India vs England: ಶೂನ್ಯಕ್ಕೆ ಔಟಾದ ಕೊಹ್ಲಿ! ಈ ಕೆಟ್ಟ ದಾಖಲೆಯಲ್ಲೂ ಧೋನಿಯನ್ನ ಸರಿಗಟ್ಟಿದ ಶೂನ್ಯ ಸಂಪಾದಕ ವಿರಾಟ್

India vs England: ವಿರಾಟ್ ಕೊಹ್ಲಿ ತನ್ನ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳುತ್ತಿರುವುದು ಇದು ಎಂಟನೇ ಬಾರಿ ಆಗಿದೆ. ಧೋನಿ ಇದುವರೆಗೆ ಖಾತೆ ತೆರೆಯದೆ 8 ಬಾರಿ ಔಟಾಗಿದ್ದರು. ಆದರೆ ಈಗ ವಿರಾಟ್ ಧೋನಿ ದಾಖಲೆಯನ್ನು ಸರಿಗಟ್ಟಿದ್ದಾರೆ.

India vs England: ಶೂನ್ಯಕ್ಕೆ ಔಟಾದ ಕೊಹ್ಲಿ! ಈ ಕೆಟ್ಟ ದಾಖಲೆಯಲ್ಲೂ ಧೋನಿಯನ್ನ ಸರಿಗಟ್ಟಿದ ಶೂನ್ಯ ಸಂಪಾದಕ ವಿರಾಟ್
ವಿರಾಟ್ ಕೊಹ್ಲಿ ಔಟ್​
Follow us
ಪೃಥ್ವಿಶಂಕರ
|

Updated on: Mar 05, 2021 | 12:55 PM

ಅಹಮದಾಬಾದ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತಿನಲ್ಲಿ ಅನೇಕ ದೊಡ್ಡ ದಾಖಲೆಗಳನ್ನು ಹೊಂದಿದ್ದಾರೆ. ಆದರೆ ಇಂದು ನಡೆದ ಪಂದ್ಯದಲ್ಲಿ ಕೊಹ್ಲಿ, ಅವರ ಹೆಸರಿಗೆ ಅತಿ ಕೆಟ್ಟ ದಾಖಲೆಯೊಂದನ್ನು ಬರೆಸಿಕೊಂಡಿದ್ದಾರೆ. ಎರಡನೇ ದಿನ ಚೇತೇಶ್ವರ ಪೂಜಾರ ಔಟಾದ ನಂತರ ಬ್ಯಾಟಿಂಗ್‌ಗೆ ಬಂದ ವಿರಾಟ್ ಕೊಹ್ಲಿ ದೊಡ್ಡ ಇನ್ನಿಂಗ್ಸ್ ಕಟ್ಟುವ ನಿರೀಕ್ಷೆಯಲ್ಲಿದ್ದರು. ಕೆಲವರು, ಕೊಹ್ಲಿ ತಮ್ಮ 71 ನೇ ಅಂತರರಾಷ್ಟ್ರೀಯ ಶತಕವನ್ನು ಪೂರ್ಣಗೊಳಿಸಬೇಕೆಂದು ಆಶಿಸಿದರು. ಆದರೆ ವಿರಾಟ್ ಕೇವಲ ಶೂನ್ಯಕ್ಕೆ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಈ ಮೂಲಕ ಕೊಹ್ಲಿ ಹೆಸರಿನಲ್ಲಿ ಮುಜುಗರದ ದಾಖಲೆಯೊಂದು ಇಂದು ದಾಖಲಾಗಿದೆ.

ವಾಸ್ತವವಾಗಿ, ವಿರಾಟ್ ಕೊಹ್ಲಿ ತನ್ನ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳುತ್ತಿರುವುದು ಇದು ಎಂಟನೇ ಬಾರಿ ಆಗಿದೆ. ಇದರೊಂದಿಗೆ ಕೊಹ್ಲಿ, ಇಷ್ಟು ದಿನ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಲ್ಲಿದ್ದ ಈ ಬ್ಲಾಕ್​ ಪಾಯಿಂಟ್​ ದಾಖಲೆಯನ್ನು ಸಮಗೊಳಿಸಿದ್ದಾರೆ. ಧೋನಿ ಇದುವರೆಗೆ ಖಾತೆ ತೆರೆಯದೆ 8 ಬಾರಿ ಔಟಾಗಿದ್ದರು. ಆದರೆ ಈಗ ವಿರಾಟ್ ಧೋನಿ ದಾಖಲೆಯನ್ನು ಸರಿಗಟ್ಟಿದ್ದಾರೆ.

ಸರಣಿಯಲ್ಲಿ ಕೊಹ್ಲಿ ಎರಡು ಬಾರಿ ಶೂನ್ಯಕ್ಕೆ ಔಟ್​.. ಇದು ಮಾತ್ರವಲ್ಲ, ವಿರಾಟ್ ಕೊಹ್ಲಿ ಅವರ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಟೆಸ್ಟ್ ಸರಣಿಯಲ್ಲಿ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದ್ದಾರೆ. ಇಂಗ್ಲೆಂಡ್ ವಿರುದ್ಧ ಕೊಹ್ಲಿ ಈ ಸಾಧನೆ ಮಾಡಿದ್ದು, 2014 ರಲ್ಲಿ ಆಡಿದ ಸರಣಿಯಲ್ಲಿ, ವಿರಾಟ್ ಕೊಹ್ಲಿ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಆ ಸರಣಿಯಲ್ಲಿ, ಲಿಯಾಮ್ ಪ್ಲಂಕೆಟ್ ಮತ್ತು ಜೇಮ್ಸ್ ಆಂಡರ್ಸನ್, ಕೊಹ್ಲಿಗೆ ಖಾತೆ ತೆರೆಯುವ ಅವಕಾಶವನ್ನು ನೀಡಿರಲಿಲ್ಲ. ಆದಾದ ನಂತರ ಈ ಸರಣಿಯಲ್ಲಿ ಮೊಯಿನ್ ಅಲಿ ಮತ್ತು ಬೆನ್ ಸ್ಟೋಕ್ಸ್​, ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಪೆವಿಲಿಯನ್‌ ಸೇರಿಸಿದ್ದಾರೆ.

ಸ್ಟೋಕ್ಸ್​ಗೆ ಐದು ಬಾರಿ ಬಲಿಯಾಗಿರುವ ಕೊಹ್ಲಿ ಇದರೊಂದಿಗೆ ವಿರಾಟ್ ಕೊಹ್ಲಿಯನ್ನು 5 ಬಾರಿ ಔಟ್ ಮಾಡಿದ ಬೌಲರ್‌ಗಳ ಪಟ್ಟಿಗೆ ಈಗ ಬೆನ್ ಸ್ಟೋಕ್ಸ್​ ಸೇರಿದ್ದಾರೆ. ಈ ಮೊದಲು ತನ್ನ ವೃತ್ತಿ ಜೀವನದಲ್ಲಿ ಇಷ್ಟು ಬಾರಿ ಬೇರೆ ಯಾವುದೇ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಲು ಬೆನ್ ಸ್ಟೋಕ್ಸ್​ಗೆ ಸಾಧ್ಯವಾಗಿಲ್ಲ. ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್ ಮತ್ತು ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಡೀನ್ ಎಲ್ಗರ್ ಅವರನ್ನು ನಾಲ್ಕು ಬಾರಿ ಸ್ಟೋಕ್ಸ್​ ಔಟ್ ಮಾಡಿದ್ದಾರೆ.

ಇದನ್ನೂ ಓದಿ:India vs England: ಸಿರಾಜ್​ ಬೆಂಬಲಕ್ಕೆ ನಿಂತ ಕ್ಯಾಪ್ಟನ್​​ ಕೊಹ್ಲಿಯಿಂದ ಬೆನ್ ಸ್ಟೋಕ್ಸ್​ಗೆ ಮೈದಾನದಲ್ಲೇ ಅವಾಜ್

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ