ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಇಲ್ಲ

ಬೆಂಗಳೂರು: ಕೋವಿಡ್ ೧೯ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ರಚಿಸಿದ್ದು, ಅದರ ಪ್ರಕಾರ ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ ಎಂದು ಹೇಳಲಾಗಿದೆ.

ಹೌದು ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ಹೊಸ ಮಾರ್ಗಸೂಚಿಗಳನ್ನು ರಚಿಸಿ ಬಿಡುಗಡೆ ಮಾಡಿದೆ. ಅದರ ಪ್ರಕಾರ ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಕೇವಲ ದೇವಸ್ಥಾನ ಅಥವಾ ಮನೆಯಲ್ಲೇ ಪ್ರತಿಷ್ಠಾಪಿಸಿ ಆಚರಿಸಬೇಕು ಎಂದು ಸೂಚಿಸಲಾಗಿದೆ.

ನದಿ, ಕೆರೆ, ಕೊಳ, ಬಾವಿ, ಕಲ್ಯಾಣಿಗಳಲ್ಲಿ ಕೂಡಾ ಈ ಬಾರಿ ಗಣೇಶ ಮೂರ್ತಿಯನ್ನು ವಿಸರ್ಜಿಸುವಂತಿಲ್ಲ. ಮೂರ್ತಿ ತರುವಾಗ ಮತ್ತು ವಿಸರ್ಜಿಸುವಾಗ ಮೆರವಣಿಗೆಗೆ ನಿರ್ಬಂಧ ಹೇರಲಾಗಿದೆ. ಮನೆಯಲ್ಲಿ ಪ್ರತಿಷ್ಠಾಪಿಸಿದ ಮೂರ್ತಿಯನ್ನು ಈ ಬಾರಿ ಮನೆ ಆವರಣಲ್ಲೇ ವಿಸರ್ಜಿಸಬೇಕು.

ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ಪ್ರತಿ ದಿನ ಸ್ಯಾನಿಟೈಸೇಷನ್, ಸಾಮಾಜಿಕ ಅಂತರ ಕಡ್ಡಾಯ. ದರ್ಶನಕ್ಕೆ ಬರುವಾಗ ತಪ್ಪದೇ ಮಾಸ್ಕ್ ಧರಿಸಿದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಹೊಸ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.

Ganeshostava

Related Tags:

Related Posts :

Category: