Women’s Asia Cup 2024: ಬಾಂಗ್ಲಾ ವಿರುದ್ಧ 10 ವಿಕೆಟ್​ಗಳಿಂದ ಗೆದ್ದು ಏಷ್ಯಾಕಪ್ ಫೈನಲ್​ಗೇರಿದ ಭಾರತ

Women's Asia Cup 2024: ಇಂದು ನಡೆದ ಏಷ್ಯಾಕಪ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ, ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 10 ವಿಕೆಟ್​ಗಳಿಂದ ಮಣಿಸಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದೆ. ಲೀಗ್​ ಸುತ್ತಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ಗೆ ಲಗ್ಗೆ ಇಟ್ಟಿದ್ದ ಟೀಂ ಇಂಡಿಯಾ, ಇದೀಗ ಸೆಮಿಫೈನಲ್ ಪಂದ್ಯದಲ್ಲೂ ಬಾಂಗ್ಲಾ ತಂಡವನ್ನು ಸುಲಭವಾಗಿ ಮಣಿಸಿ ಫೈನಲ್​ಗೇರಿದೆ.

Women's Asia Cup 2024: ಬಾಂಗ್ಲಾ ವಿರುದ್ಧ 10 ವಿಕೆಟ್​ಗಳಿಂದ ಗೆದ್ದು ಏಷ್ಯಾಕಪ್ ಫೈನಲ್​ಗೇರಿದ ಭಾರತ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Jul 26, 2024 | 4:54 PM

ಶ್ರೀಲಂಕಾದ ದಂಬುಲಾದ ರಂಗಿರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ, ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 10 ವಿಕೆಟ್​ಗಳಿಂದ ಮಣಿಸಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದೆ. ಲೀಗ್​ ಸುತ್ತಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ಗೆ ಲಗ್ಗೆ ಇಟ್ಟಿದ್ದ ಟೀಂ ಇಂಡಿಯಾ, ಇದೀಗ ಸೆಮಿಫೈನಲ್ ಪಂದ್ಯದಲ್ಲೂ ಬಾಂಗ್ಲಾ ತಂಡವನ್ನು ಸುಲಭವಾಗಿ ಮಣಿಸಿ ಸತತ ಐದನೇ ಬಾರಿಗೆ ಫೈನಲ್​ಗೇರಿದೆ. ಇದೀಗ ಇಂದು ರಾತ್ರಿ ನಡೆಯಲ್ಲಿರುವ ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದ ತಂಡ ಜುಲೈ 28 ರಂದು ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಅಜೇಯ ಭಾರತವನ್ನು ಎದುರಿಸಲಿದೆ.

ಆರಂಭಿಕ ಆಘಾತ ನೀಡಿದ ರೇಣುಕಾ

ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಆರಂಭಿಸಿದ ಬಾಂಗ್ಲಾ ತಂಡಕ್ಕೆ ಮೊದಲ ಓವರ್​ನಲ್ಲೇ ವೇಗಿ ರೇಣುಕಾ ಶಾಕ್ ನೀಡಿದರು. ಅವರು ಬಾಂಗ್ಲಾ ಓಪನರ್ ದಿಲಾರಾ ಅಖ್ತರ್ ವಿಕೆಟ್ ಉರುಳಿಸಿ ಭಾರತಕ್ಕೆ ಮೊದಲ ಯಶಸ್ಸು ನೀಡಿದರು. ತಮ್ಮ ಖೋಟಾದ ಎರಡನೇ ಓವರ್​ನಲ್ಲೂ ವಿಕೆಟ್ ಭೇಟೆ ಮುಂದುವರೆಸಿದ ರೇಣುಕಾ ಮತ್ತೊಬ್ಬ ಓಪನರ್ ಮುರ್ಷಿದಾ ಖಾತೂನ್ ಅವರನ್ನು ಪೆವಿಲಿಯನ್​ಗಟ್ಟಿದರು. ಇನ್ನು 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಇಶ್ಮಾ ತಂಜೀಮ್ ಕೂಡ 8 ರನ್‌ಗಳಿಸಿ ರೇಣುಕಾ ಸಿಂಗ್​ಗೆ ಬಲಿಯಾದರು. ಹೀಗಾಗಿ ತಂಡ ಕೇವಲ 23 ರನ್​ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡಿತು.

ನಾಯಕಿ ಸುಲ್ತಾನಾ ಏಕಾಂಗಿ ಹೋರಾಟ

ಆ ನಂತರವೂ ಬಾಂಗ್ಲಾ ತಂಡದ ಪೆವಿಲಿಯನ್ ಪರೇಡ್ ಮುಂದುವರೆದಿತ್ತು. ಮೊದಲು ರೇಣುಕಾ ಸಿಂಗ್ ದಾಳಿಗೆ ಬೆದರಿದ ಬಾಂಗ್ಲಾ, ಆ ನಂತರ ರಾಧಾ ಯಾದವ್​ರ ಸ್ಪಿನ್​ ಮೋಡಿಗೆ ಮಕಾಡೆ ಮಲಗಿತು. ರಾಧಾ ಕೂಡ ರೇಣುಕಾರಂತೆ ಪ್ರಮುಖ 3 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಒಂದೆಡೆ ಸತತ ವಿಕೆಟ್ ಪತನದ ನಡುವೆಯೂ ಜವಬ್ದಾರಿಯುತ ಬ್ಯಾಟಿಂಗ್ ನಡೆಸಿದ ನಾಯಕಿ ನಿಗರ್ ಸುಲ್ತಾನಾ ಅತ್ಯಧಿಕ 32 ರನ್ ದಾಖಲಿಸಿ, ತಂಡವನ್ನು 80 ರನ್​ಗಳ ಗಡಿಗೆ ತಂದರು. ಇಲ್ಲದಿದ್ದರೆ ತಂಡ 50 ರನ್​ಗಳ ಗಡಿ ಕೂಡ ದಾಟುತ್ತಿರಲಿಲ್ಲ.

ಭಾರತಕ್ಕೆ ಸುಲಭ ಜಯ

ಬಾಂಗ್ಲಾದೇಶ ನೀಡಿದ 80 ರನ್​ಗಳ ಸುಲಭ ಗುರಿ ಬೆನ್ನಟ್ಟಿದ ಭಾರತದ ಆರಂಭಿಕರು, ಬಾಂಗ್ಲಾ ಬೌಲರ್​ಗಳಿಗೆ ವಿಕೆಟ್ ಉರುಳಿಸುವ ಒಂದೇ ಒಂದು ಅವಕಾಶ ನೀಡಲಿಲ್ಲ.  ಹೀಗಾಗಿ ಕೇವಲ 11 ಓವರ್​ಗಳಲ್ಲಿ ಭಾರತ ತಂಡ ಗೆಲುವಿನ ದಡ ಮುಟ್ಟಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಅಜೇಯ 83 ರನ್​ಗಳ ಜೊತೆಯಾಟವನ್ನಾಡಿದರು. ಇದರಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಸ್ಮೃತಿ 39 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 55 ರನ್ ಬಾರಿಸಿದರೆ, ಶಫಾಲಿ ವರ್ಮಾ 28 ಎಸೆತಗಳಲ್ಲಿ 2 ಬೌಂಡರಿ ಸಹಿತ ಅಜೇಯ 26 ರನ್​ಗಳ ಗೆಲುವಿನ ಕಾಣಿಕೆ ನೀಡಿದರು.

Published On - 4:35 pm, Fri, 26 July 24

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ