AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಏಷ್ಯಾಕಪ್ ಗೆದ್ದರೆ ಟ್ರೋಫಿ ಜೊತೆಗೆ ಬಹುಮಾನವೂ ಸಿಗುವುದಿಲ್ಲ..!

2026ರ ಮಹಿಳಾ ಟಿ20 ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಸೆಪ್ಟೆಂಬರ್ 13ರಂದು ಮುಖಾಮುಖಿಯಾಗಲಿವೆ. ಕಳೆದ ಆವೃತ್ತಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ. ಆದರೆ, ಗೆದ್ದರೂ ಭಾರತಕ್ಕೆ ಟ್ರೋಫಿ ಅಥವಾ ಬಹುಮಾನದ ಹಣ ಸಿಗುವುದಿಲ್ಲ. ಬಿಸಿಸಿಐ ಬಹುಮಾನವನ್ನು ಇತರ ಕ್ರಿಕೆಟ್ ಮಂಡಳಿಗಳಿಗೆ ನೀಡುವ ಸಂಪ್ರದಾಯ ಹೊಂದಿದ್ದು, ACC ಅಧ್ಯಕ್ಷ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸದಿರುವ ನಿರ್ಧಾರ ಇದಕ್ಕೆ ಕಾರಣ.

ಪೃಥ್ವಿಶಂಕರ
|

Updated on:Sep 12, 2026 | 2:55 PM

Share
2026 ರ ಮಹಿಳಾ ಟಿ20 ಏಷ್ಯಾಕಪ್​ ಫೈನಲ್​ನಲ್ಲಿ ಯಾವೆರಡು ತಂಡಗಳು ಮುಖಾಮುಖಿಯಾಗಲಿವೆ ಎಂಬುದು ಖಚಿತವಾಗಿದೆ. ಒಂದೆಡೆ ಮೊದಲ ಸೆಮಿಫೈನಲ್​ನಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ಟೀಂ ಇಂಡಿಯಾ ಅಜೇಯ ತಂಡವಾಗಿ ಫೈನಲ್​ಗೇರಿದ್ದರೆ, ಇತ್ತ ಎರಡನೇ ಸೆಮಿಫೈನಲ್​ನಲ್ಲಿ ಪಾಕಿಸ್ತಾನವನ್ನು ಮಣಿಸಿದ ಶ್ರೀಲಂಕಾ ಕೂಡ ಅಜೇಯ ತಂಡವಾಗಿ ಫೈನಲ್​ಗೇರಿದೆ(PC-ACC X).

1 / 5
ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ಸೆಫ್ಟೆಂಬರ್ 13 ರ ಭಾನುವಾರದಂದು ನಡೆಯಲಿದೆ. ಈ ಫೈನಲ್ ಪಂದ್ಯದಲ್ಲಿ ಗೆದ್ದು ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾವಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಏಷ್ಯಾಕಪ್ ಫೈನಲ್​ನಲ್ಲಿ ಈ ಎರಡು ತಂಡಗಳೇ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತವನ್ನು ಮಣಿಸಿದ ಶ್ರೀಲಂಕಾ ಚಾಂಪಿಯನ್ ಆಗಿತ್ತು(PC-BCCI Women X).

2 / 5
ಇದೀಗ ಶ್ರೀಲಂಕಾವನ್ನು ಮಣಿಸುವ ಮೂಲಕ ಚಾಂಪಿಯನ್ ಆಗುವ ಗುರಿಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೂ ಅದಕ್ಕೆ ಟ್ರೋಫಿಯಾಗಲಿ ಅಥವಾ ಬಹುಮಾನದ ಹಣವಾಗಲಿ ಸಿಗುವುದಿಲ್ಲ. ಹಾಗಿದ್ದರೆ, ಟೀಂ ಇಂಡಿಯಾಕ್ಕೆ ಏಕೆ ಟ್ರೋಫಿ ಮತ್ತು ಬಹುಮಾನ ಸಿಗುವುದಿಲ್ಲ ಎಂಬುದನ್ನು ನೋಡುವುದಾದರೆ(PC-BCCI Women X)..

3 / 5
ಮೊದಲಿಗೆ ಟೀಂ ಇಂಡಿಯಾ ಚಾಂಪಿಯನ್ ಆದರೆ ಅದಕ್ಕೆ ಬಹುಮಾನವನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನೀಡುತ್ತದೆ. ಆದರೆ ಈ ಬಹುಮಾನವನ್ನು ಟೀಂ ಇಂಡಿಯಾ ತನ್ನಲ್ಲಿ ಉಳಿಸಿಕೊಳ್ಳುವುದಿಲ್ಲ. ಬದಲಿಗೆ  ಏಷ್ಯಾದ ಇತರ ಕ್ರಿಕೆಟ್ ಮಂಡಳಿಗಳ ಅಭಿವೃದ್ಧಿಗೆ ನೀಡುತ್ತದೆ. ಬಿಸಿಸಿಐನ ಈ ಪ್ರವೃತ್ತಿ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಹೀಗಾಗಿ ಈ ವರ್ಷವೂ ಅದೇ ಮುಂದುವರೆಯಲಿದೆ(PC-BCCI Women X).

4 / 5
ಇನ್ನು ಟೀಂ ಇಂಡಿಯಾಕ್ಕೆ ಟ್ರೋಫಿ ಏತಕೆ ಸಿಗುವುದಿಲ್ಲ ಎಂಬುದನ್ನು ನೋಡುವುದಾದರೆ...ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿರುವುದು ಪಾಕಿಸ್ತಾನದ ಮೊಹ್ಸಿನ್ ನಖ್ವಿ. ನಖ್ವಿ ಕೈಯಿಂದ ಟೀಂ ಇಂಡಿಯಾ ಟ್ರೋಫಿ ಸ್ವೀಕರಿಸುವ ಸಾಧ್ಯತೆಗಳಿಲ್ಲ. ಏಕೆಂದರೆ ಪುರುಷರ ಏಷ್ಯಾಕಪ್​ನಲ್ಲಿ ಭಾರತ ತಂಡ ನಖ್ವಿ ಕೈಯಿಂದ ಟ್ರೋಫಿ ಸ್ವೀಕರಿಸಲಿಲ್ಲ. ಇದರಿಂದ ನಖ್ವಿ ಟ್ರೋಫಿಯನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದಾರೆ. ಇದೀಗ ಮಹಿಳಾ ತಂಡವೂ ಕೂಡ ಪುರುಷರ ತಂಡದ ನಡೆಯನ್ನು ಅನುಸರಿಸುವ ಸಾಧ್ಯತೆಗಳಿವೆ(PC-BCCI Women X).

5 / 5

Published On - 2:55 pm, Sat, 12 September 26

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!

ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!

ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್

ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ

ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ

80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ

ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ

ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ

8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?

ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ