ವಿರಾಟ್ ಕೊಹ್ಲಿ ಬಗ್ಗೆ ಎಚ್ಚರವಿರಲಿ: ಪಾಕ್ ತಂಡಕ್ಕೆ ಮಾಜಿ ಆಟಗಾರನ ಎಚ್ಚರಿಕೆ..!
India vs Pakistan: ಭಾರತ-ಪಾಕ್ ನಡುವಣ ಕೊನೆಯ ಮುಖಾಮುಖಿಯಲ್ಲಿ ಟೀಮ್ ಇಂಡಿಯಾದ ಎಲ್ಲಾ ಬ್ಯಾಟ್ಸ್ಮನ್ಗಳು ವಿಫಲರಾದರೂ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು.
ಆಗಸ್ಟ್ 28 ರಂದು ಯುಎಇನ ದುಬೈ ಇಂಟರ್ನ್ಯಾಷನ್ನಲ್ಲಿ ಮೈದಾನದಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ್ (India vs Pakistan) ನಡುವಣ ಪಂದ್ಯಕ್ಕಾಗಿ ದಿನಗಣನೆ ಶುರುವಾಗಿದೆ. ಇಡೀ ವಿಶ್ವದ ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿರುವ ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ಮಾಜಿ ಆಟಗಾರ ಸಲ್ಮಾನ್ ಬಟ್ ತಮ್ಮ ತಂಡಕ್ಕೆ ಎಚ್ಚರಿಕೆ ರವಾನಿಸಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ಬಗ್ಗೆ ಎಚ್ಚರವಿರಲಿ ಎಂಬ ಸಂದೇಶದ ಮೂಲಕ ಎಂಬುದು ವಿಶೇಷ. ಅಂದರೆ ವಿರಾಟ್ ಕೊಹ್ಲಿ ಪ್ರಸ್ತುತ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಪಾಕ್ ತಂಡವನ್ನು ಇಕ್ಕಟಿಗೆ ಸಿಲುಕಿಸುವುದು ವಿರಾಟ್ ಕೊಹ್ಲಿನೇ ಎಂದು ಎಚ್ಚರಿಕೆ ನೀಡಿದ್ದಾರೆ. ಭಾರತ ತಂಡವು ಬಲಿಷ್ಠ ಪಡೆಯನ್ನೇ ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಹಲವು ಆಟಗಾರರನ್ನು ಪರೀಕ್ಷಿಸಿದೆ. ಅದರಲ್ಲೂ ವಿರಾಟ್ ಕೊಹ್ಲಿಯನ್ನು ಕಟ್ಟಿಹಾಕದಿದ್ದರೆ ಪಾಕ್ ತಂಡಕ್ಕೆ ಗೆಲುವು ಅಸಾಧ್ಯ ಎಂದು ಸಲ್ಮಾನ್ ಬಟ್ ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಕೊಹ್ಲಿ ಬ್ಯಾಟ್ ಮೂಲಕ ವಿಜೃಂಭಿಸಿದರೆ ಬಾಬರ್ ತಂಡ ಸಂಕಷ್ಟಕ್ಕೆ ಸಿಲುಕಲಿದೆ. ವಿರಾಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಅವರ ಶಕ್ತಿ ಏನು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಕೊಹ್ಲಿ ಸದ್ಯ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರು ಆದಷ್ಟು ಬೇಗ ಫಾರ್ಮ್‌ಗೆ ಮರಳುತ್ತಾರೆ ಎಂಬ ವಿಶ್ವಾಸದಲ್ಲಿ ಟೀಮ್ ಇಂಡಿಯಾ ಇದೆ.
ಒಂದು ವೇಳೆ ವಿರಾಟ್ ಕೊಹ್ಲಿಯನ್ನು ಪಾಕ್ ಬೌಲರ್ಗಳು ಬೇಗನೆ ಔಟ್ ಮಾಡದಿದ್ದರೆ, ಪಾಕಿಸ್ತಾನಕ್ಕೆ ತಲೆನೋವಾಗಿ ಪರಿಣಮಿಸಲಿದೆ ಎಂದು ಸಲ್ಮಾನ್ ತಮ್ಮ ತಂಡಕ್ಕೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಕೊಹ್ಲಿ ಕ್ರೀಸ್ನಲ್ಲಿ ನೆಲೆಯೂರದಂತೆ ನೋಡಿಕೊಳ್ಳಬೇಕು ಎಂದು ಪಾಕ್ ಮಾಜಿ ನಾಯಕ ತಿಳಿಸಿದ್ದಾರೆ. ಒಂದು ವೇಳೆ ವಿರಾಟ್ ಕೊಹ್ಲಿ ಕ್ರೀಸ್ ಕಚ್ಚಿ ನಿಂತರೆ ಎದುರಾಳಿಗಳನ್ನು ಉಡೀಸ್ ಮಾಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ ಸಲ್ಮಾನ್ ಬಟ್.
ಇತ್ತ ವಿರಾಟ್ ಕೊಹ್ಲಿ ಕೂಡ ಪಾಕ್ ವಿರುದ್ದದ ಪಂದ್ಯದಕ್ಕಾಗಿ ಭರ್ಜರಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಇಂಗ್ಲೆಂಡ್ ವಿರುದ್ದದ ಸರಣಿಯ ಬಳಿಕ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಕೊಹ್ಲಿ ಇದೀಗ ಏಷ್ಯಾಕಪ್ ಮೂಲಕ ಮತ್ತೆ ಮೈದಾನಕ್ಕಿಳಿಯುತ್ತಿದ್ದಾರೆ. ಅದು ಕೂಡ ಪಾಕ್ ವಿರುದ್ದದ ಪಂದ್ಯದ ಮೂಲಕ ಎಂಬುದು ವಿಶೇಷ.
ಇಲ್ಲಿ ಮತ್ತೊಂದು ವಿಶೇಷ ಎಂದರೆ ಭಾರತ-ಪಾಕ್ ನಡುವಣ ಕೊನೆಯ ಮುಖಾಮುಖಿಯಲ್ಲಿ ಟೀಮ್ ಇಂಡಿಯಾದ ಎಲ್ಲಾ ಬ್ಯಾಟ್ಸ್ಮನ್ಗಳು ವಿಫಲರಾದರೂ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಇದೇ ಕಾರಣದಿಂದಾಗಿ ಇದೀಗ ಸಲ್ಮಾನ್ ಬಟ್ ಅವರ ಎಚ್ಚರಿಕೆ ಮಹತ್ವ ಪಡೆದುಕೊಂಡಿದೆ.