Virat Kohli: ಕಿಂಗ್ ಕೊಹ್ಲಿಯ ಶತಕದ ಇನ್ನಿಂಗ್ಸ್ನ ವಿಡಿಯೋ ಹಂಚಿಕೊಂಡ ಬಿಸಿಸಿಐ
Virat Kohli Century: ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನ ವಿರಾಟ್ ಕೊಹ್ಲಿ ಆಂಧ್ರಪ್ರದೇಶ ವಿರುದ್ಧ 131 ರನ್ ಗಳಿಸಿ ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಅವರು ಲಿಸ್ಟ್ ಎ ಕ್ರಿಕೆಟ್ನಲ್ಲಿ 16,000 ರನ್ ಪೂರೈಸಿದ ಭಾರತದ ಎರಡನೇ ಆಟಗಾರ ಎನಿಸಿದರು. ನೇರಪ್ರಸಾರ ವೀಕ್ಷಿಸುವ ಅವಕಾಶವಿಲ್ಲದೆ ಅಭಿಮಾನಿಗಳಿಗೆ ನಿರಾಸೆಯಾಗಿದ್ದರೂ, ಬಿಸಿಸಿಐ ಹೈಲೈಟ್ಸ್ ವಿಡಿಯೋ ಹಂಚಿಕೊಂಡಿದೆ.
ಬೆಂಗಳೂರಿನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನವೇ ಅಭಿಮಾನಿಗಳಿಗೆ ನಿರಾಸೆ ಎದುರಾಗಿತ್ತು. ಇದಕ್ಕೆ ಕಾರಣ, ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಆಟವನ್ನು ನೇರಪ್ರಸಾರ ನೋಡುವ ಅವಕಾಶ ಇರಲಿಲ್ಲ. ಆದರೀಗ ಅಭಿಮಾನಿಗಳಿಗೆ ಕೊಂಚ ಸಮಾದಾನಪಡಿಸಿರುವ ಬಿಸಿಸಿಐ, ವಿರಾಟ್ ಕೊಹ್ಲಿಯ ಶತಕದ ಇನ್ನಿಂಗ್ಸ್ನ ಹೈಲೈಟ್ಸ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇಂದಿನ ಪಂದ್ಯದಲ್ಲಿ ದೆಹಲಿ ಪರ ಕಣಕ್ಕಿಳಿದಿದ್ದ ಕೊಹ್ಲಿ, ಆಂಧ್ರಪ್ರದೇಶ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು. ತಮ್ಮ ಇನ್ನಿಂಗ್ಸ್ನಲ್ಲಿ 101 ಎಸೆತಗಳನ್ನು ಎದುರಿಸಿದ ವಿರಾಟ್, 14 ಬೌಂಡರಿ ಹಾಗೂ 3 ಬೌಂಡರಿ ಸಹಿತ131 ರನ್ ಬಾರಿಸಿದರು. ಈ ಮೂಲಕ ಕೊಹ್ಲಿ, ಲಿಸ್ಟ್ ಎ ಕ್ರಿಕೆಟ್ನಲ್ಲಿ 16,000 ರನ್ ಪೂರೈಸಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

