BREAKING NEWS
India vs Australia, 2nd ODI, LIVE Score: ಫಿಂಚ್-ವಾರ್ನರ್ ಭರ್ಜರಿ ಜೊತೆಯಾಟ

ಲಾಕ್​ಡೌನ್ ಬಳಿಕ ಮೊದಲ ಏಕದಿನ ಸರಣಿಯಲ್ಲಿ ಪಾಲ್ಗೊಂಡಿರುವ ಭಾರತ, ಇಂದು ಆಸ್ಟ್ರೇಲಿಯಾ ವಿರುದ್ಧ ಎರಡನೇ ಪಂದ್ಯವನ್ನು ಆಡಲಿದೆ. ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡಿರುವ ಭಾರತಕ್ಕೆ ಇಂದಿನ ಆಟವನ್ನು ಗೆಲ್ಲಲೇಬೇಕಾದ ಒತ್ತಡವಿದೆ‌. ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಇರುವ ಭಾರತವು, ಸರಣಿ ಸಮಬಲ ಕಾಯ್ದುಕೊಳ್ಳಲು ಹೋರಾಡಬೇಕಿದೆ. ಗೆಲ್ಲುವ ಉತ್ಸಾಹದಲ್ಲಿ ಕೊಹ್ಲಿ-ಫಿಂಚ್ ಪಡೆ! ಮೊದಲ ಪಂದ್ಯದ ತಪ್ಪುಗಳನ್ನು ಮತ್ತೆ ಮರುಕಳಿಸದೆ, ಎಲ್ಲಾ ವಿಭಾಗದಲ್ಲೂ ಉತ್ತಮ ಪ್ರದರ್ಶನ ತೋರುವ ಉತ್ಸಾಹದಲ್ಲಿ ಕೊಹ್ಲಿ

x

ದೇವಸ್ಥಾನದ ಮುಂದೆ ಅಂಗಡಿ ಇಟ್ಟುಕೊಂಡಿದ್ದಕ್ಕೆ ಕಿರಿಕ್: ಅಂಗಡಿ ಮಾಲೀಕನ ಮೇಲೆ ಹಲ್ಲೆ

  • KUSHAL V
  • Published On - 16:22 PM, 25 Oct 2020

ದೊಡ್ಡಬಳ್ಳಾಪುರ: ದೇಗುಲದ ಹತ್ತಿರ ಬೀದಿಬದಿ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಕನಸವಾಡಿಯ ಶನಿಮಹಾತ್ಮ ದೇವಸ್ಥಾನದ ಬಳಿ ಘಟನೆ ನಡೆದಿದೆ. ಅಂಗಡಿ ಮಾಲೀಕ ಮುನಿಯಪ್ಪ ಎಂಬುವವನ ಮೇಲೆ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್‌ನಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ.
ಇತ್ತೀಚೆಗೆ, ಪ್ರಕಾಶ್ ಕಡೆಯವರು ಹೊಸ ಅಂಗಡಿ ತೆರೆದಿದ್ದರು. ಆ ಅಂಗಡಿಗೆ ಸರಿಯಾಗಿ ವ್ಯಾಪಾರವಾಗುತ್ತಿಲ್ಲವೆಂದು ಬೀದಿಬದಿ ಅಂಗಡಿ ಹಾಕಿಕೊಂಡಿದ್ದ ನಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಪ್ರಕಾಶ್ ವಿರುದ್ಧ ಮುನಿಯಪ್ಪ ಆರೋಪಿಸಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದಾನೆ.

ಇನ್ನು, ಹಲ್ಲೆಯನ್ನು ಖಂಡಿಸಿ ದೇಗುಲದ ಬಳಿಯಿರುವ ವ್ಯಾಪಾರಿಗಳು ಅಧ್ಯಕ್ಷನ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ಹೊರಹಾಕಿದರು. ಜೊತೆಗೆ, ನೊಂದ ಬೀದಿಬದಿ ಅಂಗಡಿಗಳ ಮಾಲೀಕರಿಗೆ ನ್ಯಾಯ ಕೊಡಿಸುವಂತೆ ಒತ್ತಾಯ ಮಾಡಿದರು.

ಇತ್ತ, ಮುನಿಯಪ್ಪ ಸುಳ್ಳು ಹೇಳುತ್ತಿದ್ದಾನೆಂದು ಪ್ರಕಾಶ್ ಸಹ ಆರೋಪಿಸಿದ್ದಾನೆ. ಮುನಿಯಪ್ಪ ಭಕ್ತರನ್ನು ಬಲವಂತವಾಗಿ ತನ್ನ ಅಂಗಡಿಗೆ ಕರೆದೊಯ್ಯುತ್ತಿದ್ದ. ಹೀಗಾಗಿ, ಈ ರೀತಿ ಮಾಡಬೇಡ ಎಂದು ಹೇಳಿದ್ದೇನೆ. ಬುದ್ಧಿವಾದ ಹೇಳಿದ್ದಕ್ಕೆ ಹಲ್ಲೆ ಮಾಡಿರುವುದಾಗಿ ಆರೋಪಿಸ್ತಿದ್ದಾನೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಹೇಳಿದ್ದಾನೆ.