ಟೆಸ್ಟ್ ಕ್ರಿಕೆಟ್​​ನಲ್ಲೂ ವಿರಾಟ ರೂಪ: ಕೊಹ್ಲಿ ಈ ಹಿರಿಮೆಗೂ ಪಾತ್ರರಾದರು!

|

Updated on: Sep 09, 2019 | 6:13 PM

ವೆಸ್ಟ್​ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯ 2ನೇ ಹಾಗೂ ಕೊನೆಯ ಪಂದ್ಯದಲ್ಲೂ ಭಾರತ ತಂಡ ಗೆಲುವು ಸಾಧಿಸಿದೆ. ನಿನ್ನೆ ಮುಕ್ತಾಯಗೊಂಡ 2ನೇ ಪಂದ್ಯದಲ್ಲಿ ಭಾರತ ತಂಡ 257 ರನ್​ಗಳ ಭರ್ಜರಿ ಜಯ ದಾಖಲಿಸಿತ್ತು. ಈ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತಕ್ಕೆ ಹೆಚ್ಚು ಗೆಲುವು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಈ ಹಿಂದಿನ ನಾಯಕರಾದ ಎಂಎಸ್ ಧೋನಿ, ಸೌರವ್ ಗಂಗೂಲಿ ಅವರ ದಾಖಲೆಗಳನ್ನು ವಿರಾಟ್​ ಕೊಹ್ಲಿ ಹಿಂದಿಕ್ಕಿದ್ದಾರೆ. […]

ಟೆಸ್ಟ್ ಕ್ರಿಕೆಟ್​​ನಲ್ಲೂ ವಿರಾಟ ರೂಪ: ಕೊಹ್ಲಿ ಈ ಹಿರಿಮೆಗೂ ಪಾತ್ರರಾದರು!
Follow us on

ವೆಸ್ಟ್​ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯ 2ನೇ ಹಾಗೂ ಕೊನೆಯ ಪಂದ್ಯದಲ್ಲೂ ಭಾರತ ತಂಡ ಗೆಲುವು ಸಾಧಿಸಿದೆ. ನಿನ್ನೆ ಮುಕ್ತಾಯಗೊಂಡ 2ನೇ ಪಂದ್ಯದಲ್ಲಿ ಭಾರತ ತಂಡ 257 ರನ್​ಗಳ ಭರ್ಜರಿ ಜಯ ದಾಖಲಿಸಿತ್ತು. ಈ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತಕ್ಕೆ ಹೆಚ್ಚು ಗೆಲುವು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಈ ಹಿಂದಿನ ನಾಯಕರಾದ ಎಂಎಸ್ ಧೋನಿ, ಸೌರವ್ ಗಂಗೂಲಿ ಅವರ ದಾಖಲೆಗಳನ್ನು ವಿರಾಟ್​ ಕೊಹ್ಲಿ ಹಿಂದಿಕ್ಕಿದ್ದಾರೆ.

ಕೊಹ್ಲಿ ತಂಡದ ನಾಯಕರಾಗಿ ಒಟ್ಟು 48 ಟೆಸ್ಟ್​ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಈ ಪೈಕಿ 28 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ. ಈ ಹಿಂದೆ ಈ ದಾಖಲೆ ಧೋನಿ ಅವರ ಹೆಸರಿನಲ್ಲಿತ್ತು. ಮಹೇಂದ್ರ ಸಿಂಗ್ ಧೋನಿ 60 ಟೆಸ್ಟ್​ ಪಂದ್ಯಗಳನ್ನು ಮುನ್ನಡೆಸಿದ್ದು, ಈ ಪೈಕಿ 27 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ.

Published On - 2:32 pm, Tue, 3 September 19