ಬಾಯಿ ಮುಚ್ಕೊಂಡಿರಬೇಕು... ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ವಿರಾಟ್ ಕೊಹ್ಲಿ ಖಡಕ್ ಸೂಚನೆ

ಬಾಯಿ ಮುಚ್ಕೊಂಡಿರಬೇಕು… ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ವಿರಾಟ್ ಕೊಹ್ಲಿ ಖಡಕ್ ಸೂಚನೆ

ಝಾಹಿರ್ ಯೂಸುಫ್
|

Updated on: Dec 08, 2024 | 8:53 AM

IND vs AUS: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲಿ 180 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ 337 ರನ್ ಕಲೆಹಾಕಿದೆ. ಇದೀಗ ದ್ವಿತೀಯ ಇನಿಂಗ್ಸ್ ಬ್ಯಾಟ್ ಮಾಡುತ್ತಿರುವ ಭಾರತ ತಂಡವು 2ನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 128 ರನ್ ಕಲೆಹಾಕಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಒಂದೆಡೆ ವಿರಾಟ್ ಕೊಹ್ಲಿ ಆಕ್ರೋಶಭರಿತರಾದರೆ, ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆಯೊಡೆದಿದೆ. ಇದರ ನಡುವೆ ಆಸ್ಟ್ರೇಲಿಯಾ ಅಭಿಮಾನಿಗಳು ಕೂಡ ರಂಗಕ್ಕಿಳಿದಿದ್ದಾರೆ.

ಆಸ್ಟ್ರೇಲಿಯಾ ತಂಡಕ್ಕೆ ಫುಲ್​ ಸಪೋರ್ಟ್​​ನೊಂದಿಗೆ ಅಡಿಲೇಡ್​ನ ಓವಲ್ ಸ್ಟೇಡಿಯಂ ಗ್ಯಾಲರಿಯಲ್ಲಿ ಕಾಣಿಸಿಕೊಂಡ ಅಭಿಮಾನಿಗಳು ಟೀಮ್ ಇಂಡಿಯಾ ಆಟಗಾರರನ್ನು ಮೂದಲಿಸುವ ಕಾಯಕಕ್ಕೆ ಕೈ ಹಾಕಿದ್ದಾರೆ. ಅದರಲ್ಲೂ 2ನೇ ದಿನದಾಟದ ವೇಳೆ ಆಸೀಸ್ ಪ್ರೇಕ್ಷಕರು ಬೌಂಡರಿ ಲೈನ್​​ನಲ್ಲಿ ಫೀಲ್ಡಿಂಗ್​​ನಲ್ಲಿರುತ್ತಿದ್ದ ಭಾರತೀಯ ಆಟಗಾರರನ್ನು ಟಾರ್ಗೆಟ್ ಮಾಡುತ್ತಿದ್ದರು.

ಆಸ್ಟ್ರೇಲಿಯನ್ನರ ಈ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ನೀಡಲು ಇತ್ತ ವಿರಾಟ್ ಕೊಹ್ಲಿ ಕೂಡ ಕಾದು ಕುಳಿತಿದ್ದರು. ಇತ್ತ ಮಾರ್ನಸ್ ಲಾಬುಶೇನ್ ವಿಕೆಟ್ ಸಿಗುತ್ತಿದ್ದಂತೆ ಟೀಮ್ ಇಂಡಿಯಾ ಆಟಗಾರರು ಸಂಭ್ರಮಿಸುತ್ತಿದ್ದರೆ, ವಿರಾಟ್ ಕೊಹ್ಲಿ ಮಾತ್ರ ಆಸ್ಟ್ರೇಲಿಯಾ ಪ್ರೇಕ್ಷಕರತ್ತ ಮುಖ ಮಾಡಿದ್ದರು.

ಅಲ್ಲದೆ ಗ್ಯಾಲರಿಯಲ್ಲಿದ್ದ ಆಸ್ಟ್ರೇಲಿಯನ್ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಕು ಎಂದು ಕೈ ಸನ್ನೆ ಮಾಡಿ ಕೊಹ್ಲಿ ಖಡಕ್ ಸೂಚನೆ ನೀಡಿದ್ದಾರೆ. ಇದೀಗ ವಿರಾಟ್ ಕೊಹ್ಲಿಯ ಈ ಆಕ್ರೋಶಭರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಂದಹಾಗೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಅಭಿಮಾನಿಗಳಿಗೆ ಅವರದ್ದೇಯಾದ ರೀತಿಯಲ್ಲಿ ತಿರುಗೇಟು ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದಿನ ಬಾರ್ಡರ್-ಗವಾಸ್ಕರ್ ಸರಣಿಯಲ್ಲೂ ಕೊಹ್ಲಿ ಬಾಯಿ ಮುಚ್ಕೊಂಡಿರುವಂತೆ ಸನ್ನೆ ಮಾಡಿ ಸುದ್ದಿಯಾಗಿದ್ದರು. ಇದೀಗ ಮತ್ತೊಮ್ಮೆ ಕೊಹ್ಲಿ ಆಸ್ಟ್ರೇಲಿಯಾ ಅಭಿಮಾನಿಗಳ ವಿರುದ್ಧ ತಿರುಗಿ ನಿಂತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲಿ 180 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ 337 ರನ್ ಕಲೆಹಾಕಿದೆ. ಇದೀಗ ದ್ವಿತೀಯ ಇನಿಂಗ್ಸ್ ಬ್ಯಾಟ್ ಮಾಡುತ್ತಿರುವ ಭಾರತ ತಂಡವು 2ನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 128 ರನ್ ಕಲೆಹಾಕಿದೆ.