AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಸೇರಿದಂತೆ 3 ಪದಕ! ಫಿನ್​ಲ್ಯಾಂಡ್​ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ 94 ವರ್ಷದ ಅಜ್ಜಿ

94 ನೇ ವಯಸ್ಸಿನಲ್ಲಿ, ಭಗವಾನ್ ದೇವಿ ದಾಗರ್ ಎಂಬ ಅಜ್ಜಿ ಫಿನ್‌ಲ್ಯಾಂಡ್‌ನಲ್ಲಿ, ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ರಲ್ಲಿ ಹಿರಿಯ ನಾಗರಿಕರ ವಿಭಾಗದಲ್ಲಿ ಒಂದು ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದಿದ್ದಾರೆ.

ಚಿನ್ನ ಸೇರಿದಂತೆ 3 ಪದಕ! ಫಿನ್​ಲ್ಯಾಂಡ್​ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ 94 ವರ್ಷದ ಅಜ್ಜಿ
ಭಗವಾನ್ ದೇವಿ ದಾಗರ್
TV9 Web
| Updated By: ಪೃಥ್ವಿಶಂಕರ|

Updated on: Jul 11, 2022 | 3:57 PM

Share

ಯಾವ ವಯಸ್ಸಿನಲ್ಲಿ ಜನರು ವಿಶ್ರಾಂತಿ ಪಡೆಯಬೇಕೆಂದು ಸಲಹೆ ನೀಡುತ್ತಾರೋ, ಆ ವಯಸ್ಸಿನಲ್ಲಿ, ಭಾರತೀಯ ಅಥ್ಲೀಟ್ ವಿದೇಶಿ ನೆಲದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. 94 ನೇ ವಯಸ್ಸಿನಲ್ಲಿ, ಭಗವಾನ್ ದೇವಿ ದಾಗರ್ (Bhagwan Devi Dagar) ಎಂಬ ಅಜ್ಜಿ, ಫಿನ್‌ಲ್ಯಾಂಡ್‌ನಲ್ಲಿ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರು ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 (World Masters Athletics Championships 2022)ರಲ್ಲಿ ಹಿರಿಯ ನಾಗರಿಕರ ವಿಭಾಗದಲ್ಲಿ ಒಂದು ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದಿದ್ದಾರೆ. ಭಗವಾನ್ ದೇವಿ 100 ಮೀಟರ್ ಓಟದಲ್ಲಿ ಚಿನ್ನ ಗೆದ್ದರೆ, ಶಾಟ್‌ಪುಟ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 100 ಮೀಟರ್ ಓಟವನ್ನು 24.74 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸುವ ಮೂಲಕ ಭಾರತದ ಬ್ಯಾಗ್‌ಗೆ ಚಿನ್ನವನ್ನು ಹಾಕಿದ್ದಾರೆ.

ವಯಸ್ಸು ಅಡ್ಡಿಯಿಲ್ಲ

ಇದನ್ನೂ ಓದಿ
Image
IND vs ENG: ಸೂರ್ಯ ಮುಳುಗದ ನಾಡಿನಲ್ಲಿ ದಾಖಲೆಗಳ ಮಳೆ ಸುರಿಸಿದ ಸೂರ್ಯ..!
Image
Wimbledon 2022: ಸತತ ನಾಲ್ಕನೇ ಬಾರಿಗೆ ಚಾಂಪಿಯನ್; 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದ ನೊವಾಕ್ ಜೊಕೊವಿಕ್..!

ಟ್ವೀಟ್‌ನಲ್ಲಿ ಕ್ರೀಡಾ ಸಚಿವಾಲಯ ಭಗವಾನಿ ದೇವಿ ಅವರನ್ನು ಹೊಗಳಿದ್ದು, ಸಾಧನೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಅವರು ಈ ಹಿಂದೆ ದೆಹಲಿ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 100 ಮೀಟರ್ ಓಟ, ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತದಲ್ಲಿ 3 ಚಿನ್ನದ ಪದಕಗಳನ್ನು ಗೆದ್ದಿದ್ದರು ಎಂಬುದನ್ನು ಸಹ ಉಲ್ಲೇಖಿಸಿದ್ದಾರೆ.

‘ಕಡಿಮೆ ಇಲ್ಲ ಅಜ್ಜಿ’

ಭಗವಾನಿ ದೇವಿಯ ಮೊಮ್ಮಗ ವಿಕಾಸ್ ದಾಗರ್ ಪ್ಯಾರಾ ಅಥ್ಲೀಟ್ ಆಗಿದ್ದು, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಈಗ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅವರ ಧೈರ್ಯ ಮತ್ತು ಉತ್ಸಾಹವನ್ನು ಇಡೀ ದೇಶ ಕೊಂಡಾಡುತ್ತಿದೆ. ನಮ್ಮ ಅಜ್ಜಿ ಯಾರಿಗೂ ಕಡಿಮೆ ಇಲ್ಲ ಎನ್ನುತ್ತಾರೆ ಅಭಿಮಾನಿಗಳು. ಅವರ ವಿಶ್ವಾಸವನ್ನು ನೋಡಿ ಎಂದು ಮಾಜಿ ಕ್ಯಾಬಿನೆಟ್ ಸಚಿವ ಅಸ್ಲಾಂ ಶೇಖ್ ಹೇಳಿಕೊಂಡು ಅಜ್ಜಿಯನ್ನು ಹೊಗಳಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ