WPL 2026: ಮೊದಲ ಪಂದ್ಯದಲ್ಲಿ ಆರ್‌ಸಿಬಿ- ಮುಂಬೈ ಕಣಕ್ಕೆ; ಪಂದ್ಯ ಎಷ್ಟು ಗಂಟೆಗೆ ಆರಂಭ?
WPL 2026, MI vs RCB: ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಮೃತಿ ಮಂಧಾನ ನಾಯಕತ್ವದ ಬಲಿಷ್ಠ ತಂಡಗಳ ನಡುವೆ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ರಾತ್ರಿ 7:30 ಕ್ಕೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಲಾಗಿದೆ. ಬ್ಯಾಟಿಂಗ್‌ಗೆ ಅನುಕೂಲಕರ ಪಿಚ್‌ನಲ್ಲಿ ರನ್‌ಗಳ ಸುರಿಮಳೆ ಖಚಿತ.

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಲೀಗ್ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಎರಡು ಬಾರಿ ಟೂರ್ನಿಯನ್ನು ಗೆದ್ದಿದ್ದರೆ, ಆರ್‌ಸಿಬಿ ಒಮ್ಮೆ ಪ್ರಶಸ್ತಿ ಗೆದ್ದಿದೆ. ಆದ್ದರಿಂದ, ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಲಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸುತ್ತಿದ್ದರೆ, ಆರ್‌ಸಿಬಿ ತಂಡಚನ್ನು ಸ್ಮೃತಿ ಮಂಧಾನ ಮುನ್ನಡೆಸುತ್ತಿದ್ದಾರೆ. ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7:30 ಕ್ಕೆ ಆರಂಭವಾಗಲಿದೆ.
ಉಭಯ ತಂಡಗಳ ಬಲಾಬಲ
ಮುಂಬೈ ಇಂಡಿಯನ್ಸ್ ಆರ್‌ಸಿಬಿಗಿಂತ ಕಾಗದದ ಮೇಲೆ ಬಲಿಷ್ಠವಾಗಿ ಕಾಣುತ್ತದೆ. ಈ ತಂಡದಲ್ಲಿ ಹರ್ಮನ್‌ಪ್ರೀತ್ ಕೌರ್, ಇಂಗ್ಲೆಂಡ್ ನಾಯಕಿ ನ್ಯಾಟ್ ಸಿವರ್ ಬ್ರಂಟ್ ಮತ್ತು ವೆಸ್ಟ್ ಇಂಡೀಸ್ ನಾಯಕಿ ಹೀಲಿ ಮ್ಯಾಥ್ಯೂಸ್ ಇದ್ದಾರೆ. ಇವರ ಜೊತೆಗೆ ನ್ಯೂಜಿಲೆಂಡ್‌ನ ಅಮೆಲಿಯಾ ಕೆರ್, ಆಸ್ಟ್ರೇಲಿಯಾದ ಮಿಲ್ಲಿ ಇಲಿಂಗ್‌ವರ್ತ್ ಮತ್ತು ಭಾರತದ ಅಮನ್‌ಜೋತ್ ಕೌರ್ ಕೂಡ ಸೇರಿದ್ದಾರೆ.
ಮತ್ತೊಂದೆಡೆ, ಆರ್‌ಸಿಬಿ ತಂಡದಲ್ಲಿ ಸ್ಮೃತಿ ಮಂಧಾನ ಜೊತೆಗೆ, ಆಸ್ಟ್ರೇಲಿಯಾದ ಜಾರ್ಜಿಯಾ ವೋಲ್, ಆಲ್‌ರೌಂಡರ್ ಗ್ರೇಸ್ ಹ್ಯಾರಿಸ್ ಮತ್ತು ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ನಾಡಿನ್ ಡಿ ಕ್ಲಾರ್ಕ್ ಇದ್ದಾರೆ. ಅಷ್ಟೇ ಅಲ್ಲ, ಆಕ್ರಮಣಕಾರಿ ಬ್ಯಾಟ್ಸ್‌ಮನ್ ಮತ್ತು ವಿಕೆಟ್ ಕೀಪರ್ ರಿಚಾ ಘೋಷ್ ಕೂಡ ಇದ್ದಾರೆ.
ಪಿಚ್ ವರದಿ
ಟೂರ್ನಿಯ ಮೊದಲ 11 ಪಂದ್ಯಗಳು ನವಿ ಮುಂಬೈನ ಡಾ. ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯಲಿವೆ. ಮೊದಲ ಪಂದ್ಯವೂ ಇದೇ ಮೈದಾನದಲ್ಲಿ ನಡೆಯಲಿದೆ. ಡಾ. ಡಿ.ವೈ. ಪಾಟೀಲ್ ಪಿಚ್ ಬ್ಯಾಟ್ಸ್ಮನ್ಗಳಿಗೆ ಅನುಕೂಲಕರವಾಗಿದೆ. ಆದ್ದರಿಂದ, ಈ ಪಂದ್ಯದಲ್ಲಿ ರನ್ ಮಳೆ ಹರಿಯಲಿದೆ.
WPL 2026: ಡಬ್ಲ್ಯುಪಿಎಲ್ಗೆ ವೇದಿಕೆ ಸಜ್ಜು; ಎಲ್ಲಾ 5 ತಂಡಗಳು, ವೇಳಾಪಟ್ಟಿ, ನಿಯಮಗಳ ಪೂರ್ಣ ವಿವರ ಇಲ್ಲಿದೆ
ಸಂಭಾವ್ಯ ಪ್ಲೇಯಿಂಗ್ 11
ಮುಂಬೈ ಇಂಡಿಯನ್ಸ್: ಹಿಲ್ಲಿ ಮ್ಯಾಥ್ಯೂಸ್, ನ್ಯಾಟ್ ಸೈವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಸಜೀವನ್ ಸಜ್ನಾ, ಅಮನ್ಜೋತ್ ಕೌರ್, ಜಿ ಕಮಲಿನಿ, ಶಬ್ನೀಮ್ ಇಸ್ಮಾಯಿಲ್, ಸೈಕಾ ಇಶಾಕ್, ನಿಕೋಲಾ ಕ್ಯಾರಿ, ಪೂನಮ್ ಖೇಮ್ನಾರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಶ್ರೇಯಾಂಕ ಪಾಟೀಲ್, ನಡಿನ್ ಡಿ ಕ್ಲಾರ್ಕ್, ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವಾಲ್, ರಾಧಾ ಯಾದವ್, ಲಾರೆನ್ ಬೆಲ್, ಅರುಂಧತಿ ರೆಡ್ಡಿ, ಪೂಜಾ ವಸ್ತ್ರಾಕರ್, ದಯಾಲನ್ ಹೇಮಲತಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
