Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G72: 108MP ಕ್ಯಾಮೆರಾದ ಹೊಚ್ಚ ಹೊಸ ಸ್ಮಾರ್ಟ್​ಫೋನ್ ಮಾರಾಟ ಆರಂಭ: ಈ ಆಫರ್ ಮಿಸ್ ಮಾಡ್ಬೇಡಿ

ಈಗಾಗಲೇ ಇದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಮೋಟೋ ಜಿ72 (Moto G72) ಸ್ಮಾರ್ಟ್‌ಫೋನ್‌ ಸೇಲ್ ಕಾಣುತ್ತಿದೆ. ಸದ್ಯದ ಆಫರ್​ನಲ್ಲಿ ನೀವು 1,000 ರೂ. ಗಳ ಡಿಸ್ಕೌಂಟ್ ಪಡೆಯಬಹುದು.

Moto G72: 108MP ಕ್ಯಾಮೆರಾದ ಹೊಚ್ಚ ಹೊಸ ಸ್ಮಾರ್ಟ್​ಫೋನ್ ಮಾರಾಟ ಆರಂಭ: ಈ ಆಫರ್ ಮಿಸ್ ಮಾಡ್ಬೇಡಿ
Moto G72
Follow us
TV9 Web
| Updated By: Vinay Bhat

Updated on: Oct 14, 2022 | 6:11 AM

ದಿನದಿಂದ ದಿನಕ್ಕೆ ಮೋಟೋರೊಲಾ (Motorola) ಕಂಪನಿಯ ಫೋನ್​ಗಳಿಗೆ ಭಾರತದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ತಯಾರು ಮಾಡುತ್ತಿರುವ ಮೋಟೋ ಒಂದರ ಹಿಂದೆ ಒಂದರಂತೆ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೆ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೊಟ್ಟ ಮೊದಲ ಫೋನನ್ನು ಅನಾವರಣ ಮಾಡಿ ಭರ್ಜರಿ ಸದ್ದು ಮಾಡಿದ್ದ ಮೋಟೋರೊಲಾ ಕಳೆದ ವಾರ ತನ್ನ ಮೊಟೊ G ಸರಣಿಯಲ್ಲಿ ಮೋಟೋ ಜಿ72 (Moto G72) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿತ್ತು. ಬರೋಬ್ಬರಿ 108 ಮೆಗಾಪಿಕ್ಸಲ್‌ ಮುಖ್ಯ ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್​ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಮೊದಲ ಸೇಲ್ ಪ್ರಯುಕ್ತ ಬಂಪರ್ ಆಫರ್ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

ಮೋಟೋ G72 ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ ಕೇವಲ 18,999 ರೂ., ಇದು 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈಗಾಗಲೇ ಇದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಸೇಲ್ ಕಾಣುತ್ತಿದೆ. ಸದ್ಯದ ಆಫರ್​ನಲ್ಲಿ ನೀವು 1,000 ರೂ. ಗಳ ಡಿಸ್ಕೌಂಟ್ ಪಡೆಯಬಹುದು. ಜೊತೆಗೆ ಆಯ್ದ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 3,000 ರೂ. ಗಳ ರಿಯಾಯಿತಿ ನೀಡಲಾಗಿದೆ. ಎಕ್ಸ್​ಚೇಂಜ್ ಆಫರ್ ಕೂಡ ಲಭ್ಯವಿದೆ. ಆದರೆ, ಈ ಲಾಂಚ್‌ ಆಫರ್‌ ಸೀಮಿತ ಅವಧಿಯವರೆಗೆ ಮಾತ್ರ ಲಭ್ಯವಾಗಲಿದೆ.

ಈ ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.6 ಇಂಚಿನ ಫುಲ್​ ಹೆಚ್​ಡಿ+ pOLED ಡಿಸ್‌ಪ್ಲೇ ಹೊಂದಿದೆ. 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ ವೇಗದ ಜೊತೆ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯೊಂದಿಗೆ ರಿಲೀಸ್ ಆಗಿದೆ. ಹಾಗೆಯೇ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ಇರಲಿದೆ. IP52 ರೇಟಿಂಗ್ ಅನ್ನು ಸಹ ಹೊಂದಿದ್ದು, ವಾಟರ್ ರೆಸಿಸ್ಟೆನ್ಸ್‌ ಆಯ್ಕೆ ಪಡೆದಿದೆ. ಡಾಬ್ಲಿ ಅಟ್ಮೋಸ್‌ ಆಡಿಯೋದೊಂದಿಗೆ ಸ್ಟಿರಿಯೊ ಸ್ಪೀಕರ್ ರಚನೆಯನ್ನು ಈ ಸ್ಮಾರ್ಟ್‌ಫೋನ್‌ ಪಡೆದಿರುವುದು ವಿಶೇಷ.

ಇದನ್ನೂ ಓದಿ
Image
Tech Tips: ಮನೆಯಲ್ಲಿ ವೈ-ಫೈ ವೇಗ ನಿಧಾನವಾಗಿದೆಯೇ?: ಈ ಟ್ರಿಕ್ ಮೂಲಕ ಹೈ ಸ್ಪೀಡ್ ಇಂಟರ್ನೆಟ್ ಪಡೆಯಿರಿ
Image
Google Pixel 7: ಇಂದಿನಿಂದ ಗೂಗಲ್ ಪಿಕ್ಸೆಲ್ 7 ಸರಣಿ ಖರೀದಿಗೆ ಲಭ್ಯ: ಮೊದಲ ಸೇಲ್​ನಲ್ಲಿ ಬಂಪರ್ ಆಫರ್
Image
Amazon Diwali sale: ಗ್ಯಾಲಕ್ಸಿ S22 5G ಸ್ಮಾರ್ಟ್​ಫೋನ್ ಖರೀದಿಗೆ ಮುಗಿಬಿದ್ದ ಜನರು: ಎಷ್ಟು ರೂ. ಡಿಸ್ಕೌಂಟ್ ಗೊತ್ತೇ?
Image
WhatsApp Tricks: ಐಫೋನ್, ಆಂಡ್ರಾಯ್ಡ್​ ಸ್ಮಾರ್ಟ್​​ಫೋನ್​​ನಲ್ಲಿ ವಾಟ್ಸ್​ಆ್ಯಪ್​​ ಕಾಲ್ ರೆಕಾರ್ಡ್​ ಹೇಗೆ?: ಇಲ್ಲಿದೆ ಟ್ರಿಕ್

ಮೋಟೋ G72 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದು ಫೋಟೋಗ್ರಫಿಗೆ ಹೇಳಿಮಾಡಿಸಿದಂತಿದೆ. ಸ್ಯಾಮ್​ಸಂಗ್ HM6 ಸೆನ್ಸಾರ್ ನೀಡಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಫಿಕ್ಸೆಲ್​ನ ಆಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಮೂರನೇ ಕ್ಯಾಮೆರಾ 2 ಮೆಗಾಫಿಕ್ಸೆಲ್​ನ ಮೈಕ್ರೋ ಶೂಟರ್ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ನೀಡಲಾಗಿದ್ದು, 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಕೂಡ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ ಎಂಬುದು ಬೇಸರದ ಸಂಗತಿ. 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ನೀಡಲಾಗಿದೆ.

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ