AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್ ಲೋಕಕ್ಕೆ ಭಾರತೀಯನೇ ಸಾಮ್ರಾಟ; ವಿಶ್ವ ಚೆಸ್ ಕಿರೀಟ ತೊಟ್ಟ 18 ವರ್ಷದ ಗುಕೇಶ್

World Chess Championship 2024: ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ 18 ರ ಹರೆಯದ ಡಿ ಗುಕೇಶ್, ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ವಿಶ್ವನಾಥನ್ ಆನಂದ್ ನಂತರ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಗುಕೇಶ್ ಪಾತ್ರರಾಗಿದ್ದಾರೆ.

ಚೆಸ್ ಲೋಕಕ್ಕೆ ಭಾರತೀಯನೇ ಸಾಮ್ರಾಟ; ವಿಶ್ವ ಚೆಸ್ ಕಿರೀಟ ತೊಟ್ಟ 18 ವರ್ಷದ ಗುಕೇಶ್
ಗುಕೇಶ್
ಪೃಥ್ವಿಶಂಕರ
|

Updated on:Dec 12, 2024 | 8:26 PM

Share

ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಗೇಮ್​ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್​ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಈ ರೋಚಕ ಹಣಾಹಣಿಯಲ್ಲಿ ಕಳೆದ ಬಾರಿಯ ಚಾಂಪಿಯನ್ ಚೀನಾದ ಡಿಂಗ್ ಲಿರೆನ್​ಗೆ ಚೆಕ್ ಮೇಟ್ ನೀಡಿದ ಗುಕೇಶ್, ವಿಶ್ವನಾಥನ್ ಆನಂದ್ ನಂತರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನೆನಿಸಿಕೊಂಡಿದ್ದಾರೆ. ಇದಲ್ಲದೆ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ.

14 ಸುತ್ತುಗಳಲ್ಲೂ ರೋಚಕ ಹಣಾಹಣಿ

ಹದಿನೈದು ದಿನಗಳ ಕಾಲ ನಡೆದ ಈ ವಿಶ್ವ ಚೆಸ್ ಪಂದ್ಯಾವಳಿಯಲ್ಲಿ ಉಭಯ ಆಟಗಾರರು ಪ್ರಬಲ ಪೈಪೋಟಿ ನೀಡಿದರು. ಹೀಗಾಗಿ ಇದಕ್ಕೂ ಮುನ್ನ ಆಡಿದ 13 ಸುತ್ತುಗಳಲ್ಲಿ ಇಬ್ಬರೂ ತಲಾ 2 ಪಂದ್ಯ ಗೆದ್ದಿದ್ದರೆ, ಉಳಿದ 9 ಪಂದ್ಯಗಳು ಡ್ರಾ ಆಗಿದ್ದವು. ಆದ್ದರಿಂದ ಇಬ್ಬರ ಬಳಿಯೂ ತಲಾ 6.5 ಅಂಕಗಳಿದ್ದವು. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯ ನಿರ್ಣಾಯಕವಾಗಿತ್ತು. ಒಂದು ವೇಳೆ ಈ ಪಂದ್ಯವೂ ಡ್ರಾ ಆಗಿದ್ದರೆ ಇಬ್ಬರೂ ತಲಾ 7 ಅಂಕ ಗಳಿಸಿ ಟೈಬ್ರೇಕರ್ ಮೂಲಕ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಆದರೆ ಇದಕ್ಕೆ ಅವಕಾಶ ನೀಡಿದ ಗುಕೇಶ್ ಅಂತಿಮವಾಗಿ 7.5- 6.5 ಅಂಕಗಳ ಅಂತರದಿಂದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಇತಿಹಾಸ ಸೃಷ್ಟಿಸಿದ ಗುಕೇಶ್

ಮೇಲೆ ಹೇಳಿದಂತೆ ಕೇವಲ 18ನೇ ವಯಸ್ಸಿಗೆ ಈ ಪ್ರಶಸ್ತಿ ಜಯಿಸುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಎಂಬ ದಾಖಲೆಯನ್ನು ಗುಕೇಶ್ ನಿರ್ಮಿಸಿದ್ದಾರೆ. ಇವರಿಗೂ ಮುನ್ನ ರಷ್ಯಾದ ಗ್ಯಾರಿ ಕಾಸ್ಪರೋವ್ ಅವರು 1985 ರಲ್ಲಿ ಅನಾಟೊಲಿ ಕಾರ್ಪೋವ್ ಅವರನ್ನು ಸೋಲಿಸುವ ಮೂಲಕ ಕೇವಲ 22 ನೇ ವಯಸ್ಸಿನಲ್ಲಿ ಈ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ಅತಿ ಕಿರಿಯ ಎನಿಸಿಕೊಂಡಿದ್ದರು. ಆದರೀಗ ಗುಕೇಶ್ 18 ವರ್ಷ, ಎಂಟು ತಿಂಗಳು ಮತ್ತು 14 ದಿನಗಳಲ್ಲಿ ಈ ಸಾಧನೆ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Thu, 12 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ