ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ

Yuvraj Singh: ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ
ಯುವರಾಜ್ ಸಿಂಗ್
Follow us
ಪೃಥ್ವಿಶಂಕರ
|

Updated on: Jun 02, 2021 | 3:35 PM

ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕೊರೊನಾ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆಯಿಂದ ಯಾರೂ ಸಾಯಬಾರದು ಎಂಬ ಉದ್ದೇಶದಿಂದ ಅವರು ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ. ಯುವಿಕನ್ ಎಂಬ ಪ್ರತಿಷ್ಠಾನದ ಆಶ್ರಯದಲ್ಲಿ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವರಾಜ್ ಹೇಳಿದರು.

ವೆಂಟಿಲೇಟರ್ ಹೊಂದಿರುವ ಹಾಸಿಗೆಗಳು ಯುವಿಕನ್ ಮತ್ತು ಒನ್ ಡಿಜಿಟಲ್ ಎಂಟರ್‌ಟೈನ್‌ಮೆಂಟ್ ಸಹಭಾಗಿತ್ವದಲ್ಲಿ, ರಾಷ್ಟ್ರ ರಾಜಧಾನಿಯಲ್ಲಿ ಎನ್‌ಸಿಆರ್, ಹರಿಯಾಣ, ಪಂಜಾಬ್, ತೆಲಂಗಾಣ, ಕರ್ನಾಟಕ, ಮಧ್ಯಪ್ರದೇಶ, ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನಗಳಲ್ಲಿ ಆಮ್ಲಜನಕ ಮತ್ತು ವೆಂಟಿಲೇಟರ್ ಹೊಂದಿರುವ ಹಾಸಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಯುವಿಕನ್ ಅಧಿಕೃತವಾಗಿ ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ದೇಶದಲ್ಲಿ ಕೊರನಾ ವೈರಸ್ ಹರಡುವುದರಿಂದ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದೇಶಾದ್ಯಂತ ಅನೇಕರು ಸಾವನ್ನಪ್ಪಿದರು, ವಿಶೇಷವಾಗಿ ಆಮ್ಲಜನಕದ ಕೊರತೆಯಿಂದ ತುಂಬಾ ಜನ ಪ್ರಾಣ ಕಳೆದುಕೊಂಡರು. ಅದರೊಂದಿಗೆ ಸರ್ಕಾರಗಳು ಆಮ್ಲಜನಕದ ಪೂರೈಕೆಯತ್ತ ಗಮನ ಹರಿಸಿದವು. ಮತ್ತೊಂದೆಡೆ, ಚಲನಚಿತ್ರ, ಕ್ರೀಡೆ ಮತ್ತು ರಾಜಕೀಯ ಗಣ್ಯರು ಆಮ್ಲಜನಕ ಪೂರೈಕೆ ಮತ್ತು ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಇತರ ವೈದ್ಯಕೀಯ ಸಾಧನಗಳನ್ನು ಸಹ ದಾನ ಮಾಡುತ್ತಿದ್ದಾರೆ. ಕೊರೊನಾ ಸಂತ್ರಸ್ತರ ನೆರವಿಗೆ ಬಂದವರಲ್ಲಿ ಯುವರಾಜ್ ಕೂಡ ಈಗ ಸೇರಿಕೊಂಡಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್