Harbhajan Singh: ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಹರ್ಭಜನ್ ಸಿಂಗ್ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?; ಇಲ್ಲಿದೆ ಉತ್ತರ

ನನಗೆ ಈಗಾಗಲೇ ವಿವಿಧ ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ, ನಾನು ಬಹಳ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಸಣ್ಣ ನಿರ್ಧಾರವಲ್ಲ

Harbhajan Singh: ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಹರ್ಭಜನ್ ಸಿಂಗ್ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?; ಇಲ್ಲಿದೆ ಉತ್ತರ
ಹರ್ಭಜನ್ ಸಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 25, 2021 | 3:43 PM

ಅಮೃತಸರ: ಟೀಂ ಇಂಡಿಯಾದ ಸ್ಪಿನ್ನರ್ ಹರ್ಭಜನ್ ಸಿಂಗ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಅವರು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ? ಎಂಬ ಚರ್ಚೆಗಳು ಎದ್ದಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಹರ್ಭಜನ್ ಸಿಂಗ್ ಅವರೇ ತೆರೆ ಎಳೆದಿದ್ದಾರೆ. 41 ವರ್ಷದ ಕ್ರಿಕೆಟಿಗ ಹರ್ಭಜನ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹರ್ಭಜನ್ ಸಿಂಗ್ ಟೀಂ ಇಂಡಿಯಾದ ಆಟಗಾರರಾಗಿ 103 ಟೆಸ್ಟ್, 236 ODI ಮತ್ತು 28 T20 ಮ್ಯಾಚ್​ಗಳನ್ನು ಆಡಿದ್ದಾರೆ.

ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವುದರಿಂದ ಮುಂದೆ ರಾಜಕೀಯಕ್ಕೆ ಪ್ರವೇಶಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ಹರ್ಭಜನ್ ಸಿಂಗ್, “ನನಗೆ ಎಲ್ಲಾ ಪಕ್ಷದ ರಾಜಕಾರಣಿಗಳ ಪರಿಚಯವೂ ಇದೆ. ನಾನು ಯಾವುದಾದರೂ ಪಕ್ಷಕ್ಕೆ ಸೇರುವುದಾದರೆ ಮೊದಲೇ ಘೋಷಣೆ ಮಾಡುತ್ತೇನೆ” ಎಂದಿದ್ದಾರೆ.

ನಾನು ಮುಂದಿನ ದಿನಗಳಲ್ಲಿ ಪಂಜಾಬ್​ಗೆ ಸೇವೆ ಸಲ್ಲಿಸಬೇಕೆಂದು ಕೊಂಡಿದ್ದೇನೆ. ಅದು ರಾಜಕೀಯದ ಮೂಲಕವಾಗಿರಬಹುದು ಅಥವಾ ಬೇರೆ ಇನ್ನಾವುದಾದರೂ ಮಾರ್ಗದ ಮೂಲಕವಾಗಿರಬಹುದು. ಯಾವ ರೀತಿಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ನಿಜ ಹೇಳಬೇಕೆಂದರೆ, ನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಯೋಚಿಸಿಲ್ಲ. ನನಗೆ ಈಗಾಗಲೇ ವಿವಿಧ ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ, ನಾನು ಬಹಳ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಸಣ್ಣ ನಿರ್ಧಾರವಲ್ಲ. ರಾಜಕೀಯಕ್ಕೆ ಸಂಪೂರ್ಣವಾದ ಶ್ರದ್ಧೆ ಮತ್ತು ಆಸಕ್ತಿ ಇರಬೇಕು. ನಾನು ಅದನ್ನು ಅರೆಮನಸ್ಸಿನಿಂದ ಮಾಡಲು ಬಯಸುವುದಿಲ್ಲ. ನನಗೆ ರಾಜಕೀಯದಲ್ಲಿ ಧುಮುಕಲು ಆಸಕ್ತಿ ಇದೆ ಅಥವಾ ಶಕ್ತಿಯಿದೆ ಎಂದು ನನಗೆ ಅನಿಸಿದ ದಿನ ನಾನೇ ಎಲ್ಲರಿಗೂ ಘೋಷಣೆ ಮಾಡುತ್ತೇನೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಈ ಹಿಂದೆ, ಪಂಜಾಬ್ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಹರ್ಭಜನ್ ಸಿಂಗ್ ಅವರೊಂದಿಗೆ ತಮ್ಮ ಫೋಟೋವನ್ನು ಟ್ವೀಟ್ ಮಾಡಿದ ನಂತರ ಹರ್ಭಜನ್ ಸಿಂಗ್ ಕಾಂಗ್ರೆಸ್​ ಸೇರುತ್ತಾರೆಂಬ ಊಹಾಪೋಹಗಳು ಎದ್ದಿದ್ದವು.

ಇದನ್ನೂ ಓದಿ: Harbhajan Singh: ಎಲ್ಲಾ ಮಾದರಿ ಕ್ರಿಕೆಟ್​ಗೆ ವಿದಾಯ ಹೇಳಿದ ಹರ್ಭಜನ್ ಸಿಂಗ್ ಆಸ್ತಿ ಮೌಲ್ಯ ಎಷ್ಟು ಗೊತ್ತಾ?

Harbhajan Singh: 23 ವರ್ಷಗಳ ವೃತ್ತಿಜೀವನಕ್ಕೆ ಹರ್ಭಜನ್ ಸಿಂಗ್ ವಿದಾಯ; ಟರ್ಬನೇಟರ್ ಕ್ರಿಕೆಟ್​ ಬದುಕು ಹೇಗಿತ್ತು ಗೊತ್ತಾ?

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ