Galaxy A73: 108MP ಕ್ಯಾಮೆರಾದ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಮೇಲೆ 10,000 ರೂ. ಡಿಸ್ಕೌಂಟ್: ಖರೀದಿಸಬಹುದೇ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಶೇ. 24% ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಕಾಣುತ್ತಿದೆ. ಈ ಸ್ಮಾರ್ಟ್ಫೋನ್ನ ಮೂಲಬೆಲೆ 49,999ರೂ. ಆಗಿದೆ.
ಸ್ಯಾಮ್‌ಸಂಗ್ (Samsung) ಕಂಪನಿಯ ಗ್ಯಾಲಕ್ಸಿ A ಸರಣಿಯ ಸ್ಮಾರ್ಟ್ಫೋನ್ಗಳಿಗೆ ಮಾರುಕಟ್ಟೆಯಲ್ಲಿ ವಿಶೇಷ ಬೇಡಿಕೆ ಇದೆ. ಅದರಂತೆ ಕಳೆದ ವರ್ಷ ಕಂಪನಿ ದೇಶದಲ್ಲಿ ಬರೋಬ್ಬರಿ 108 ಮೆಗಾಪಿಕ್ಸೆಲ್ (108MP Camera Phone) ಪ್ರೈಮರಿ ಕ್ಯಾಮೆರಾದ ಗ್ಯಾಲಕ್ಸಿ A73 5G (Galaxy A73) ಫೋನನ್ನು ಲಾಂಚ್ ಮಾಡಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕೂಡ ಕೇಳಿಬಂದಿತ್ತು. ಇದೀಗ ಈ ಸ್ಮಾರ್ಟ್‌ಫೋನ್ ಅತಿ ಕಡಿಮೆ ಬೆಲೆಗೆ ಮಾರಾಟ ಕಾಣುತ್ತಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಗ್ಯಾಲಕ್ಸಿ A73 5G ಡಸ್ಟ್ ಆಂಡ್ ವಾಟರ್ ಪ್ರೂಫ್‌ಗಾಗಿ IP67-ರೇಟಿಂಗ್ ಅನ್ನು ಹೊಂದಿವೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿವೆ. ಹಾಗಾದ್ರೆ ಈ ಫೋನಿನ ಆಫರ್ ಏನು ಎಂಬುದನ್ನು ನೋಡೋಣ.
ಆಫರ್ ಏನಿದೆ?:
ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಶೇ. 24% ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಕಾಣುತ್ತಿದೆ. ಈ ಸ್ಮಾರ್ಟ್ಫೋನ್ನ ಮೂಲಬೆಲೆ 49,999ರೂ. ಆಗಿದೆ. ಆದರೀಗ ಕೊಡುಗೆಯಲ್ಲಿ ಕೇವಲ 38,188 ರೂ. ಗಳಿಗೆ ಖರೀದಿ ಮಾಡಬಹುದು. ಇದರೊಂದಿಗೆ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ (ನಿಮ್ಮ ಫೋನ್ ಸ್ಥಿತಿ ಆದರಿಸಿ) ಕೊಡುಗೆ ಸಿಗಲಿದೆ. ಇದು ಅವೆಸಮ್ ಗ್ರೆಯ್, ಅವೆಸಮ್ ಮಿಂಟ್ ಮತ್ತು ಅವೆಸಮ್ ವೈಟ್ ಕಲರ್ ಆಯ್ಕೆಗಳಲ್ಲಿ ಮಾರಾಟ ಆಗುತ್ತಿದೆ.
ಏನು ವಿಶೇಷತೆ?:
ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ರೇಟ್ನಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ನಾಲ್ಕು ವರ್ಷಗಳವರೆಗೆ ಆಂಡ್ರಾಯ್ಡ್ OS ಅಪ್‌ಗ್ರೇಡ್‌ಗಳು ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ.
ಇದರ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 25W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈಯನ್ನು ಬೆಂಬಲಿಸಲಿದೆ.
ಖರೀದಿಸಬಹುದೇ?:
ಈಗ 108 ಮೆಗಾಫಿಕ್ಸೆಲ್ನ ಸ್ಮಾರ್ಟ್ಫೋನ್ಗಳು ಒಂದರ ಹಿಂದೆ ಒಂದರಂತೆ ಕಾಲಿಡುತ್ತಿದೆ. 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಕೂಡ ಬಂದಿದೆ. ಅಲ್ಲದೆ 25,000 ರೂ. ಒಳಗೆ ಅದ್ಭುತ ಮೆಗಾಫಿಕ್ಸೆಲ್ನ ಆಕರ್ಷಕ ಫೋನ್ಗಳು ಮಾರುಕಟ್ಟೆಯಲ್ಲಿವೆ. ಹೀಗಾಗಿ ನೀವು ಕ್ಯಾಮೆರಾಕ್ಕೆಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಖರೀದಿ ಮಾಡಿದರೆ ಇದು ಉತ್ತಮ ಆಯ್ಕೆಯಲ್ಲ. ಇದರಲ್ಲಿರುವ ಉತ್ತಮ ಪ್ರೊಸೆಸರ್ ಜೊತೆಗೆ ಗುಣಮಟ್ಟದ ಡಿಸ್ ಪ್ಲೇ ನಿಮಗೆ ಹೊಸ ಅನುಭವ ನೀಡುತ್ತದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ