Hardik Pandya: ಏನಾಗ್ತಿದೆ ಹಾರ್ದಿಕ್ ಪಾಂಡ್ಯಾ ಲೈಫ್ನಲ್ಲಿ?
Hardik Pandya: ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು 16 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಹೀಗಾಗಿ ಟೀಮ್ ಇಂಡಿಯಾ ನಾಯಕರಾಗಿ ಆಯ್ಕೆಯಾಗುವುದು ಖಚಿತ ಎನ್ನಲಾಗಿತ್ತು. ಆದರೀಗ ಫಿಟ್ನೆಸ್ ಸಮಸ್ಯೆಯ ಕಾರಣದಿಂದಾಗಿ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ಯಾದವ್ಗೆ ನಾಯಕನ ಪಟ್ಟ ನೀಡಲಾಗಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಸೂರ್ಯ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿರೋದು ಗೊತ್ತೇ ಇದೆ. ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ಜೊತೆಗಿನ ವೈವಾಹಿಕ ಜೀವನದಿಂದ ಹಾರ್ದಿಕ್ ವಿಚ್ಛೇದನ ಪಡೆದಿದ್ದಾರೆ. ಇತ್ತ ಟೀಮ್ ಇಂಡಿಯಾ ನಾಯಕತ್ವ ಕೂಡ ಪಾಂಡ್ಯ ಕೈ ತಪ್ಪಿದೆ. ರೋಹಿತ್ ಶರ್ಮಾ ಬಳಿಕ ಭಾರತ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಇದರ ನಡುವೆ ವಿಚ್ಛೇದಿತ ಪತ್ನಿ ನತಾಶಾ ಜೊತೆ ಸರ್ಬಿಯಾದ ವ್ಯಕ್ತಿಯೊಬ್ಬರ ಹೆಸರು ತಳುಕು ಹಾಕಿಕೊಂಡಿದೆ. ಈ ವ್ಯಕ್ತಿಯಿಂದಾಗಿಯೇ ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿದೆ. ಈ ಕುರಿತಾದ ಸಂಪೂರ್ಣ ವರದಿಯ ವಿಡಿಯೋ ಇಲ್ಲಿ ನೀಡಲಾಗಿದ್ದು, ಕಳೆದ ಕೆಲ ವರ್ಷಗಳಿಂದ ಹಾರ್ದಿಕ್ ಪಾಂಡ್ಯ ಅವರ ಲೈಫಲ್ಲಿ ಏನೆಲ್ಲಾ ಆಗಿದೆ, ಇದೀಗ ಅವರ ಜೀವನ ಎತ್ತ ಸಾಗುತ್ತಿದೆ ಎಂಬುದರ ಸಂಕ್ಷಿಪ್ತ ವಿವರಗಳನ್ನು ಈ ವಿಡಿಯೋ ಮೂಲಕ ವೀಕ್ಷಿಸಬಹುದು.