World Chess Championship 2024: ಭಾರತದ ಗುಕೇಶ್​ಗೆ ಮೊದಲ ಗೆಲುವು

World Chess Championship 2024: ವಿಶ್ವ ಚೆಸ್ ಚಾಂಪಿಯನ್‌ಶಿಪ್ ಮೂರನೇ ಗೇಮ್​ನಲ್ಲಿ ಅದ್ಭುತ ಪುನರಾಗಮನವನ್ನು ಮಾಡಿರುವ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್, ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಸ್ಕೋರ್ ಅನ್ನು 1.5-1.5 ರಲ್ಲಿ ಸಮಗೊಳಿಸಿದ್ದಾರೆ.

World Chess Championship 2024: ಭಾರತದ ಗುಕೇಶ್​ಗೆ ಮೊದಲ ಗೆಲುವು
ಗುಕೇಶ್
Follow us
ಪೃಥ್ವಿಶಂಕರ
|

Updated on:Nov 27, 2024 | 11:09 PM

ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆಯುತ್ತಿರುವ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಮೂರನೇ ಗೇಮ್​ನಲ್ಲಿ ಅದ್ಭುತ ಪುನರಾಗಮನವನ್ನು ಮಾಡಿರುವ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್, ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಸ್ಕೋರ್ ಅನ್ನು 1.5-1.5 ರಲ್ಲಿ ಸಮಗೊಳಿಸಿದ್ದಾರೆ. ವಾಸ್ತವವಾಗಿ ನವೆಂಬರ್ 25 ರಿಂದ ಆರಂಭವಾಗಿರುವ ಈ ಫೈನಲ್ ಪಂದ್ಯದ ಮೊದಲ ಗೇಮ್​ನಲ್ಲಿ ಗುಕೇಶ್ ಅವರನ್ನು ಲಿರೆನ್ 1.5-0.5 ರಿಂದ ಸೋಲಿಸಿದ್ದರು. ಆ ಬಳಿಕ ಮಂಗಳವಾರ ನಡೆದಿದ್ದ ಎರಡನೇ ಪಂದ್ಯ ಡ್ರಾ ಆಗಿತ್ತು. ಇದೀಗ ಇಂದು ನಡೆದ ಮೂರನೇ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಗುಕೇಶ್ ಜಯದ ಹಾದಿಗೆ ಮರಳಿದ್ದಾರೆ.

14 ಸುತ್ತುಗಳು

ವಿಶ್ವ ಚೆಸ್ ಚಾಂಪಿಯನ್‌ಶಿಪ್​ನಲ್ಲಿ ಒಟ್ಟು 14 ಸುತ್ತುಗಳು ನಡೆಯಲಿವೆ. ಇದು ಡಿಸೆಂಬರ್ 12 ರವರೆಗೆ ನಡೆಯಲಿದೆ. ಅಗತ್ಯ ಬಿದ್ದರೆ ಡಿಸೆಂಬರ್ 13 ರಂದು ಟೈಬ್ರೇಕರ್ ಸುತ್ತು ನಡೆಯಲಿದೆ. ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಇಬ್ಬರು ಏಷ್ಯನ್ ಆಟಗಾರರು ವಿಶ್ವ ಚಾಂಪಿಯನ್ ಆಗಲು ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಗುಕೇಶ್ ಮತ್ತು ಡಿಂಗ್ ಒಂದು ಗೇಮ್ ಗೆದ್ದರೆ 1 ಅಂಕ ಮತ್ತು ಡ್ರಾಗೆ 0.5 ಅಂಕಗಳನ್ನು ಪಡೆಯುತ್ತಾರೆ. ಚಾಂಪಿಯನ್‌ಶಿಪ್ ಗೆಲ್ಲಲು 7.5 ಅಂಕಗಳ ಅಗತ್ಯವಿದ್ದು, 14 ಸುತ್ತುಗಳ ನಂತರ ಸ್ಕೋರ್ ಟೈ ಆಗಿದ್ದರೆ, ಟೈಬ್ರೇಕರ್‌ ಮೂಲಕ ವಿಜೇತರನ್ನು ಘೋಷಿಸಲಾಗುತ್ತದೆ.

ಗುಕೇಶ್ ಗೆದ್ದರೆ ವಿಶ್ವ ದಾಖಲೆ

ಇನ್ನು ಈ ಚಾಂಪಿಯನ್‌ಶಿಪ್​ನಲ್ಲಿ ಗುಕೇಶ್‌ನತ್ತ ಎಲ್ಲರ ದೃಷ್ಟಿ ನೆಟ್ಟಿದ್ದು, ಒಂದು ವೇಳೆ ಈ ಪಂದ್ಯದಲ್ಲಿ ಅವರು ಗೆದ್ದರೆ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಅತ್ಯಂತ ಕಿರಿಯ ಚೆಸ್ ಚೆತುರ ಎಂಬ ದಾಖಲೆ ಬರೆಯಲಿದ್ದಾರೆ. ಇದರ ಜೊತೆಗೆ ಈ ಸಾಧನೆ ಮಾಡಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಗುಕೇಶ್​ಗೂ ಮೊದಲು ವಿಶ್ವನಾಥನ್ ಆನಂದ್ 5 ಬಾರಿ ವಿಶ್ವ ಚಾಂಪಿಯನ್ ಆಗಿದ್ದಾರೆ.

ವಿಶ್ವ ಚೆಸ್ ಚಾಂಪಿಯನ್‌ಶಿಪ್​ಗೂ ಮುನ್ನ ಏಪ್ರಿಲ್‌ನಲ್ಲಿ ಟೊರೊಂಟೊದಲ್ಲಿ ನಡೆದ ಕ್ಯಾಂಡಿಡೇಟ್ಸ್ ಚೆಸ್ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಗುಕೇಶ್, ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆಟಗಾರ (17 ವರ್ಷ) ಎನಿಸಿಕೊಂಡಿದ್ದರು. ಗುಕೇಶ್‌ಗಿಂತ ಮೊದಲು, ರಷ್ಯಾದ ಆಟಗಾರ ಗ್ಯಾರಿ ಕಾಸ್ಪರೋವ್ 1984 ರಲ್ಲಿ ತನ್ನ 22 ನೇ ವಯಸ್ಸಿನಲ್ಲಿ ಈ ಪಂದ್ಯಾವಳಿಯನ್ನು ಗೆದ್ದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 pm, Wed, 27 November 24

Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..