Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ

66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ
Yashpal Sharma
Follow us
TV9 Web
| Updated By: Vinay Bhat

Updated on:Jul 13, 2021 | 11:46 AM

BREAKING: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಯಶ್​ಪಾಲ್ ಶರ್ಮಾ ನಿಧನರಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಇವರಿಗೆ ಹೃದಯಾಘಾತವಾಗಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70, 80ರ ದಶಕತದಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಇವರು ಸಾಕಷ್ಟು ಕೊಡುಗಡೆ ನೀಡಿದ್ದರು. ಅಲ್ಲದೆ 1983ರ ವಿಶ್ವಕಪ್​ನಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. 66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

ಭಾರತ ತಂಡದಲ್ಲಿ ಇವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಆಗಿ ಗುರಿತಿಸಿಕೊಂಡಿದ್ದರು. ಭಾರತ ಪರ 37 ಏಕದಿನ ಮತ್ತು 42 ಟೆಸ್ಟ್​ ಪಂದ್ಯಗಳಲ್ಲಿ ಯಶ್​ಪಾಲ್ ಕಣಕ್ಕಿಳಿದಿದ್ದರು. ಕೆಲ ಸಮಯ ರಾಷ್ಟ್ರೀಯ ತಂಡದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಟೆಸ್ಟ್​ನಲ್ಲಿ ಇವರು 2 ಶತಕ, 9 ಅರ್ಧಶತಕ ಬಾರಿಸಿ 1606 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 4 ಅರ್ಧಶತಕ ಸಹಿತ 883 ರನ್ ಬಾರಿಸಿದ್ದರು. 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್​ ಕ್ರೀಡಾಂಗಣದಲ್ಲಿ ಯಶ್​ಪಾಲ್ ಅವರು ಭಾರತ ಟಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ರಣಜಿಯಲ್ಲಿ ಇವರು ಒಟ್ಟು 160 ಪಂದ್ಯಗಳನ್ನು ಆಡಿದ್ದಾರೆ. 21 ಶತಕದ ಜೊತೆ 8,933 ರನ್ ಬಾರಿಸಿದ್ದು ಅಜೇಯ 201 ರನ್ ಯಶ್​ಪಾಲ್ ಅವರ ಗರಿಷ್ಠ ಸ್ಕೋರ್ ಆಗಿದೆ.

Published On - 11:13 am, Tue, 13 July 21

ಉಡುಪಿ ಜಿಲ್ಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ
ಉಡುಪಿ ಜಿಲ್ಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ
ಇಟಲಿ ಪ್ರಧಾನಿ ಮೆಲೋನಿಯನ್ನು ಭೇಟಿಯಾದ ಪ್ರಧಾನಿ ಮೋದಿ
ಇಟಲಿ ಪ್ರಧಾನಿ ಮೆಲೋನಿಯನ್ನು ಭೇಟಿಯಾದ ಪ್ರಧಾನಿ ಮೋದಿ
ಸಚಿವ ಸ್ಥಾನಕ್ಕೆ ಬೇಡಿಕೆಯಲ್ಲ, ನನ್ನ ಹಕ್ಕು ಎಂದ ಶಾಸಕ ನರೇಂದ್ರಸ್ವಾಮಿ
ಸಚಿವ ಸ್ಥಾನಕ್ಕೆ ಬೇಡಿಕೆಯಲ್ಲ, ನನ್ನ ಹಕ್ಕು ಎಂದ ಶಾಸಕ ನರೇಂದ್ರಸ್ವಾಮಿ
‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್
‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್
ಪತ್ನಿ ಗರ್ಭವತಿಯಾಗಿದ್ದಾಗ ಮನೆಗೆ ಅಡಿಪಾಯ ಹಾಕಬಹುದಾ? ವಿಡಿಯೋ ನೋಡಿ
ಪತ್ನಿ ಗರ್ಭವತಿಯಾಗಿದ್ದಾಗ ಮನೆಗೆ ಅಡಿಪಾಯ ಹಾಕಬಹುದಾ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಆರ್ಥಿಕ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರ್ಥಿಕ ಯೋಗವಿದೆ
ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ ಬಳಿ ಫುಲ್ ಟ್ರಾಫಿಕ್ ಜಾಮ್
ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ ಬಳಿ ಫುಲ್ ಟ್ರಾಫಿಕ್ ಜಾಮ್
ವಿಚಾರಣೆ ನಂತರ ಮಾತಾಡದೆ ಕಾರಲ್ಲಿ ಹೊರಟುಹೋದ ಮಲ್ಲಿಕಾರ್ಜುನ ಸ್ವಾಮಿ
ವಿಚಾರಣೆ ನಂತರ ಮಾತಾಡದೆ ಕಾರಲ್ಲಿ ಹೊರಟುಹೋದ ಮಲ್ಲಿಕಾರ್ಜುನ ಸ್ವಾಮಿ
ಜಯನಗರ ಶಾಸಕರು ಬೆಂಗಳೂರಿನ ಆಧೋಗತಿಯನ್ನು ತೋರಿಸಬೇಕು: ಡಿಕೆಶಿ ಸವಾಲ್
ಜಯನಗರ ಶಾಸಕರು ಬೆಂಗಳೂರಿನ ಆಧೋಗತಿಯನ್ನು ತೋರಿಸಬೇಕು: ಡಿಕೆಶಿ ಸವಾಲ್
ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ
ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ