ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಗೇಮ್ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಈ ರೋಚಕ ಹಣಾಹಣಿಯಲ್ಲಿ ಕಳೆದ ಬಾರಿಯ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ಗೆ ಚೆಕ್ ಮೇಟ್ ನೀಡಿದ ಗುಕೇಶ್, ವಿಶ್ವನಾಥನ್ ಆನಂದ್ ನಂತರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನೆನಿಸಿಕೊಂಡಿದ್ದಾರೆ. ಇದಲ್ಲದೆ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ.
ಹದಿನೈದು ದಿನಗಳ ಕಾಲ ನಡೆದ ಈ ವಿಶ್ವ ಚೆಸ್ ಪಂದ್ಯಾವಳಿಯಲ್ಲಿ ಉಭಯ ಆಟಗಾರರು ಪ್ರಬಲ ಪೈಪೋಟಿ ನೀಡಿದರು. ಹೀಗಾಗಿ ಇದಕ್ಕೂ ಮುನ್ನ ಆಡಿದ 13 ಸುತ್ತುಗಳಲ್ಲಿ ಇಬ್ಬರೂ ತಲಾ 2 ಪಂದ್ಯ ಗೆದ್ದಿದ್ದರೆ, ಉಳಿದ 9 ಪಂದ್ಯಗಳು ಡ್ರಾ ಆಗಿದ್ದವು. ಆದ್ದರಿಂದ ಇಬ್ಬರ ಬಳಿಯೂ ತಲಾ 6.5 ಅಂಕಗಳಿದ್ದವು. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯ ನಿರ್ಣಾಯಕವಾಗಿತ್ತು. ಒಂದು ವೇಳೆ ಈ ಪಂದ್ಯವೂ ಡ್ರಾ ಆಗಿದ್ದರೆ ಇಬ್ಬರೂ ತಲಾ 7 ಅಂಕ ಗಳಿಸಿ ಟೈಬ್ರೇಕರ್ ಮೂಲಕ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಆದರೆ ಇದಕ್ಕೆ ಅವಕಾಶ ನೀಡಿದ ಗುಕೇಶ್ ಅಂತಿಮವಾಗಿ 7.5- 6.5 ಅಂಕಗಳ ಅಂತರದಿಂದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.
THE EMOTIONS…!!! 🥹❤️
– 18 Year Old Gukesh Dommaraju creating history by becoming the youngest ever champion. 🇮🇳 pic.twitter.com/LVkA8JMKM1
— Mufaddal Vohra (@mufaddal_vohra) December 12, 2024
Stunning emotions as Gukesh cries after winning the World Championship title! #DingGukesh pic.twitter.com/E53h0XOCV3
— chess24 (@chess24com) December 12, 2024
ಮೇಲೆ ಹೇಳಿದಂತೆ ಕೇವಲ 18ನೇ ವಯಸ್ಸಿಗೆ ಈ ಪ್ರಶಸ್ತಿ ಜಯಿಸುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಎಂಬ ದಾಖಲೆಯನ್ನು ಗುಕೇಶ್ ನಿರ್ಮಿಸಿದ್ದಾರೆ. ಇವರಿಗೂ ಮುನ್ನ ರಷ್ಯಾದ ಗ್ಯಾರಿ ಕಾಸ್ಪರೋವ್ ಅವರು 1985 ರಲ್ಲಿ ಅನಾಟೊಲಿ ಕಾರ್ಪೋವ್ ಅವರನ್ನು ಸೋಲಿಸುವ ಮೂಲಕ ಕೇವಲ 22 ನೇ ವಯಸ್ಸಿನಲ್ಲಿ ಈ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ಅತಿ ಕಿರಿಯ ಎನಿಸಿಕೊಂಡಿದ್ದರು. ಆದರೀಗ ಗುಕೇಶ್ 18 ವರ್ಷ, ಎಂಟು ತಿಂಗಳು ಮತ್ತು 14 ದಿನಗಳಲ್ಲಿ ಈ ಸಾಧನೆ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:40 pm, Thu, 12 December 24