Sign In

By signing in or creating an account, you agree with Associated Broadcasting Company's Terms & Conditions and Privacy Policy.

Brij Bhushan Singh: ಕೊಲೆ ಯತ್ನ, ಡಕಾಯಿತಿ..ಹಲವು ಕ್ರಿಮಿನಲ್ ಕೇಸ್…ಕುಸ್ತಿ ಒಕ್ಕೂಟದ ಮುಖ್ಯಸ್ಥನ ವಿರುದ್ಧವೇ ಬೀದಿಗಿಳಿದ ಕುಸ್ತಿಪಟುಗಳು

Why wrestler are protesting: 2012 ರಿಂದ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಇದೀಗ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಗಳು ಕೇಳಿ ಬಂದಿವೆ.

Brij Bhushan Singh: ಕೊಲೆ ಯತ್ನ, ಡಕಾಯಿತಿ..ಹಲವು ಕ್ರಿಮಿನಲ್ ಕೇಸ್...ಕುಸ್ತಿ ಒಕ್ಕೂಟದ ಮುಖ್ಯಸ್ಥನ ವಿರುದ್ಧವೇ ಬೀದಿಗಿಳಿದ ಕುಸ್ತಿಪಟುಗಳು
Brij Bhushan Singh
Follow us
ಝಾಹಿರ್ ಯೂಸುಫ್
|

Updated on:Apr 24, 2023 | 6:42 PM

ಭಾರತದ ಕುಸ್ತಿ ಒಕ್ಕೂಟದ (WFI) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಕೇಳಿ ಬಂದ ಈ ಗಂಭೀರ ಆರೋಪದ ಬೆನ್ನಲ್ಲೇ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಹೆಸರು ಕೂಡ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥರಾಗಿರುವ ಬ್ರಿಜ್ ಭೂಷನ್ ಯಾರು? ಎಂದು ಪರಿಶೀಲಿಸಿದರೆ ಒಂದಷ್ಟು ಇತಿಹಾಸ ಪುಟಗಳು ತೆರೆದುಕೊಳ್ಳುತ್ತದೆ.

ಬ್ರಿಜ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದ ಕೈಸರ್‌ಗಂಜ್‌ನಿಂದ ಬಿಜೆಪಿಯಿಂದ ಸ್ಪರ್ಧಿಸಿ ಲೋಕಸಭಾ ಸಂಸದರಾಗಿ  ಆಯ್ಕೆಯಾಗಿದ್ದಾರೆ. ಅಲ್ಲದೆ 2012 ರಿಂದ WFI ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಒಲಿಂಪಿಯನ್ ಕುಸ್ತಿಪಟುಗಳು, ಉತ್ತರ ಪ್ರದೇಶದ ಸಂಸದರ ವಿರುದ್ಧದ ಆರೋಪಗಳ ಮೇಲ್ವಿಚಾರಣಾ ಸಮಿತಿಯ ತನಿಖೆಯನ್ನು ಸರ್ಕಾರ ಸಾರ್ವಜನಿಕಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಕಳೆದ ಜನವರಿಯಲ್ಲಿ ಕೇಳಿ ಬಂದಿದ್ದ ಈ ಆರೋಪವನ್ನು ಭೂಷನ್ ಸಿಂಗ್ ಪ್ರಚಾರದ ಸ್ಟಂಟ್ ಎಂದು ಬಿಂಬಿಸಿದ್ದರು. ಅಲ್ಲದೆ ಪ್ರತಿಭಟನೆ ನಡೆಸಿದ ಕುಸ್ತಿಪಟುಗಳಿಗೆ ಇನ್ನು ಮುಂದೆ ಪದಕಗಳನ್ನು ಗೆಲ್ಲಲು ಸಾಧ್ಯವಿಲ್ಲ….ಅವರ ವೃತ್ತಿಜೀವನವು ಮುಗಿದಿದೆ ಎಂದು ವ್ಯಂಗ್ಯವಾಡಿದ್ದರು.

ಇದಾಗಿ ಮೂರು ತಿಂಗಳುಗಳ ಬಳಿಕ  ಇದೀಗ ಭಾರತೀಯ ಕುಸ್ತಿಪಟುಗಳು ಮತ್ತೊಮ್ಮೆ ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧ  ಪ್ರತಿಭಟನೆಗೆ ಇಳಿದಿದ್ದಾರೆ. ಅಲ್ಲದೆ ಈ ಬಾರಿ ನಮಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸುತ್ತಿದ್ದಾರೆ.

 ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಹಿನ್ನಲೆಯೇನು?

66 ವರ್ಷ ವಯಸ್ಸಿನ ಬ್ರಿಜ್ ಭೂಷಣ್ ಶರಣ್ ಸಿಂಗ್ ಕ್ರಿಮಿನಲ್ ಇತಿಹಾಸ ಹೊಂದಿರುವ ಬಿಜೆಪಿ ನಾಯಕ. 1991 ರಲ್ಲಿ ಮೊದಲ ಬಾರಿಗೆ ಲೋಕಸಭೆಯನ್ನು ಪ್ರವೇಶಿಸಿದ್ದ ಭೂಷನ್ ಸಿಂಗ್ ವಿರುದ್ಧ ಕೊಲೆಯ ಯತ್ನ, ಡಕಾಯಿತಿ, ಇತರರ ಸಾಕ್ಷ್ಯಾಧಾರಗಳ ನಾಶ ಸೇರಿದಂತೆ ಅನೇಕ ಆರೋಪಗಳಿವೆ. ಆದಾಗ್ಯೂ ಅವರು ಇವುಗಳಲ್ಲಿ ಒಂದರಲ್ಲೂ ಅವರಿಗೆ ಶಿಕ್ಷೆಯಾಗಿಲ್ಲ.

ಇನ್ನು ವಿವಾದಿತ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಂಗ್ ಅವರ ಹೆಸರೂ ಕೂಡ ಕೇಳಿ ಬಂದಿತ್ತು. ಹಾಗೆಯೇ ಡಿಸೆಂಬರ್ 2021 ರಲ್ಲಿ, ಅವರು ರಾಂಚಿಯಲ್ಲಿ ಸಾರ್ವಜನಿಕವಾಗಿ ಅಥ್ಲೀಟ್‌ಗೆ ಕಪಾಳಮೋಕ್ಷ ಮಾಡುವ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದರೂ ಅವರು ಅದಕ್ಕಾಗಿ ಅವರು ಕ್ಷಮೆಯಾಚಿಸಲಿಲ್ಲ.  ಅಲ್ಲದೆ ಅದೇ ವರ್ಷ ಜನವರಿಯಲ್ಲಿ ನೋಯ್ಡಾದಲ್ಲಿ ನಡೆದ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ “ತುಂಬಾ ಅನಿಮೇಟೆಡ್” ಎಂದು ರೈಲ್ವೇಸ್ ಕೋಚ್ ಅನ್ನು ಅಮಾನತುಗೊಳಿಸಿ ಸುದ್ದಿಯಾಗಿದ್ದರು.

ಕಳೆದ ವರ್ಷ ಆಗಸ್ಟ್‌ನಲ್ಲಿ, ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ಗೆ 59 ಕೆಜಿ ವಿಭಾಗದಲ್ಲಿ ಭಾರತದ ಪ್ರಾತಿನಿಧ್ಯವನ್ನು ಆಯ್ಕೆ ಮಾಡಲು ಅವರು ಟ್ರಯಲ್ಸ್ ಅನ್ನು 54 ಸೆಕೆಂಡುಗಳ ನಂತರ ಥಟ್ಟನೆ ನಿಲ್ಲಿಸಿದ್ದರು. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಆಶೀರ್ವಾದ ನೀಡಲು ಅಯೋಧ್ಯೆಯ ಸ್ವಾಮೀಜಿಗಳನ್ನು ಆಹ್ವಾನಿಸಲಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣ.

ಅಷ್ಟೇ ಅಲ್ಲದೆ 1993 ರಲ್ಲಿ ನಡೆದ ಸಮಾಜವಾದಿ ಪಕ್ಷದ ಸರ್ಕಾರದ ಮಾಜಿ ಯುಪಿ ಸಚಿವರ ಮೇಲಿನ ದಾಳಿಗೆ ಸಂಬಂಧಿಸಿದ 29 ವರ್ಷಗಳ ಹಳೆಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಭೂಷನ್ ಸಿಂಗ್ ಅವರನ್ನು ಡಿಸೆಂಬರ್‌ನಲ್ಲಿ ಯುಪಿಯ ಗೊಂಡಾ ಜಿಲ್ಲೆಯ ಎಂಪಿ-ಎಂಎಲ್‌ಎ ನ್ಯಾಯಾಲಯವು ಖುಲಾಸೆಗೊಳಿಸಿತ್ತು.

ಇದನ್ನೂ ಓದಿ: IPL 2023: ಸಿಕ್ಸ್​ಗಳ ಸುರಿಮಳೆಗೈದ CSK: ಆದ್ರೂ RCB ದಾಖಲೆ ಮುರಿಯಲಾಗಲಿಲ್ಲ..!

ಇನ್ನು 2012 ರಿಂದ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಇದೀಗ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಗಳು ಕೇಳಿ ಬಂದಿವೆ. ಅಲ್ಲದೆ ಈಗಾಗಲೇ ಭೂಷಣ್ ಸಿಂಗ್ ವಿರುದ್ಧ 7 ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.

ಆದರೆ ಈ ಪ್ರಕರಣದಲ್ಲಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತ ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಸೇರಿದಂತೆ ಭಾರತೀಯ ಕುಸ್ತಿಪಟುಗಳು ಪ್ರತಿಭಟನೆಗೆ ಇಳಿದಿದ್ದಾರೆ.

Published On - 6:42 pm, Mon, 24 April 23

ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್