
IPL 2026: ಐಪಿಎಲ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಲೋಕವನ್ನೇ ಬೆರಗುಗೊಳಿಸುತ್ತಿದ್ದಾರೆ. ಏಪ್ರಿಲ್ 10 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ವೈಭವ್‌ಗೆ, ಪಂದ್ಯದ ನಂತರ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ (Virat Kohli) ಸ್ಮರಣೀಯ ಉಡುಗೊರೆಯೊಂದನ್ನು ನೀಡಿದ್ದಾರೆ.
ಪಂದ್ಯ ಮುಗಿದ ನಂತರ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾದ ವಿರಾಟ್ ಕೊಹ್ಲಿ, ಅವರ ಅದ್ಭುತ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದಾರೆ. ಈ ವೇಳೆ ವೈಭವ್ ಧರಿಸಿದ್ದ ರಾಜಸ್ಥಾನ್ ರಾಯಲ್ಸ್ ಟೋಪಿಯ ಮೇಲೆ ಕೊಹ್ಲಿ ಸಹಿ ಹಾಕಿ, “ಡಿಯರ್ ವೈಭವ್, ವೆಲ್ ಡನ್” (Dear Vaibhav, Well Done) ಎಂದು ಬರೆದು ಶುಭ ಹಾರೈಸಿದ್ದಾರೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Vaibhav Sooryavanshi received a signed cap from Virat Kohli last night ✨pic.twitter.com/JTJ1aem5Yq
— Cricbuzz (@cricbuzz) April 11, 2026
ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ ಕಲೆಹಾಕಿದ್ದು 201 ರನ್ಗಳನ್ನು.
ಈ ಬೃಹತ್ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಕೇವಲ 26 ಎಸೆತಗಳನ್ನು ಎದುರಿಸಿದ ವೈಭವ್ 7 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳನ್ನು ಒಳಗೊಂಡಂತೆ 78 ರನ್ ಬಾರಿಸಿದರು. ಈ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.
ಈ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ 202 ರನ್‌ಗಳ ಗುರಿಯನ್ನು 12 ಎಸೆತಗಳು ಬಾಕಿ ಇರುವಂತೆಯೇ ತಲುಪಿತು. ಅಲ್ಲದೆ ಈ ಮ್ಯಾಚ್ನಲ್ಲಿ ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ವೈಭವ್ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿಗೆ ಭಾಜನರಾದರು.
ಇದನ್ನೂ ಓದಿ: IPL 2026: ಐಪಿಎಲ್ಗೆ ಸೌತ್ ಆಫ್ರಿಕಾ ಆಲ್ ರೌಂಡರ್ ಎಂಟ್ರಿ..!
ಈ ಅಮೋಘ ಇನ್ನಿಂಗ್ಸ್‌ನೊಂದಿಗೆ ವೈಭವ್ ಸೂರ್ಯವಂಶಿ ಪ್ರಸ್ತುತ ಐಪಿಎಲ್ 2026ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಈವರೆಗೆ ಆಡಿದ 4 ಪಂದ್ಯಗಳಿಂದ ಒಟ್ಟು 200 ರನ್ ಗಳಿಸಿರುವ ಅವರು ಸದ್ಯ ‘ಆರೆಂಜ್ ಕ್ಯಾಪ್’ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಒಂದು ವೇಳೆ ಈ ಬಾರಿ ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ ಗೆದ್ದರೆ, ಐಪಿಎಲ್ ಇತಿಹಾಸದಲ್ಲೇ ಆರೆಂಜ್ ಕ್ಯಾಪ್ ಪಡೆದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
Published On - 12:34 pm, Sat, 11 April 26