AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಆರೋಪ; ದೆಹಲಿಯ ಜಂತರ್‌ಮಂತರ್‌ನಲ್ಲಿ ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್‌ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ.

ಲೈಂಗಿಕ ಕಿರುಕುಳ ಆರೋಪ; ದೆಹಲಿಯ ಜಂತರ್‌ಮಂತರ್‌ನಲ್ಲಿ ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ
ಕುಸ್ತಿಪಟುಗಳ ಪ್ರತಿಭಟನೆ
TV9 Web
| Updated By: ಪೃಥ್ವಿಶಂಕರ|

Updated on:Jan 18, 2023 | 6:18 PM

Share

ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ಮುಕ್ತ ಸಮರ ಸಾರಿದ್ದಾರೆ. ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದು, ಬ್ರಿಜ್ ಭೂಷಣ್ ಅಧ್ಯಕ್ಷ ಕುರ್ಚಿಯಿಂದ ಕೆಳಗಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಅವರಂತಹ ದೊಡ್ಡ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ಕುಳಿತಿದ್ದು, ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಡಬ್ಲ್ಯುಎಫ್‌ಐನಿಂದ ನಾನು ಸಾಕಷ್ಟು ತುಳಿತಕ್ಕೊಳಗಾಗಿದ್ದು, ಅವರ ಕಿರುಕುಳದಿಂದ ಆತ್ಮಹತ್ಯಗೆ ಯತ್ನಿಸಿದ್ದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಆರೋಪಿಸಿದ್ದು, ಅವರು ಹಲವು ಹುಡುಗಿಯರನ್ನು ದೈಹಿಕವಾಗಿ ನಿಂದಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಸೋಲಿನ ನಂತರ ಡಬ್ಲ್ಯುಎಫ್‌ಐ ಅಧ್ಯಕ್ಷರು ನನ್ನನ್ನು ನಕಲಿ ನಾಣ್ಯ ಎಂದು ಕರೆದಿದ್ದರು. ಅಲ್ಲದೆ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇವರ ಕಿರುಕುಳ ತಾಳಲಾರದೆ ನಾನು ಆತ್ಮಹತ್ಯೆಗೆ ಚಿಂತಿಸಿದ್ದೆ ಎಂದಿದ್ದಾರೆ. ಯಾವುದೇ ಕುಸ್ತಿಪಟುವಿಗೆ ಏನಾದರೂ ಆದರೆ, ಅದಕ್ಕೆ ಡಬ್ಲ್ಯುಎಫ್‌ಐ ಅಧ್ಯಕ್ಷರೇ ನೇರ ಹೊಣೆಯಾಗಿರುತ್ತಾರೆ ಎಂದು ವಿನೇಶ್ ಫೋಗಟ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

IND vs NZ: 19 ಬೌಂಡರಿ, ಬರೋಬ್ಬರಿ 9 ಸಿಕ್ಸರ್; ದಾಖಲೆಯ ದ್ವಿಶತಕ ಸಿಡಿಸಿದ ಶುಭ್​ಮನ್ ಗಿಲ್!

ತರಬೇತುದಾರರು ದೈಹಿಕವಾಗಿ ಬಳಸಿಕೊಳ್ಳುತ್ತಿದ್ದಾರೆ

ಡಬ್ಲ್ಯುಎಫ್‌ಐ ಮೇಲೆ ಆರೋಪಗಳ ಸುರಿಮಳೆಗೈದಿರುವ ವಿನೇಶ್ ಫೋಗಟ್, ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್‌ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ. ಅಲ್ಲದೆ ಅವರು ಹುಡುಗಿಯರನ್ನು ದೈಹಿಕವಾಗಿ ಹಿಂಸಿಸುತ್ತಾರೆ. ಸ್ಪೀಕರ್ ಕೂಡ ಅನೇಕ ಹುಡುಗಿಯರ ಮೇಲೆ ದೈಹಿಕ ದೌರ್ಜನ್ಯ ನಡೆಸಿದ್ದಾರೆ.

ಅಲ್ಲದೆ ಫೆಡರೇಶನ್ ನಮ್ಮ ವೈಯಕ್ತಿಕ ಜೀವನದಲ್ಲಿಯೂ ಹಸ್ತಕ್ಷೇಪ ಮಾಡುತ್ತಿದೆ. ನಾವು ಒಲಿಂಪಿಕ್ಸ್‌ಗೆ ಹೋದಾಗ ನಮಗೆ ಫಿಸಿಯೋ ಅಥವಾ ತರಬೇತುದಾರರನ್ನು ಒದಗಿಸಿರಲಿಲ್ಲ. ನಾವು ಈ ಕ್ರಮದ ವಿರುದ್ಧ ಧ್ವನಿ ಎತ್ತಿದಾಗ, ನಮಗೆ ಬೆದರಿಕೆ ಹಾಕಲಾಯಿತು ಎಂದಿದ್ದಾರೆ.

ಪ್ರಧಾನಿ ಮೋದಿ ಸಹಾಯದ ನಿರೀಕ್ಷೆಯಲ್ಲಿ

ಭಜರಂಗ್ ಪುನಿಯಾ ಕೂಡ ಧರಣಿಯಲ್ಲಿ ಕುಳಿತಿದ್ದು, ಈ ವಿಚಾರದಲ್ಲಿ ಪ್ರಧಾನಿ ಮೋದಿಯವರ ಹಸ್ತಕ್ಷೇಪವನ್ನು ಕೋರಿದ್ದಾರೆ. ಫೆಡರೇಷನ್ ಆಡಳಿತವನ್ನೇ ಬದಲಿಸಬೇಕು ಎಂದು ಪುನಿಯಾ ಆಗ್ರಹಿಸಿದ್ದಾರೆ.

ಆರೋಪವನ್ನು ನಿರಾಕರಿಸಿದ ಬ್ರಿಜ್‌ ಭೂಷಣ್‌ ಸಿಂಗ್‌

ಆದರೆ ಕುಸ್ತಿಪಟುಗಳು ಮಾಡುತ್ತಿರುವ ಆರೋಪಗಳನ್ನು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಒಂದೇ ಒಂದು ದೈಹಿಕ ದೌರ್ಜನ್ಯ ಪ್ರಕರಣ ನಡೆದಿಲ್ಲ. ಅಂತಹ ಘಟನೆಗಳು ನಡೆದಿದ್ದರೆ ನಾನು ನೇಣು ಹಾಕಿಕೊಳ್ಳುತ್ತಾನೆ. ಧರಣಿ ಕುಳಿತ ಕುಸ್ತಿಪಟುಗಳು ಯಾರೂ ಕೂಡ ಒಲಿಂಪಿಕ್ಸ್ ನಂತರ ಯಾವುದೇ ರಾಷ್ಟ್ರೀಯ ಟೂರ್ನಿಯಲ್ಲಿ ಆಡಲು ಬಂದಿಲ್ಲ ಎಂಬ ಆರೋಪವನ್ನು ಕುಸ್ತಿಪಟುಗಳ ಮೇಲೆಯೇಬ್ರಿಜ್ ಭೂಷಣ್ ಶರಣ್ ಸಿಂಗ್ ಹೊರಿಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Wed, 18 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ