ಕುಸ್ತಿ ಪಂದ್ಯದಲ್ಲಿ ಮಹತ್ವದ ಸಾಧನೆ ಮಾಡಿದ ಭಾರತ, ಸೆಮಿಫೈನಲ್ಗೆ ತಲುಪಿದ ವಿನೇಶ್ ಫೋಗಟ್
ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಕುಸ್ತಿ ಪಂದ್ಯದ ಮಹಿಳೆಯರ 50 ಕೆಜಿ ವಿಭಾಗದ ವಿನೇಶ್ ಫೋಗಟ್ ವಿಭಾಗದ ಉಕ್ರೇನ್‌ನ ಒಕ್ಸಾನಾ ಲಿವಾಚ್ ಅವರನ್ನು 7-5 ರಿಂದ ಸೋಲಿಸಿ. ಸೆಮಿಫೈನಲ್ಗೆ ತಲುಪಿದ್ದಾರೆ. ನಾಲ್ಕು ಬಾರಿಯ ವಿಶ್ವ ಚಾಂಪಿಯನ್ ಮತ್ತು ಒಲಂಪಿಕ್ ಚಿನ್ನದ ಪದಕ ವಿಜೇತ ಯುಯಿ ಸುಸಾಕಿ ವಿರುದ್ಧ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಕುಸ್ತಿ ಪಂದ್ಯದ ಮಹಿಳೆಯರ 50 ಕೆಜಿ ವಿಭಾಗದ ವಿನೇಶ್ ಫೋಗಟ್ ವಿಭಾಗದ ಉಕ್ರೇನ್‌ನ ಒಕ್ಸಾನಾ ಲಿವಾಚ್ ಅವರನ್ನು 7-5 ರಿಂದ ಸೋಲಿಸಿ. ಸೆಮಿಫೈನಲ್ಗೆ ತಲುಪಿದ್ದಾರೆ. ನಾಲ್ಕು ಬಾರಿಯ ವಿಶ್ವ ಚಾಂಪಿಯನ್ ಮತ್ತು ಒಲಂಪಿಕ್ ಚಿನ್ನದ ಪದಕ ವಿಜೇತ ಯುಯಿ ಸುಸಾಕಿ ವಿರುದ್ಧ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಎರಡು ಬಾರಿ ಒಲಿಂಪಿಯನ್ ಆಗಿರುವ ಅವರು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಎರಡು ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಒಂದು ಚಿನ್ನದ ಪದಕವನ್ನು ಗಳಿಸಿದ್ದಾರೆ. 2019 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಪಡೆದರು. ಹಾಗೂ 2021 ರಲ್ಲಿ ಏಷ್ಯನ್ ಚಾಂಪಿಯನ್ ಆಗಿ ಹೊರಹೊಮ್ಮಿದರು.
ಪ್ಯಾರಿಸ್ ಒಲಿಂಪಿಕ್ಸ್ 2024 ರ ಅತ್ಯಂತ ರೋಮಾಂಚಕಾರಿ ಪಂದ್ಯಗಳಲ್ಲಿ ವಿನೇಶ್ ಫೋಗಟ್ ಅವರು ವಿಶ್ವ ಚಾಂಪಿಯನ್ ಯುಯಿ ಸುಸಾಕಿ ಅವರನ್ನು ಸೋಲಿಸಿರುವುದು ಬಹಳ ರೋಚಕವಾಗಿತ್ತು. ಇಬ್ಬರು ಕೂಡ ಭಾರೀ ಪೈಪೋಟಿಯನ್ನು ನೀಡಿದ್ದು, ವಿನೇಶ್ ಫೋಗಟ್ ಅವರು ತಮ್ಮ ತಂತ್ರದಿಂದ ಯುಯಿ ಸುಸಾಕಿ ಅವರನ್ನು ಸೋಲಿಸಿದರು.
ಇದನ್ನೂ ಓದಿ: ಜಾವೆಲಿನ್ನಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ
ಸುಸಾಕಿ ವಿರುದ್ಧದ ಗುದ್ದಾಡಿದ ನಂತರ ವಿನೇಶ್ ಫೋಗಟ್ 7-5 ಅಂಕಗಳ ಮೂಲಕ ಉಕ್ರೇನ್‌ನ ಒಕ್ಸಾನಾ ಲಿವಾಚ್‌ರನ್ನು ಸೋಲಿಸುವ ಮೂಲಕ ಸೆಮಿಫೈನಲ್ಗೆ ಪ್ರವೇಶಿಸಿದ್ದಾರೆ. ವಿನೇಶ್ ಫೋಗಟ್ ಮತ್ತು ಒಕ್ಸಾನಾ ಲಿವಾಚ್ ಇಬ್ಬರು ಕೂಡ ಸಮಾನವಾಗಿ ಬಲ ಪ್ರದರ್ಶನ ಮಾಡಿದ್ದಾರೆ. ಆದರೆ ಇಲ್ಲಿಯೂ ಕೂಡ ವಿನೇಶ್ ಫೋಗಟ್ ತಮ್ಮ ತಂತ್ರಗಾರಿಕೆಯನ್ನು ಉಪಯೋಗಿಸಿದ್ದರು. ಇದೀಗ ಈ ಮೂಲಕ ವಿನೇಶ್ ಫೋಗಟ್ ಅವರು ಭಾರತಕ್ಕೆ ಚಿನ್ನ ಮುನ್ನಡಿ ಬರೆದಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ