AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics: ಫೈನಲ್​ ಪ್ರವೇಶಿಸಿ ಕುಸ್ತಿಪಟು ವಿನೇಶ್ ಫೋಗಟ್, ಭಾರತಕ್ಕೆ ಮತ್ತೊಂದು ಪದಕ ಖಾತ್ರಿ

ಪ್ಯಾರಿಸ್ ಒಲಂಪಿಕ್ಸ್​ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್‌ ಮಹಿಳೆಯರ 50 ಕೆ.ಜಿ ಪ್ರಿಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ವಿನೇಶ್ ಫೋಗಟ್‌ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅಲ್ಲದೇ ಒಲಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತವಾದಂತಾಗಿದೆ.

Paris Olympics: ಫೈನಲ್​ ಪ್ರವೇಶಿಸಿ ಕುಸ್ತಿಪಟು ವಿನೇಶ್ ಫೋಗಟ್, ಭಾರತಕ್ಕೆ ಮತ್ತೊಂದು ಪದಕ ಖಾತ್ರಿ
ವಿನೇಶ್ ಫೋಗಟ್
ರಮೇಶ್ ಬಿ. ಜವಳಗೇರಾ
|

Updated on:Aug 06, 2024 | 11:11 PM

Share

ಭಾರತದ ಕುಸ್ತಿಪಟು ವಿನೇಶ್ ಫೋಗಟ್‌ ಮಹಿಳೆಯರ 50 ಕೆ.ಜಿ ಪ್ರಿಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ ಕ್ಯೂಬಾದ ಯುಸ್‌ನೈಲೆಸ್‌ ಗುಜ್ಮನ್‌ ಎದುರು 5-0 ಅಂತರದಿಂದ ಗೆದ್ದು ಫೈನಲ್​ಗೆ ಪ್ರವೇಶ ಮಾಡಿದ್ದಾರೆ.  ಇದರೊಂದಿಗೆ ಪ್ಯಾರೀಸ್ ಒಲಿಂಪಿಕ್ಸ್​​ನಲ್ಲಿ ಫೈನಲ್​ ಪ್ರವೇಶಿಸಿದ ಮೊದಲ ಮಹಿಳಾ ಕ್ರೀಡಾಪಟು ಎನ್ನುವ ಹೆಗ್ಗಳಿಕೆ ಪಾತ್ರರಾಗಿದ್ದು, ಭಾರತಕ್ಕೆ ಕುಸ್ತಿ ವಿಭಾಗದಲ್ಲಿ ಒಂದು ಪದಕ ಖಾತ್ರಿಯಾದಂತಾಗಿದೆ. ಕಳೆದೆರಡು ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್‌ನಲ್ಲೇ ಮುಗ್ಗರಿಸಿದ್ದ ವಿನೇಶ್ ಫೋಗಟ್ ಈ ಬಾರಿ ಪ್ಯಾರೀಸ್​​ ಒಲಿಂಪಿಕ್ಸ್‌ನಲ್ಲಿ ಪದಕ ಖಚಿತಪಡಿಸಿಕೊಂಡಿದ್ದಾರೆ.

ಪ್ರಿಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಹಾಗೂ ವಿಶ್ವ ನಂ.1 ಕುಸ್ತಿಪಟುವಾಗಿದ್ದ ಜಪಾನಿನ ಯ್ಯೂ ಸುಸುಕಿ ವಿರುದ್ದ 3-2 ಅಂತರದಲ್ಲಿ ರೋಚಕ ಗೆಲುವು ಸಾಧಿಸಿದ್ದ ಫೋಗಟ್, ಕ್ವಾರ್ಟರ್‌ ಫೈನಲ್‌ನಲ್ಲಿ ಉಕ್ರೇನ್‌ನ ಮೂರು ಬಾರಿ ಕಾಮನ್‌ವೆಲ್ತ್ ಗೇಮ್ಸ್‌ ಚಿನ್ನದ ಪದಕ ವಿಜೇತೆ ಒಕ್ಸಾನಾ ಲಿವೀಚ್‌ ಎದುರು 7-5 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮೀಸ್‌ಗೆ ಲಗ್ಗೆಯಿಟ್ಟಿದ್ದರು.  ಇಂದು (ಆಗಸ್ಟ್​ 06) ರಾತ್ರಿ ನಡೆದ ಮಹಿಳೆಯರ 50 ಕೆಜಿ ಕುಸ್ತಿ ಸೆಮಿಫೈನಲ್​ ಪಂದ್ಯದಲ್ಲಿ ಯುಸ್ನಿಲಿಸ್ ಗುಜ್ಮಾನ್ ಅವರನ್ನು 5-0 ಅಂತರದಿಂದ ಮಣಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: Paris Olympics 2024: ಜಾವೆಲಿನ್​ನಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ

ಈ ಮೂಲಕ ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಇದು ವಿನೇಶ್​ ಅವರ ಮೂರನೇ ಒಲಿಂಪಿಕ್ಸ್​ ಟೂರ್ನಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:04 pm, Tue, 6 August 24

Follow Us
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!