ಆರೋಗ್ಯದಲ್ಲಿ ಚೇತರಿಕೆ… ಆಸ್ಪತ್ರೆಯಲ್ಲೇ ಡ್ಯಾನ್ಸ್ ಮಾಡಿದ ವಿನೋದ್ ಕಾಂಬ್ಳಿ

|

Updated on: Dec 31, 2024 | 10:08 AM

Vinod Kambli: ವಿನೋದ್ ಕಾಂಬ್ಳಿ ಟೀಮ್ ಇಂಡಿಯಾ ಒಟ್ಟು 121 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 21 ಟೆಸ್ಟ್ ಇನಿಂಗ್ಸ್​​ಗಳಲ್ಲಿ ಬ್ಯಾಟ್ ಬೀಸಿರುವ ಅವರು 2 ದ್ವಿಶತಕ ಹಾಗೂ 4 ಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 97 ಏಕದಿನ ಇನಿಂಗ್ಸ್​​ಗಳಲ್ಲಿ 2 ಶತಕ ಹಾಗೂ 14 ಅರ್ಧಶತಕಗಳೊಂದಿಗೆ 2477 ರನ್​ ಬಾರಿಸಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಸದ್ಯ ಥಾಣೆಯ ಆಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂತ್ರ ಸೋಂಕು ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದೇ ಖುಷಿಯಲ್ಲಿ ಕಾಂಬ್ಳಿ ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಮಹಿಳೆಯೊಂದಿಗೆ ನೃತ್ಯ ಮಾಡುತ್ತಿರುವ ವಿನೋದ್ ಕಾಂಬ್ಳಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರೊಂದಿಗೆ ಅವರ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬಂದಿರುವುದು ಬಹಿರಂಗವಾಗಿದೆ.

ಇನ್ನು ಆಕೃತಿ ಆಸ್ಪತ್ರೆಯ ಉಸ್ತುವಾರಿಯಾಗಿರುವ ಎಸ್.ಸಿಂಗ್ ಅವರು ಕಾಂಬ್ಳಿಗೆ ಅವರಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಿದ್ದಾರೆ ಎಂದು ಡಾ. ವಿವೇಕ್ ತ್ರಿವೇದಿ ತಿಳಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ಯಾವುದೇ ಚಿಕಿತ್ಸೆಯ ಬಗ್ಗೆ ಚಿಂತಿಸಬೇಕಿಲ್ಲ.

ಅಲ್ಲದೆ ವೈದ್ಯರು ಹೇಳುವುದನ್ನು ಚಾಚೂ ತಪ್ಪದೇ ಪಾಲಿಸುವುದಾಗಿ ಈ ಹಿಂದೆ ವಿನೋದ್ ಕಾಂಬ್ಳಿ ತಿಳಿಸಿದ್ದರು. ಇದೀಗ ವಾರಗಳ ಅಂತರದಲ್ಲಿ ಕಾಂಬ್ಳಿ ಅವರ ಆರೋಗ್ಯದಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿರುವುದು ಸಕರಾತ್ಮಕ ಬೆಳವಣಿಗೆ ಎನ್ನಬಹುದು.