ಮೈಸೂರಿನ ಪ್ರವಾಸಿ ತಾಣಗಳು ಓಪನ್, ಪ್ರವೇಶಕ್ಕೆ ಸಿಕ್ತು ಗ್ರೀನ್ ಸಿಗ್ನಲ್..

ಮೈಸೂರು: ನವರಾತ್ರಿಯ ಮೊದಲ ದಿನ ಇಂದಿನಿಂದ ಪ್ರರಂಭವಾಗಿದ್ದು, ಮೈಸೂರಿನಲ್ಲಿ ದಸರಾ ಉದ್ಘಾಟನೆ ನೆರವೇರಿದೆ. ಮೈಸೂರಿನ ಪ್ರವಾಸಿ ತಾಣಗಳನ್ನು ಓಪನ್ ಮಾಡುವುದಾಗಿ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ ಸೋಮಶೇಖರ್ ಘೋಷಿಸಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪ ಆದೇಶದ ಮೇರೆಗೆ ಚಾಮುಂಡಿ ಬೆಟ್ಟ, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ, ಅರಮನೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಮೈಸೂರು ಜಿಲ್ಲಾಡಳಿತ ಪ್ರವಾಸಿ ತಾಣಗಳಿಗೆ ನವೆಂಬರ್ 1 ರವರೆಗೂ ನಿರ್ಬಂಧ ಹೇರಿತ್ತು. ಇದಕ್ಕೆ ವ್ಯಾಪಕ ವಿರೋಧ ಕೂಡ ವ್ಯಕ್ತವಾಗಿತ್ತು. ಮೈಸೂರಿನ ಹಲವು ಸಂಘ ಸಂಸ್ಥೆಗಳು ಈ ಬಗ್ಗೆ ಸಿಎಂಗೆ ಮನವಿ ಮಾಡಿದ್ದರು. ಸದ್ಯ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಎಲ್ಲಾ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತ ಎಂದು ತಿಳಿಸಿದ್ದಾರೆ. ಹೀಗಾಗಿ ಕೊರೊನಾ ಮುಂಜಾಗೃತೆಗಳೊಂದಿಗೆ ಪ್ರವಾಸಿ ತಾಣಗಳಿಗೆ ಹೋಗಬಹುದು.

ಇದನ್ನೂ ಓದಿ: ಡಾ.C.N.ಮಂಜುನಾಥ್​ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ

Related Tags:

Related Posts :

Category:

error: Content is protected !!