WTC Final: ಟೆಸ್ಟ್​ ಕ್ರಿಕೆಟ್​​ನಲ್ಲಿ 7,500 ರನ್ ಪೂರೈಸಿದ ಕೊಹ್ಲಿ! ಭಾರತದ ಪರ ವಿಶಿಷ್ಟ ದಾಖಲೆ ಬರೆದ ವಿರಾಟ್

WTC Final: ಈ ಪಂದ್ಯದಲ್ಲಿ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 7500 ರನ್‌ಗಳ ಗಡಿ ದಾಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ಆರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

WTC Final: ಟೆಸ್ಟ್​ ಕ್ರಿಕೆಟ್​​ನಲ್ಲಿ 7,500 ರನ್ ಪೂರೈಸಿದ ಕೊಹ್ಲಿ! ಭಾರತದ ಪರ ವಿಶಿಷ್ಟ ದಾಖಲೆ ಬರೆದ ವಿರಾಟ್
ವಿರಾಟ್ ಕೊಹ್ಲಿ
Follow us
TV9 Web
| Updated By: ಆಯೇಷಾ ಬಾನು

Updated on:Jun 20, 2021 | 9:05 AM

ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಇದಕ್ಕೆ ಕಾರಣ ಅವರ ಅದ್ಭುತ ಬ್ಯಾಟಿಂಗ್, ಕೊಹ್ಲಿ ಪ್ರತಿ ಪಂದ್ಯದಲ್ಲೂ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ವಿಶ್ವಕಪ್ ಆಫ್ ಟೆಸ್ಟ್ ಕ್ರಿಕೆಟ್ ಎಂದು ಕರೆಯಲ್ಪಡುವ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಅವರು ಇದನ್ನೇ ಮಾಡಿದ್ದಾರೆ. ಸೌತಾಂಪ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡುತ್ತಿರುವ ಪಂದ್ಯದಲ್ಲಿ, ಕೊಹ್ಲಿ ಮತ್ತೆ ತಮ್ಮ ಹೆಸರಿನಲ್ಲಿ ಕೆಲವು ದಾಖಲೆಗಳನ್ನು ಮಾಡಿದ್ದಾರೆ ಮತ್ತು ಸಚಿನ್ ತೆಂಡೂಲ್ಕರ್ ಅವರಂತಹ ದಂತಕಥೆಯ ದಾಖಲೆಗಳಿಗೆ ಹತ್ತಿರವಾಗಿದ್ದಾರೆ. ಜೊತೆಗೆ ಸುನಿಲ್ ಗವಾಸ್ಕರ್ ಅವರಂತಹ ಶ್ರೇಷ್ಠ ಬ್ಯಾಟ್ಸ್‌ಮನ್‌ ದಾಖಲೆಗಳನ್ನು ಸರಿಗಟ್ಟಿದ್ದಾರೆ

ಭಾರತ ಪರ 6,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ ಟೆಸ್ಟ್ ಕ್ರಿಕೆಟ್​​ನಲ್ಲಿ ಕೊಹ್ಲಿ 4 ನೇ ಸ್ಥಾನದಲ್ಲಿ ಬ್ಯಾಟಿಂಗ್​ ಮಾಡುತ್ತಾರೆ. ಸಚಿನ್ ಕೂಡ ಇದೇ ಆರ್ಡರ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಸಚಿನ್ ಅವರ ದಾಖಲೆಗಳನ್ನು ಮುರಿಯುವ ಬ್ಯಾಟ್ಸ್‌ಮನ್ ಅಂದರೆ ಅದು ಕೊಹ್ಲಿ ಎಂದು ಎಲ್ಲರೂ ಹೇಳುತ್ತಾರೆ. ಡಬ್ಲ್ಯೂಟಿಸಿ ಫೈನಲ್‌ನ ಎರಡನೇ ದಿನವಾದ ಶನಿವಾರ ಕೊಹ್ಲಿ, ಸಚಿನ್‌ ಅವರ ದಾಖಲೆಯನ್ನು ಸಮನಾಗಿಸಲು ಹತ್ತಿರದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನಂ.4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿ, ಭಾರತ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಟೆಸ್ಟ್‌ನಲ್ಲಿ 4 ನೇ ಕ್ರಮಾಂಕದಲ್ಲಿ ಆಡುವಾಗ ಸಚಿನ್ ಭಾರತಕ್ಕಾಗಿ 13492 ರನ್ ಗಳಿಸಿದರೆ, ಎರಡನೇ ಸ್ಥಾನದಲ್ಲಿರುವ ಕೊಹ್ಲಿ, 4 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಭಾರತ ಪರ 6,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ವಿಷಯದಲ್ಲಿ ಗುಂಡಪ್ಪ ವಿಶ್ವನಾಥ್, ಕೊಹ್ಲಿಯ ಹಿಂದೆ ಇದ್ದಾರೆ, ಅವರು 4 ನೇ ಕ್ರಮಾಂಕದಲ್ಲಿ ಆಡುವಾಗ 5081 ರನ್ ಗಳಿಸಿದ್ದಾರೆ. ಅವರ ನಂತರ ದಿಲೀಪ್ ವೆಂಗ್ಸರ್ಕರ್ (2605), ವಿಜಯ್ ಮಂಜ್ರೇಕರ್ (1714) ಅವರ ಹೆಸರುಗಳು ಇವೆ.

7,500 ರನ್ ಪೂರ್ಣ ಈ ಪಂದ್ಯದಲ್ಲಿ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 7500 ರನ್‌ಗಳ ಗಡಿ ದಾಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ಆರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇಷ್ಟು ರನ್ ಗಳಿಸಲು ಕೊಹ್ಲಿ 154 ಇನ್ನಿಂಗ್ಸ್ ತೆಗೆದುಕೊಂಡರು. ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ 10,000 ರನ್ ಗಳಿಸಿದ ಗವಾಸ್ಕರ್ ಕೂಡ 154 ಇನ್ನಿಂಗ್ಸ್‌ಗಳಲ್ಲಿ 7,500 ರನ್ ಗಳಿಸಿದ್ದರು.

ಇದನ್ನೂ ಓದಿ: WTC Final: ಅಂಪೈರ್​ಗಳ ವಿವಾದಾತ್ಮಕ ನಿರ್ಧಾರ! ಮೈದಾನದಲ್ಲೇ ಚರ್ಚೆಗಿಳಿದ ಕೊಹ್ಲಿ.. ವ್ಯಂಗ್ಯವಾಗಿ ಸೆಹ್ವಾಗ್ ಟ್ವೀಟ್

Published On - 9:04 am, Sun, 20 June 21

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್