108MP ಕ್ಯಾಮೆರಾ, 6000mAh ಬ್ಯಾಟರಿ: ಸ್ಯಾಮ್​ಸಂಗ್​ನಿಂದ ಹುಬ್ಬೇರಿಸುವ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?

|

Updated on: Mar 23, 2023 | 1:14 PM

ಸ್ಯಾಮ್​ಸಂಗ್ ಕಂಪನಿ ತನ್ನ ಗ್ಯಾಲಕ್ಸಿ M ಸರಣಿಯಡಿಯಲ್ಲಿ ಹೊಸ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಮ್54 5ಜಿ (Samsung Galaxy M54 5G) ಫೋನ​ನ್ನು ಬಿಡುಗಡೆ ಮಾಡಿದೆ. ಇದು ಆಕರ್ಷಕವಾದ ಕ್ಯಾಮೆರಾ, ಭರ್ಜರಿ ಬ್ಯಾಟರಿ, ಪ್ರೊಸೆಸರ್ ಅನ್ನು ಹೊಂದಿದೆ.

108MP ಕ್ಯಾಮೆರಾ, 6000mAh ಬ್ಯಾಟರಿ: ಸ್ಯಾಮ್​ಸಂಗ್​ನಿಂದ ಹುಬ್ಬೇರಿಸುವ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?
Samsung Galaxy M54 5G
Follow us on

ದಕ್ಷಿಣ ಕೊರಿಯಾ ಮೂಲದ ಸ್ಯಾಮ್​ಸಂಗ್ (Samsung) ಕಂಪನಿಯ ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್​ಫೋನ್​ಗಳಿಗೆ ವಿಶ್ವದಲ್ಲಿ ಭರ್ಜರಿ ಬೇಡಿಕೆ ಇದೆ. ಈ ಸರಣಿಯ ಫೋನ್​ಗಳು ಬಿಡುಗಡೆ ಆಯಿತು ಎಂದಾದರೆ ಅದು ಬೊಂಬಾಟ್ ಆಗಿ ಸೇಲ್ ಕಾಣುತ್ತದೆ. ಇದಕ್ಕಾಗಿಯೆ ಅತಿ ಹೆಚ್ಚು ಮಾರಾಟ ಆಗುವ ಸ್ಮಾರ್ಟ್​​ಫೋನ್​ಗಳ ಪೈಕಿ ಸ್ಯಾಮ್​ಸಂಗ್ ಎರಡನೇ ಸ್ಥಾನದಲ್ಲಿದೆ. ಕಳೆದ ವಾರವಷ್ಟೆ ಒಂದೇ ದಿನ ಭಾರತದಲ್ಲಿ ಗ್ಯಾಲಕ್ಸಿ A54 5G ಮತ್ತು ಗ್ಯಾಲಕ್ಸಿ A34 5G ಸ್ಮಾರ್ಟ್​ಫೋನ್ (Smartphone) ಅನಾವರಣ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ತನ್ನ ಎಮ್ ಸರಣಿಯಲ್ಲಿ ಹೊಸ ಮೊಬೈಲ್ ಅನ್ನು ರಿಲೀಸ್ ಮಾಡಿದೆ. ಅದುವೆ ಹೊಸ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಮ್54 5ಜಿ (Samsung Galaxy M54 5G). ಈ ಫೋನ್​ನಲ್ಲಿ ಆಕರ್ಷಕವಾದ ಕ್ಯಾಮೆರಾ, ಭರ್ಜರಿ ಬ್ಯಾಟರಿ, ಪ್ರೊಸೆಸರ್ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ ಸದ್ಯಕ್ಕೆ ವಿದೇಶದಲ್ಲಷ್ಟೆ ರಿಲೀಸ್ ಆಗಿದೆ. ಕೇವಲ ಕಂಪನಿಯ ವೆಬ್​ಸೈಟ್​ನಲ್ಲಿ ಕಾಣಿಸಿಕೊಂಡಿರುವ ಈ ಫೋನಿನ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ. ಇಲ್ಲಿ ಇದರ ಬೆಲೆ 30,000 ರೂ. ಆಸುಪಾಸಿನಲ್ಲಿ ಇರಬಹುದು ಎನ್ನಲಾಗಿದೆ. 4GB RAM + 64GB ಮತ್ತು 6GB RAM + 128GB ಆಯ್ಕೆಯೊಂದಿಗೆ ಅನಾವರಣಗೊಳ್ಳಬಹುದು. ಕಂಪನಿಯ ವೆಬ್​ಸೈಟ್​ನಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಸಿಲ್ವರ್ ಬಣ್ಣದಲ್ಲಿದೆ.

Tech Tips: ಮಾರುಕಟ್ಟೆಯಲ್ಲಿ ಎಗ್ಗಿಲ್ಲದೆ ಸೇಲ್ ಆಗುತ್ತಿದೆ ಫೇಕ್ ಸ್ಮಾರ್ಟ್​ಫೋನ್​ಗಳು: ಕಂಡುಹಿಡಿಯುವುದು ಹೇಗೆ?

ಇದನ್ನೂ ಓದಿ
Pinduoduo: ಈ ಶಾಪಿಂಗ್ ಆ್ಯಪ್ ಇನ್​ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ: ಗೂಗಲ್​ನಿಂದ ಎಚ್ಚರಿಕೆಯ ಸಂದೇಶ
Google Down: ಭಾರತದಲ್ಲಿ ಗೂಗಲ್ ಸರ್ವರ್ ಡೌನ್: ಸರ್ಚ್ ಮಾಡಲು ಬಳಕೆದಾರರ ಪರದಾಟ
WhatsApp New Feature: ಗ್ರೂಪ್ ಅಡ್ಮಿನ್​​ಗಳಿಗೆ ಸಹಕಾರಿಯಾಗುವ 2 ಹೊಸ ಫೀಚರ್ ಪರಿಚಯಿಸಲಿದೆ ವಾಟ್ಸ್ಆ್ಯಪ್; ಏನಿದರ ವಿಶೇಷತೆ?
Moto G32: ಮೋಟೋ ಫೋನ್​ಗಳಿಗೆ ಭರ್ಜರಿ ಬೇಡಿಕೆ: ಹಳೆಯ ಮೊಬೈಲ್ ಹೊಸ ಸ್ಟೋರೇಜ್​ನಲ್ಲಿ ಬಿಡುಗಡೆ

ಏನು ಫೀಚರ್ಸ್?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಬಲಿಷ್ಠವಾದ ಆಕ್ಟಾ-ಕೋರ್ Exynos 1380 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದು OIS ಮತ್ತು f/1.8 ಅಪಾರ್ಚರ್ ಲೆನ್ಸ್​ನಿಂದ ಕೂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಆ್ಯಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್​ನ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದರಲ್ಲಿರುವ ರಿಯರ್ ಕ್ಯಾಮೆರಾ 4K ವಿಡಿಯೋ ರೆಕಾರ್ಡ್ ಅನ್ನು ಸಪೋರ್ಟ್ ಮಾಡುತ್ತಂತೆ.

ಈ ಸ್ಮಾರ್ಟ್‌ಫೋನ್​ನ ಪ್ರಮುಖ ಹೈಲೇಟ್ ಆಗಿರುವ ಬ್ಯಾಟರಿಯು 6000mAh ಸಾಮರ್ಥ್ಯದಿಂದ ಕೂಡಿದೆ. 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 55 ಗಂಟೆಗಳ ಟಾಕ್​ಟೈಮ್ ನೀಡುತ್ತಂತೆ. ಇದು ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಹೊಂದಿದ್ದು, 5G, 4G, Wi-Fi 6, ಬ್ಲೂಟೂತ್ 5.6, NFC ಮತ್ತು GPS ಕನೆಕ್ಟಿವಿಟಿ ಆಯ್ಕೆಯನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ