AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinesh Phogat: ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

Vinesh Phogat Retired: ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ದೇಹ ತೂಕದ ಕಾರಣಕ್ಕೆ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ ಅಥವಾ ಬೆಳ್ಳಿ ಪದಕದ ನಿರೀಕ್ಷೆ ಮೂಡಿಸಿದ್ದ ಅವರು ಇದೀಗ ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜತೆಗೆ ಭಾವುಕ ಸಂದೇಶವೊಂದನ್ನೂ ಪ್ರಕಟಿಸಿದ್ದಾರೆ.

Vinesh Phogat: ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ವಿನೇಶ್ ಫೋಗಟ್ Image Credit source: PTI
Ganapathi Sharma
|

Updated on:Aug 08, 2024 | 7:41 AM

Share

ನವದೆಹಲಿ, ಆಗಸ್ಟ್ 8: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋಲನುಭವಿಸಿದ್ದೇನೆ’ ಎಂದಿದ್ದಾರೆ.

ಒಲಿಂಪಿಕ್ಸ್​​​ನಲ್ಲಿ ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕುಸ್ತಿಪಟು ರೋಚಕವಾಗಿ ಫೈನಲ್‌ಗೆ ಪ್ರವೇಶಿಸಿದ್ದರು. ವಿನೇಶ್ ಫೋಗಟ್ ಖಚಿತವಾಗಿ ಬಂಗಾರ ಗೆಲ್ಲುವ ನಿರೀಕ್ಷೆ ಭಾರತೀಯರಿಗಿತ್ತು. ಆದರೆ, ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಅಧಿಕವಿದ್ದ ಕಾರಣದಿಂದ, 29 ವರ್ಷದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಒಂದು ದಿನದಲ್ಲೇ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆ.

ವಿನೇಶ್ ಫೋಗಟ್ ಭಾವುಕ ಸಂದೇಶ

‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ. ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ತೂಕ ಇಳಿಸುವ ಪ್ರಯತ್ನದಲ್ಲಿ ರಾತ್ರಿಯಿಡೀ ತಂಡ ನಡೆಸಿದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ವಿನೇಶ್ ಫೋಗಟ್ ಬುಧವಾರ ಬೆಳಗ್ಗೆ ನಿಗದಿತ 50 ಕೆಜಿಗಿಂತ 100ಗ್ರಾಂ ಹೆಚ್ಚುವರಿ ತೂಕವನ್ನು ಹೊಂದಿದ್ದರು. ಇಂದರಿಂದ ಪೈನಲ್ ಪಂದ್ಯದಿಂದ ಅನರ್ಹಗೊಂಡಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಹೇಳಿಕೆಯಲ್ಲಿ ತಿಳಿಸಿತ್ತು.

ತೂಕ ಇಳಿಸಲು ನಡೆಸಿದ ಸತತ ಪ್ರಯತ್ನಗಳ ಪರಿಣಾಮವಾಗಿ ಅವರು ನಿರ್ಜಲೀಕರಣದಿಂದ ಬಳಲಿದ್ದಲ್ಲದೆ ಅಸ್ವಸ್ಥಗೊಂಡಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 am, Thu, 8 August 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?