ಏನಿದು! 2020ರ ಅಂತ್ಯಕ್ಕೆ ಅಪಖ್ಯಾತಿಗೆ ತುತ್ತಾದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ?

2008ರಲ್ಲಿ ವಿರಾಟ್​ ಕೊಹ್ಲಿ ಏಕದಿನ ಕ್ರಿಕೆಟ್​ಗೆ ಕಾಲಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಪ್ರತಿ ವರ್ಷ ಸಾಕಷ್ಟು ಶತಕಗಳು ಅವರ ಬ್ಯಾಟ್​ನಿಂದ ಸಿಡಿದಿವೆ.

ಏನಿದು! 2020ರ ಅಂತ್ಯಕ್ಕೆ ಅಪಖ್ಯಾತಿಗೆ ತುತ್ತಾದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ?
ವಿರಾಟ್ ಕೊಹ್ಲಿ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Dec 02, 2020 | 6:13 PM

2020 ಅನೇಕರ ಪಾಲಿಗೆ ಕೆಟ್ಟ ವರ್ಷವಾಗಿದೆ. ಇದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಕೂಡ ಹೊರತಾಗಿಲ್ಲ. ಪ್ರತಿ ವರ್ಷ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದ್ದ ಅವರನ್ನು ಈ ಬಾರಿ ಅಪಖ್ಯಾತಿ ಸುತ್ತಿಕೊಂಡಿದೆ.

ಈ ಬಾರಿಯ ಐಪಿಎಲ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿ ಕೊನೆಯಲ್ಲಿ ಎಡವಿತ್ತು. ಇದಕ್ಕೆ ವಿರಾಟ್​ ಕೊಹ್ಲಿ ಕಳಪೆ ನಾಯಕತ್ವವೇ ಕಾರಣ ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೆ, ಟೀಂ ಇಂಡಿಯಾಕ್ಕೆ ಟಿ20 ನಾಯಕನಾಗಿ ರೋಹಿತ್​ ಶರ್ಮಾ ನೇಮಕಗೊಳ್ಳಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿತ್ತು. ಈ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಕೊಹ್ಲಿ ಒಂದೂ ಶತಕ ಬಾರಿಸದೆ 2020ಅನ್ನು ಪೂರ್ಣಗೊಳಿಸಿದ್ದಾರೆ.

ಅವರ ಬ್ಯಾಟಿನಿಂದ ಒಂದೂ ಏಕದಿನ ಶತಕ ಸಿಡಿಯಲಿಲ್ಲ ಈ ಬಾರಿ! 2008ರಲ್ಲಿ ವಿರಾಟ್​ ಕೊಹ್ಲಿ ಏಕದಿನ ಕ್ರಿಕೆಟ್​ಗೆ ಕಾಲಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಪ್ರತಿ ವರ್ಷ ಸಾಕಷ್ಟು ಶತಕಗಳು ಅವರ ಬ್ಯಾಟ್​ನಿಂದ ಸಿಡಿದಿವೆ. ಆದರೆ, ಇದೇ ವರ್ಷ ಅವರು ಏಕದಿನ ಪಂದ್ಯದಲ್ಲಿ ಯಾವುದೇ ಶತಕ ಸಿಡಿಸಿಲ್ಲ. ಅವರ 12 ವರ್ಷಗಳ ಕ್ರಿಕೆಟ್​ ಬದುಕಿನಲ್ಲಿ ಈ ರೀತಿ ಆಗಿದ್ದು ಇದೇ ಮೊದಲು.

ಕೊರೋನಾ ವೈರಸ್​ ಸೋಂಕಿನಿಂದ ಜಗತ್ತಿನ ಹಲವು ದೇಶಗಳಲ್ಲಿ ಲಾಕ್​ಡೌನ್​ ಘೋಷಣೆಯಾದ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಸಾಕಷ್ಟು ಪ್ರವಾಸಗಳು ರದ್ದಾಗಿದ್ದವು. ಹೀಗಾಗಿ ಕೊಹ್ಲಿ ಈ ಬಾರಿ ಆಡಿದ್ದು ಕೇವಲ 9 ಏಕದಿನ ಪಂದ್ಯಗಳು.

ಈ ಪೈಕಿ ಅವರು ಐದು ಅರ್ಧಶತಕ ಸೇರಿ 431 ರನ್​ ಸಿಡಿಸಿದ್ದಾರೆ. ಸರಾಸರಿ ರನ್​ ಪ್ರಮಾಣ 47.88 ಇದೆ. ಈ ವರ್ಷದ ಕೊನೆಯ ಏಕದಿನ ಪಂದ್ಯ ಇಂದು ಆಸ್ಟ್ರೇಲಿಯಾದ ಕ್ಯಾನ್​ಬೆರಾದಲ್ಲಿ ಬುಧವಾರ ನಡೆಯಿತು. ಪಂದ್ಯದಲ್ಲಿ ಕೊಹ್ಲಿ 63 ರನ್​ ಸಿಡಿಸಿದ್ದಾರೆ.

ವಿರಾಟ್​ ಕೊಹ್ಲಿ 2017ರಲ್ಲಿ 6, 2018ರಲ್ಲಿ 6 ಹಾಗೂ 2019ರಲ್ಲಿ 5 ಏಕದಿನ ಶತಕ ಸಿಡಿಸಿದ್ದರು.

ಸಚಿನ್​ ತೆಂಡೂಲ್ಕರ್​​ ದಾಖಲೆಯನ್ನು ಹಿಂದಿಕ್ಕಿದ ವಿರಾಟ್​ ಕೊಹ್ಲಿ!

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ