Women’s T20 World Cup 2026: ಚಾಂಪಿಯನ್ ತಂಡಕ್ಕೆ ಸಿಗಲಿದೆ ದಾಖಲೆಯ ಬಹುಮಾನ..!
Women's T20 World Cup 2026 Prize Money: 10ನೇ ಮಹಿಳಾ ಟಿ20 ವಿಶ್ವಕಪ್ ಜೂನ್ 12ರಿಂದ ಜುಲೈ 5ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ನಡೆಯಲಿದೆ. ಈ ಬಾರಿಯ ಪಂದ್ಯಾವಳಿಯಲ್ಲಿ 12 ತಂಡಗಳು ಭಾಗವಹಿಸಲಿದ್ದು, ಒಟ್ಟು ಬಹುಮಾನದ ಮೊತ್ತ 83 ಕೋಟಿ ರೂ.ಗೆ ಏರಿಕೆಯಾಗಿದೆ. ಜೂನ್ 14ರಂದು ಭಾರತ ತಂಡ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ವಿಜೇತ ತಂಡಕ್ಕೆ 21.8 ಕೋಟಿ ರೂ. ಬಹುಮಾನ ಲಭಿಸಲಿದೆ.

10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ಗೆ (Women’s T20 World Cup 2026) ಕ್ಷಣಗಣನೆ ಆರಂಭವಾಗಿದೆ. ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ಈ ಪಂದ್ಯಾವಳಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ ರೂ.ಗೆ ಏರಿಸಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ.
- ಹಿಂದಿನ ಆವೃತ್ತಿಗೆ ಹೋಲಿಸಿದರೆ ಒಟ್ಟು ಬಹುಮಾನದ ಹಣವನ್ನು ಶೇಕಡಾ 10 ರಷ್ಟು ಹೆಚ್ಚಿಸಲಾಗಿದೆ.
- ಯುಎಇಯಲ್ಲಿ ನಡೆದ ಕಳೆದ ಮಹಿಳಾ ಟಿ20 ವಿಶ್ವಕಪ್ನ ಒಟ್ಟು ಬಹುಮಾನದ ಮೊತ್ತ 74 ಕೋಟಿ ರೂ.ಗಳಾಗಿತ್ತು.
- ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 12 ತಂಡಗಳು ಭಾಗವಹಿಸಲಿವೆ.
- ಕಳೆದ ಆವೃತ್ತಿಯ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದವು.
- ಭಾಗವಹಿಸುವ 12 ತಂಡಗಳು ಕನಿಷ್ಠ 2.06 ಕೋಟಿ ರೂಪಾಯಿಗಳ ಖಚಿತ ಬಹುಮಾನ ಹಣವನ್ನು ಪಡೆಯುತ್ತವೆ.
- ಭಾರತ ತಂಡ ಜೂನ್ 14 ರಂದು ಪಾಕಿಸ್ತಾನ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
- 2026 ರ ಪುರುಷರ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ 25 ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು.
12 teams, seven venues, one ultimate prize 🏆
A comprehensive guide to the biggest-ever Women’s #T20WorldCup 📋https://t.co/g5aDUKWFDK
— ICC (@ICC) June 4, 2026
ಯಾರಿಗೆ ಎಷ್ಟು ಬಹುಮಾನ ಸಿಗಲಿದೆ?
- ವಿಜೇತ ತಂಡಕ್ಕೆ: 21.8 ಕೋಟಿ ರೂ.
- ರನ್ನರ್ ಅಪ್ ತಂಡಕ್ಕೆ: 10 ಕೋಟಿ ರೂ.
- ಸೆಮಿಫೈನಲಿಸ್ಟ್ ತಂಡಗಳಿಗೆ: 6.29 ಕೋಟಿ ರೂ.
- ಗುಂಪು ಪಂದ್ಯಗಳನ್ನು ಗೆದ್ದ ತಂಡಗಳಿಗೆ: 29 ಲಕ್ಷ ರೂ.
ಭಾರತದ ವೇಳಾಪಟ್ಟಿ
- ಜೂನ್ 14 ರಂದು ಪಾಕಿಸ್ತಾನ ವಿರುದ್ಧ
- ಜೂನ್ 17 ರಂದು ನೆದರ್ಲ್ಯಾಂಡ್ಸ್ ವಿರುದ್ಧ
- ಜೂನ್ 21 vs ದಕ್ಷಿಣ ಆಫ್ರಿಕಾ ವಿರುದ್ಧ
- ಜೂನ್ 25 ರಂದು ಬಾಂಗ್ಲಾದೇಶ ವಿರುದ್ಧ
- ಜೂನ್ 28 ರಂದು ಆಸ್ಟ್ರೇಲಿಯಾ ವಿರುದ್ಧ
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:28 pm, Thu, 4 June 26




