AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinesh Phogat: ವಿನೇಶ್ ಫೋಗಟ್​ಗೆ ಚಿನ್ನದ ಪದಕ ನೀಡಿ ಗೌರವಿಸಿದ ಗ್ರಾಮಸ್ಥರು..!

Vinesh Phogat: ಒಲಂಪಿಕ್ಸ್‌ನಲ್ಲಿ ಕುಸ್ತಿಯನ್ನು ನಿಯಂತ್ರಿಸುವ ಸಂಸ್ಥೆಯಾದ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯೂಡಬ್ಲ್ಯು) ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟು ಹೆಚ್ಚಿನ ತೂಕವನ್ನು ಹೊಂದಿದ್ದರೆ ಅವರನ್ನು ಇಡೀ ಪಂದ್ಯಾವಳಿಯಿಂದ ಅನರ್ಹಗೊಳಿಸಲಾಗುತ್ತದೆ. ಅದರಂತೆ ವಿನೇಶ್ ಫೋಗಟ್ ಅವರನ್ನು ಫೈನಲ್ ಪಂದ್ಯಕ್ಕೂ ಮುನ್ನ ಅನರ್ಹಗೊಳಿಸಲಾಗಿತ್ತು.

Vinesh Phogat: ವಿನೇಶ್ ಫೋಗಟ್​ಗೆ ಚಿನ್ನದ ಪದಕ ನೀಡಿ ಗೌರವಿಸಿದ ಗ್ರಾಮಸ್ಥರು..!
Vinesh Phogat
ಝಾಹಿರ್ ಯೂಸುಫ್
|

Updated on: Aug 19, 2024 | 10:45 AM

Share

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಫೈನಲ್​ಗೆ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ತಾಯ್ನಾಡಿಗೆ ಮರಳಿದ್ದಾರೆ. ಭಾರತಕ್ಕೆ ಆಗಮಿಸಿದ ವಿನೇಶ್ ಅವರನ್ನು ಆಪ್ತರು ಮತ್ತು ಅಭಿಮಾನಿಗಳು ಬರದಿಂದ ಸ್ವಾಗತಿಸಿದ್ದಾರೆ. ಅದರಲ್ಲೂ ಫೋಗಟ್ ಅವರ ಗ್ರಾಮಸ್ಥರು ತಮ್ಮ ನಾಡಿನ ಸಾಧಕಿಯನ್ನು ವಿಶೇಷ ಸಮಾರಂಭದ ಮೂಲಕ ಸನ್ಮಾನಿಸಿದ್ದಾರೆ. ಇದೇ ವೇಳೆ ಅವರಿಗೆ ಚಿನ್ನದ ಪದಕವನ್ನು ನೀಡಿದ್ದು ವಿಶೇಷವಾಗಿತ್ತು.

ಪ್ಯಾರಿಸ್ ಒಲಿಂಪಿಕ್ಸ್​ನ ಮಹಿಳೆಯರ 50 ಕೆಜಿ ತೂಕದ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್​ಗೆ ಪ್ರವೇಶಿಸಿದ್ದರು. ಆದರೆ ಫೈನಲ್ ಪಂದ್ಯಕ್ಕೂ ನಡೆದ ತೂಕ ಪರಿಶೀಲನೆ ವೇಳೆ ಅನುಮತಿಸಲಾದ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಇದೇ ಕಾರಣದಿಂದಾಗಿ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿತ್ತು.

ಫೈನಲ್‌ನಿಂದ ಅನರ್ಹಗೊಂಡ ಬಳಿಕ ಬೆಳ್ಳಿ ಪದಕಕ್ಕಾಗಿ ವಿನೇಶ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹಲವಾರು ದಿನಗಳ ಕಾಯುವಿಕೆಯ ನಂತರ ಅಂತಿಮವಾಗಿ ಈ ಮನವಿಯನ್ನು ಸಿಎಎಸ್ ವಜಾಗೊಳಿಸಿದೆ. ಇದರೊಂದಿಗೆ ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅವರ ಕನಸು ಕೂಡ ಭಗ್ನಗೊಂಡಿದೆ.

ಈ ನೋವಿನಲ್ಲೇ ಭಾರತಕ್ಕೆ ಹಿಂತಿರುಗಿದ್ದ ವಿನೇಶ್ ಫೋಗಟ್ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಅಲ್ಲದೆ ಸ್ವಗ್ರಾಮ ಬಾಳಲಿಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಫೋಗಟ್ ಅವರಿಗೆ ಖಾಪ್ ಪಂಚಾಯತ್ ಮುಖ್ಯಸ್ಥ ಅವರಿಗೆ ಚಿನ್ನದ ಪದಕ ನೀಡಿ ಗೌರವಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗ್ರಾಮಸ್ಥರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿನೇಶ್ ಫೋಗಟ್ ವಿದಾಯ:

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಕೈ ತಪ್ಪುತ್ತಿದ್ದಂತೆ ವಿನೇಶ್ ಫೋಗಟ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಇದಾಗ್ಯೂ ಬೆಳ್ಳಿ ಪದಕದೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುವ ಆಸೆಯಲ್ಲಿದ್ದರು. ಆದರೀಗ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ವಿನೇಶ್ ಫೋಗಟ್ ಅವರ ಪದಕ ಕನಸು ಕಮರಿದೆ. ಇದಾಗ್ಯೂ ಅವರು ತಮ್ಮ ಗ್ರಾಮದಲ್ಲಿ ಕುಸ್ತಿ ಅಕಾಡೆಮಿ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಯುವ ಪ್ರತಿಭೆಗಳನ್ನು ಮುಂಬರುವ ಒಲಿಂಪಿಕ್ಸ್​ಗಾಗಿ ಸಿದ್ಧಗೊಳಿಸುವ ಇರಾದೆಯಲ್ಲಿದ್ದಾರೆ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ