‘ಯುವರಾಜ್ ವೃತ್ತಿಜೀವನವನ್ನು ಮುಗಿಸಿದ್ದೇ ವಿರಾಟ್ ಕೊಹ್ಲಿ’; ರಾಬಿನ್ ಉತ್ತಪ್ಪ ಶಾಕಿಂಗ್ ಹೇಳಕೆ

Yuvraj Singh's Career End: ರಾಬಿನ್ ಉತ್ತಪ್ಪ ಅವರು ಯುವರಾಜ್ ಸಿಂಗ್ ಅವರ ವೃತ್ತಿಜೀವನದ ಅಂತ್ಯಕ್ಕೆ ವಿರಾಟ್ ಕೊಹ್ಲಿ ಕಾರಣ ಎಂದು ಆರೋಪಿಸಿದ್ದಾರೆ. ಕ್ಯಾನ್ಸರ್‌ನಿಂದ ಚೇತರಿಸಿಕೊಂಡ ನಂತರ ಯುವರಾಜ್‌ಗೆ ಸಾಕಷ್ಟು ಅವಕಾಶ ನೀಡಬೇಕಿತ್ತು ಎಂದು ಉತ್ತಪ್ಪ ಹೇಳಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಯುವರಾಜ್‌ಗೆ ಸೂಕ್ತ ಬೆಂಬಲ ಸಿಗಲಿಲ್ಲ ಎಂಬುದು ಉತ್ತಪ್ಪ ಅವರ ವಾದ. ಈ ಹೇಳಿಕೆ ಕ್ರಿಕೆಟ್ ಜಗತ್ತಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

‘ಯುವರಾಜ್ ವೃತ್ತಿಜೀವನವನ್ನು ಮುಗಿಸಿದ್ದೇ ವಿರಾಟ್ ಕೊಹ್ಲಿ’; ರಾಬಿನ್ ಉತ್ತಪ್ಪ ಶಾಕಿಂಗ್ ಹೇಳಕೆ
ಯುವರಾಜ್ ಸಿಂಗ್, ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
|

Updated on: Jan 10, 2025 | 7:25 PM

ಯುವರಾಜ್ ಸಿಂಗ್ ಎಂದೊಡನೆ ನಮಗೆಲ್ಲ ಥಟ್ಟನೆ ನೆನಪಾಗುವುದು 2007 ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್. ಈ ಎರಡು ವಿಶ್ವಕಪ್​ಗಳನ್ನು ಟೀಂ ಇಂಡಿಯಾ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪಾತ್ರ ಪ್ರಮುಖವಾಗಿತ್ತು. ಟಿ20 ವಿಶ್ವಕಪ್​ನಲ್ಲಿ ಯುವ ಸಿಡಿಸಿದ 6 ಸಿಕ್ಸರ್​ಗಳು ಹಾಗೂ ಏಕದಿನ ವಿಶ್ವಕಪ್​ನಲ್ಲಿ ಅವರ ಆಲ್​ರೌಂಡರ್ ಆಟವನ್ನು ಯಾರಾದರೂ ಮರೆಯುವುದುಂಟೆ. ಅದರಲ್ಲೂ ಏಕದಿನ ವಿಶ್ವಕಪ್ ವೇಳೆ ಕ್ಯಾನ್ಸರ್​ಗೆ ತುತ್ತಾದರೂ ದೇಶಕ್ಕಾಗಿ ಆಡುವುದನ್ನು ನಿಲ್ಲಿಸಿದೆ ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ್ದ ಯುವಿ ಆ ಬಳಿಕ ಕ್ಯಾನ್ಸ್ರ್ ಗೆದ್ದು ಬಂದಿದ್ದು ಇತಿಹಾಸ. ಆದಾಗ್ಯೂ, ಯುವಿ ಈ ಮಾರಕ ರೋಗವನ್ನು ಸೋಲಿಸಿದರಾದರೂ ತಂಡದಲ್ಲಿ ತಮ್ಮ ಸ್ಥಾನವನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ಇದೀಗ ಭಾರತ ತಂಡದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದು, ಯುವರಾಜ್ ಸಿಂಗ್ ಅವರ ವೃತ್ತಿಜೀವನ ಕೊನೆಗೊಳ್ಳಲು ವಿರಾಟ್ ಕೊಹ್ಲಿಯೇ ಕಾರಣ ಎಂದಿದ್ದಾರೆ. ಇತ್ತೀಚೆಗಷ್ಟೇ ನೀಡಿದ ಸಂದರ್ಶನವೊಂದರಲ್ಲಿ ಉತ್ತಪ್ಪ, ಕೊಹ್ಲಿ ಬಗ್ಗೆ ಹಲವು ಅಚ್ಚರಿಯ ಹೇಳಿಕೆಗಳನ್ನು ನೀಡಿದ್ದಾರೆ.

ಯುವರಾಜ್ ಮನವಿ ಮಾಡಿದ್ದರು

ವಾಸ್ತವವಾಗಿ ಕ್ಯಾನ್ಸರ್​ನಿಂದ ಚೇತರಿಸಿಕೊಂಡ ನಂತರ ಯುವರಾಜ್ ಸಿಂಗ್ ಅವರ ಫಿಟ್ನೆಸ್ ಮೊದಲಿನಂತಿರಲಿಲ್ಲ. ಅವರು ಸ್ವಲ್ಪ ಕಷ್ಟಪಡುತ್ತಿದ್ದರು. ಈ ಬಗ್ಗೆ ರಾಬಿನ್ ಉತ್ತಪ್ಪ ಅವರು ಲಾಲಂಟಾಪ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದು ‘ಯುವರಾಜ್ ಫಿಟ್‌ನೆಸ್ ಪರೀಕ್ಷೆಗೆ ಅಂಕಗಳನ್ನು ಕಡಿಮೆ ಮಾಡಲು ವಿನಂತಿಸಿದ್ದರು. ಆಗ ಟೀಮ್ ಮ್ಯಾನೇಜ್​ಮೆಂಟ್ ಅವರ ಮೇಲೆ ಕರುಣೆ ತೋರಲಿಲ್ಲ. ಆ ಸಮಯದಲ್ಲಿ ವಿರಾಟ್ ತಂಡದ ನಾಯಕರಾಗಿದ್ದರು, ಅವರ ಸೂಚನೆಯ ಮೇರೆಗೆ ಎಲ್ಲವೂ ನಡೆಯುತ್ತಿತ್ತು. ಆದರೆ ಅವರು ಯುವರಾಜ್‌ಗೆ ಯಾವುದೇ ರೀತಿಯ ಸಹಾಯ ಮಾಡಲಿಲ್ಲ. ಆದಾಗ್ಯೂ, ಯುವಿ ಆ ನಂತರ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ತಂಡದಲ್ಲಿ ಸ್ಥಾನ ಪಡೆದರು. ಆದರೆ ಒಂದು ಐಸಿಸಿ ಟೂರ್ನಿಯಲ್ಲಿ ಯುವಿ ಕಳಪೆ ಪ್ರದರ್ಶನ ನೀಡಿದ ಬವಳಿಕ ಅವರನ್ನು ತಂಡದಿಂದ ಕೈಬಿಡಲಾಯಿತು.

ಯುವರಾಜ್ ಸಿಂಗ್ ಕ್ಯಾನ್ಸರ್​ ವಿರುದ್ಧ ಹೋರಾಡಿ ತಂಡಕ್ಕೆ ಮರಳಿದ ನಂತರ ಸ್ಥಿರ ಪ್ರದರ್ಶನ ನೀಡಲು ವಿಫಲರಾದರು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಬಂದ ಕೂಡಲೇ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದರು. ಆದರೆ 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಯುವಿ ಪ್ರದರ್ಶನ ಕಳಪೆಯಾಗಿತ್ತು. ಪಂದ್ಯಾವಳಿಯುದ್ದಕ್ಕೂ ಅವರ ಬ್ಯಾಟ್ ಮೌನವಾಗಿತ್ತು. ಇದಾದ ಬಳಿಕ ಕೊಹ್ಲಿ ಅವರಿಗೆ ತಂಡದಲ್ಲಿ ಸ್ಥಾನ ನೀಡಲೇ ಇಲ್ಲ. ಅವರನ್ನು 2019ರ ಏಕದಿನ ವಿಶ್ವಕಪ್ ತಂಡದಿಂದ ಹೊರಗಿಡಲಾಗಿತ್ತು. ಇದಾದ ನಂತರವೇ ಅವರ ವೃತ್ತಿಜೀವನ ಮುಗಿದು ನಿವೃತ್ತಿ ಘೋಷಿಸಿದ್ದರು.

ವಿರಾಟ್ ಅವಕಾಶ ನೀಡಲಿಲ್ಲ

ಯುವರಾಜ್ ಅವರನ್ನು ತಂಡದಿಂದ ಹೊರಹಾಕುವಲ್ಲಿ ಕೊಹ್ಲಿ ಪ್ರಮುಖ ಪಾತ್ರವಹಿಸಿದರು ಎಂದು ಉತ್ತಪ್ಪ ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ‘ಅಂತಹ ದೊಡ್ಡ ಆಟಗಾರನಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕಾಗಿತ್ತು. ಆಟದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ನಿಜ. ಆದರೆ ಕೆಲವೊಮ್ಮೆ ಯುವರಾಜ್ ಅವರಂತಹ ಆಟಗಾರರು ನಿಯಮಗಳಿಂದ ವಿಮುಖರಾಗಬೇಕಾಗುತ್ತದೆ. ಅವರು ಕ್ಯಾನ್ಸರ್ ಅನ್ನು ಸೋಲಿಸಿದ್ದು ಮಾತ್ರವಲ್ಲದೆ ಅನೇಕ ಪಂದ್ಯಾವಳಿಗಳಲ್ಲಿ ತಂಡದ ಪರ ಅಮೋಘ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರಿಗೆ ಸ್ವಲ್ಪ ಸಮಯಾವಕಾಶ ಸಿಗಬೇಕಿತ್ತು ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!