IND vs ENG: 4ನೇ ಟೆಸ್ಟ್​ಗೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಖಚಿತ: ಹಿಂಟ್ ಕೊಟ್ಟ ವಿರಾಟ್ ಕೊಹ್ಲಿ

ಪಂದ್ಯ ಮುಗಿದ ಬಳಿಕ ಮಾತನಾಡಿರುವ ವಿರಾಟ್ ಕೊಹ್ಲಿ, ನಾಲ್ಕನೇ ಟೆಸ್ಟ್​​ಗೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ. ಆದರೆ, ಬ್ಯಾಟಿಂಗ್ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಎಲ್ಲ ಎಂದು ಹೇಳಿದ್ದಾರೆ.

IND vs ENG: 4ನೇ ಟೆಸ್ಟ್​ಗೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಖಚಿತ: ಹಿಂಟ್ ಕೊಟ್ಟ ವಿರಾಟ್ ಕೊಹ್ಲಿ
Virat Kohli
Follow us
TV9 Web
| Updated By: Vinay Bhat

Updated on: Aug 29, 2021 | 11:15 AM

ಶನಿವಾರ ಅಂತ್ಯಕಂಡ ಇಂಗ್ಲೆಂಡ್ (England) ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ (India) ಸೋಲು ಕಂಡಿದೆ. ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನ ವೈಫಲ್ಯದಿಂದ ಟೀಮ್ ಇಂಡಿಯಾ (Team India) ಪಂದ್ಯವನ್ನು ಕಳೆದುಕೊಂಡಿತು. ಇದರಿಂದ ಪಾಠ ಕಲಿಯಬೇಕಿರುವ ತಂಡ ಮುಂದಿನ ನಾಲ್ಕನೇ ಟೆಸ್ಟ್​ನ ಆಡುವ ಬಳಗದಲ್ಲಿ ಬದಲಾವಣೆ ಮಾಡಬೇಕಾಗಿರುವುದು ಅನಿವಾರ್ಯವಾಗಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ (Virat Kohli) ಕೂಡ ಹಿಂಟ್ ಕೊಟ್ಟಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿರುವ ವಿರಾಟ್ ಕೊಹ್ಲಿ, ನಾಲ್ಕನೇ ಟೆಸ್ಟ್​​ಗೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ. ಆದರೆ, ಬ್ಯಾಟಿಂಗ್ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಎಲ್ಲ ಎಂದು ಹೇಳಿದ್ದಾರೆ. ಐದು ಸ್ಪೆಷಲಿಸ್ಟ್ ಬೌಲರ್​ಗಳನ್ನು ಆಡಿಸುವ ಬಗ್ಗೆ ಕೊಹ್ಲಿ ಹಿಂಟ್ ಕೊಟ್ಟಿದ್ದು, ಶಾರ್ದೂಲ್ ಥಾಕೂರ್ ಕಮ್​ಬ್ಯಾಕ್ ಮಾಡುವ ಸಾಧ್ಯತೆ ಇದೆ. ಅಂತೆಯೆ ಇಂಜುರಿಗೆ ತುತ್ತಾಗಿರುವ ರವೀಂದ್ರ ಜಡೇಜಾ ಬದಲು ರವಿಚಂದ್ರ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಇದೆ.

ಪಂದ್ಯದ ಸೋಲಿನ ಬಳಿಕ ಮಾತನಾಡಿದ ವಿರಾಟ್‌ ಕೊಹ್ಲಿ, “ಸ್ಕೋರ್‌ ಬೋರ್ಡ್‌ ಒತ್ತಡದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಪ್ರಥಮ ಇನಿಂಗ್ಸ್‌ನಲ್ಲಿ 78 ರನ್‌ಗೆ ಆಲೌಟ್‌ ಆಗಿದ್ದರ ಹೊರತಾಗಿಯೂ ನಾವು ದ್ವಿತೀಯ ಇನಿಂಗ್ಸ್‌ನಲ್ಲಿ ಒಂದು ಹಂತದಲ್ಲಿ ಮುನ್ನಡೆಯ ಹಾದಿಯಲ್ಲಿ ಇದ್ದೆವು. ಆದರೆ, ಎದುರಾಳಿ ತಂಡ ಪ್ರಥಮ ಇನಿಂಗ್ಸ್‌ನಲ್ಲಿ ದೊಡ್ಡ ಕಲೆಹಾಕಿತ್ತು. ಅಲ್ಲದೆ, ನಾಲ್ಕನೇ ದಿನ ಬೆಳಗ್ಗೆ ಇಂಗ್ಲೆಂಡ್‌ ಬೌಲರ್‌ಗಳು ನಮ್ಮ ಮೇಲೆ ಸಾಕಷ್ಟು ಒತ್ತಡ ಹೇರಿದರು ಹಾಗೂ ನಾವು ಇದಕ್ಕೆ ಸರಿಯಾಗಿ ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ,” ಎಂದರು.

“ನಾವು ಕಮ್‌ಬ್ಯಾಕ್‌ ಮಾಡುತ್ತೇವೆಂದು ನೀವು ನಿರೀಕ್ಷಿಸಿ. ನಮ್ಮಲ್ಲಿ ಬ್ಯಾಟಿಂಗ್‌ ಡೆಪ್ತ್‌ ಇಲ್ಲವೆಂದು ನೀವು ವಾದಿಸಬಹುದು. ಕೆಳ ಮಧ್ಯಮ ಕ್ರಮಾಂಕದ ಆಟಗಾರರು ಪುಟಿದೇಳಲು ನೆರವಾಗುವಷ್ಟು ರನ್‌ಗಳು ಅಗ್ರ ಕ್ರಮಾಂಕದಿಂದ ಮೂಡಿ ಬಂದಿರಲಿಲ್ಲ. ಆದರೆ, ದ್ವಿತೀಯ ಇನಿಂಗ್ಸ್‌ನಿಂದ ನಾವು ಸಾಕಷ್ಟು ಸಕಾರಾತ್ಮಕ ಅಂಶಗಳನ್ನು ತೆಗೆದುಕೊಳ್ಳಬಹುದು. ಅಂದಹಾಗೆ, ಕಳೆದ ಆಸ್ಟ್ರೇಲಿಯಾ ಪ್ರವಾಸದ ಅಡಿಲೇಡ್‌ ಟೆಸ್ಟ್‌ನಲ್ಲಿ ಕೇವಲ 36ಕ್ಕೆ ಆಲ್‌ಔಟ್‌ ಆದ ಬಳಿಕ ನಾವು ಅತ್ಯುತ್ತಮವಾಗಿ ಕಮ್‌ಬ್ಯಾಕ್‌ ಮಾಡಿದ್ದೆವು,” ಎಂದು ವಿರಾಟ್‌ ಕೊಹ್ಲಿ ಹೇಳಿದರು.

ಮೂರನೇ ಟೆಸ್ಟ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 78 ರನ್​ಗೆ ಸರ್ವಪತನ ಕಂಡಿತು. ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ನಾಯಕ ಜೋ ರೂಟ್ (121) ಶತಕದಾಟವಾಡಿದರೆ, ಡೇವಿಡ್ ಮಲನ್ 70, ಹಸೀಬ್ ಹಮೀದ್ 68 ಮತ್ತು ರಾರಿ ಬರ್ನ್ಸ್ 68 ರನ್ ಕಲೆಹಾಕಿದರು.

ಭರ್ಜರಿ ಮುನ್ನಡೆಯೊಂದಿಗೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್​ನಲ್ಲಿ 432 ರನ್ ಕಲೆಹಾಕಿತು. ಭಾರತ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಮೂರನೇ ದಿನ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು ಬಿಟ್ಟರೆ ನಾಲ್ಕನೇ ದಿನ ಮತ್ತದೆ ಹಳೆಯ ಚಾಳಿ ಮುಂದುವರೆಸಿತು. ಚೇತೇಶ್ವರ್ ಪೂಜಾರ 189 ಎಸೆತಗಳಲ್ಲಿ 91 ರನ್ ಬಾರಿಸಿ ಫಾರ್ಮ್​ಗೆ ಬಂದರೆ, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರಷ್ಟೆ.

2ನೇ ಇನ್ನಿಂಗ್ಸ್​ನಲ್ಲಿ ಭಾರತ 278 ರನ್​ಗೆ ಸರ್ವಪತನ ಕಂಡಿತು. ಇಂಗ್ಲೆಂಡ್ ಇನ್ನಿಂಗ್ಸ್ ಮತ್ತು 76 ರನ್​ಗಳ ಗೆಲುವು ದಾಖಲಿಸಿತು. ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಲಂಡನ್​ನ ಕೆನ್ನಿಂಗ್ಟನ್ ಓವಲ್​ನಲ್ಲಿ ಸೆಪ್ಟೆಂಬರ್ 2 ರಿಂದ ಆರಂಭವಾಗಲಿದೆ.

Jarvo 69: ಟೀಮ್ ಇಂಡಿಯಾ ಅಭಿಮಾನಿಗೆ ಜೀವನ ಪರ್ಯಂತ ನಿಷೇಧ ಹೇರಿದ ಇಂಗ್ಲೆಂಡ್ ಕ್ರಿಕೆಟ್: ಯಾಕೆ ಗೊತ್ತೇ?

Ravindra Jadeja: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಕ್ಕೆ ಮತ್ತೊಂದು ಶಾಕ್: ಸ್ಟಾರ್ ಆಟಗಾರನಿಗೆ ಇಂಜುರಿ

(Virat Kohli hints at possible changes in bowling line-up in india vs england 4th Test)

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ