್ತು ಯುಎಇ ವಿರುದ್ಧ ಗೆದ್ದು ಸೆಮಿಫೈನಲ್ ತಲುಪಿದ್ದರೂ, ಪಾಕಿಸ್ತಾನದ ವಿರುದ್ಧ ಸೋತಿದೆ. ಸ್ಪಿನ್ ಹಾಗೂ ಬಲಿಷ್ಠ ಬ್ಯಾಟಿಂಗ್ ಹೊಂದಿರುವ ಅಫ್ಘಾನಿಸ್ತಾನ ಬಲಿಷ್ಠ ತಂಡವಾಗಿದ್ದು, ಭಾರತಕ್ಕೆ ಸುಲಭ ಜಯ ಸಿಗುವುದು ಕಷ್ಟ. ಒಮಾನ್‌ನಲ್ಲಿ ಗುರುವಾರ ಬೆಳಗ್ಗೆ 10:30ಕ್ಕೆ ಪಂದ್ಯ ಶುರುವಾಗಲಿದ್ದು, ಸೋನಿ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರವಾಗಲಿದೆ.

ಅಂಡರ್-19 ಏಷ್ಯಾಕಪ್ ಸೆಮಿಫೈನಲ್: ಭಾರತಕ್ಕೆ ಅಫ್ಘಾನಿಸ್ತಾನದ ಸವಾಲು
ಭಾರತ Vs ಅಫ್ಘಾನಿಸ್ತಾನ
ಪೃಥ್ವಿಶಂಕರ
|

Updated on: Nov 11, 2026 | 9:57 PM

Share

ಅಂಡರ್-19 ಏಷ್ಯಾಕಪ್ ಟೂರ್ನಿಯಲ್ಲಿ ಗುರುವಾರ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ನೇಪಾಳ ಮತ್ತು ಯುಎಇ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್‌ಗಳ ಸೋಲು ಅನುಭವಿಸಿದ್ದು, ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ಇತ್ತ ಅಫ್ಘಾನಿಸ್ತಾನ ತಂಡ ಗ್ರೂಪ್ ಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ಸೆಮಿಫೈನಲ್‌ಗೆ ಪ್ರವೇಶಿಸಿದೆ. ಸ್ಪಿನ್ ಬೌಲಿಂಗ್ ಮೂಲಕ ಎದುರಾಳಿ ತಂಡವನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿರುವ ಅಫ್ಘಾನಿಸ್ತಾನ, ಶಿಸ್ತುಬದ್ಧ ಬ್ಯಾಟಿಂಗ್‌ನಲ್ಲೂ ಬಲಿಷ್ಠವಾಗಿದೆ. ಹೀಗಾಗಿ ಭಾರತಕ್ಕೆ ಸುಲಭ ಗೆಲುವು ಸಿಗುವುದು ಅನುಮಾನ. ಉಳಿದಂತೆ ಪಂದ್ಯದ ಬಗ್ಗೆಗಿನ ವಿವರ ಇಲ್ಲಿದೆ.

ಭಾರತ-ಅಫ್ಘಾನಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಗುರುವಾರ ನಡೆಯಲಿದೆ.

ಭಾರತ-ಅಫ್ಘಾನಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಒಮಾನ್‌ನ ಮಸ್ಕತ್‌ನ ಅಲ್ ಅಮೆರತ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ-ಅಫ್ಘಾನಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ-ಅಫ್ಘಾನಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ

ಭಾರತ-ಅಫ್ಘಾನಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯದ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯವನ್ನು ಟಿವಿಯಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ನಲ್ಲಿ ಪಂದ್ಯ ವೀಕ್ಷಿಸಲು ಸೋನಿ ಲಿವ್ ಆ್ಯಪ್ ಮತ್ತು ವೆಬ್‌ಸೈಟ್‌ನಲ್ಲಿ ನೇರ ಪ್ರಸಾರದ ವ್ಯವಸ್ಥೆ ಇರಲಿದೆ.

ಅಂಡರ್-19 ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ: ಸೆಹ್ವಾಗ್, ದ್ರಾವಿಡ್ ಪುತ್ರರಿಗೆ ಸ್ಥಾನ

ಉಭಯ ತಂಡಗಳ ಸಂಭಾವ್ಯ 11

ಭಾರತದ ಸಂಭಾವ್ಯ 11: ಲಕ್ಷ್ಯ ರೈಚಂದಾನಿ, ಆರ್ಯವೀರ್ ಸೆಹ್ವಾಗ್, ವಿಕೆ ವಿನೀತ್, ಅರ್ಜುನ್ ರಜಪೂತ್, ಯಶವರ್ಧನ್ ಚೌಹಾಣ್, ಅನ್ವಯ್ ದ್ರಾವಿಡ್, ಮನಲ್ ಚೌಹಾಣ್, ಮೋಹಿತ್ ಉಲ್ವಾ, ಆರ್ಯನ್ ಸಾವಸಾನಿ, ಕಾವ್ಯ ಪರೇಶ್ ಪಟೇಲ್, ಇಶಾನ್ ಸೂದ್.

ಅಫ್ಘಾನಿಸ್ತಾನದ ಸಂಭಾವ್ಯ 11: ಅಬ್ದುಲ್ಲಾ ನದರ್‌ಜಾನ್, ಫರೀದುಲ್ಲಾ ಇಹ್ಸಾಸ್, ಸುಭಾನ್ ಝಖೈಲ್, ನೊಮನ್ ಸಲಾರ್‌ಜೈ, ಶಾ ಫೈಸಲ್ ರಹೀಮಿ, ತಾಹಿರ್ ಸರ್ವಾರಿ, ಅಮೀರ್ ಹಮ್ಜಾ, ಸೊಹೈಲ್ ಖಾನ್, ಮೊಹಮ್ಮದ್ ಅಲಿ ಬರಕ್ಝೈ, ಅಬ್ದುಲ್ಲಾ ಹಮ್ದರ್ದ್, ನೂರ್ ಅಲಿ ನಿಯಾಝೈ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More