ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲೀಗ ಕ್ಯಾಮೆರಾ ಫೋನ್ಗಳದ್ದೇ ಹಾವಳಿ. ಅದರಲ್ಲೂ 108 ಮೆಗಾಫಿಕ್ಸೆಲ್ನ ಫೋನ್ಗಳು (108MP Camera Phone) ಮಾರುಕಟ್ಟೆಗೆ ಪ್ರವೇಶಿಸಿದ್ದೇ ತಡ ಭರ್ಜರಿ ಸೇಲ್ ಆಗುತ್ತಿದೆ. ಇದನ್ನೆ ಗಮನದಲ್ಲಿಟ್ಟುಕೊಂಡಿರುವ ಬಹತೇಕ ಎಲ್ಲ ಕಂಪನಿಗಳು ಒಂದರ ಹಿಂದೆ ಒಂದರಂತೆ ಆಕರ್ಷಕ ಕ್ಯಾಮೆರಾ ಮೊಬೈಲ್ಗಳನ್ನು (Mobile) ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಇತ್ತೀಚೆಗಷ್ಟೆ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನ್ ಕೂಡ ಬಿಡುಗಡೆ ಆಗಿದೆ. ಇದರ ನಡುವೆ ಜಾಗತಿಕ ಮಟ್ಟದಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಚೀನಾದ ಪ್ರಮುಖ ಸ್ಮಾರ್ಟ್‌ಫೋನ್ ಉತ್ಪಾದನಾ ಕಂಪನಿ ಹುವೈ ಇದೀಗ 108 ಮೆಗಾಫಿಕ್ಸೆಲ್ ಕ್ಯಾಮೆರಾದ ಹುವೈ ನೋವಾ 10 ಎಸ್ಇ (Huawei Nova 10 SE) ಫೋನ್ ಅನ್ನು ಅನಾವರಣ ಮಾಡಿದೆ. ಕೇವಲ ಕ್ಯಾಮೆರಾದಿಂದ ಮಾತ್ರವಲ್ಲದೆ ಪ್ರೊಸೆಸರ್, ಬ್ಯಾಟರಿ ವಿಚಾರದಿಂದಲೂ ಈ ಫೋನ್ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ.
ಸದ್ಯಕ್ಕೆ ಈ ಫೋನ್ ವಿದೇಶದಲ್ಲಿ ಬಿಡುಗಡೆ ಆಗಿದ್ದು ಕೆಲವು ತಿಂಗಳಲ್ಲಿ ಭಾರತಕ್ಕೂ ಕಾಲಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಫೋನಿನ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 1,949 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜಿ 48,900 ರೂ. ಎನ್ನಬಹುದು. ಅಂತೆಯೆ 8GB RAM ಮತ್ತು 256GB ಸ್ಟೋರೇಜ್ ರೂಪಾಂತರಕ್ಕೆ CNY 2,249 (53,600 ರೂ.).
ಈ ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಹುವೈ ನೋವಾ 10 SE ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್ಡಿ+ OLED ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ರೇಟ್ನಿಂದ ಕೂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ EMUI 12 ಔಟ್ ಆಫ್ ದಿ ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.
Vivo V27 Series: ಬೆರಗುಗೊಳಿಸುವ ಫೀಚರ್ಸ್: ಮಾರುಕಟ್ಟೆಗೆ ಎಂಟ್ರಿಕೊಟ್ಟ ವಿವೋ V27, V27 ಪ್ರೊ ಸ್ಮಾರ್ಟ್‌ಫೋನ್
ಇನ್ನು ಈ ಸ್ಮಾರ್ಟ್‌ಫೋನ್ ತ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಿಂದ ಕೂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮೈರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಹುವೈ ನೋವಾ 10 SE ಸ್ಮಾರ್ಟ್ಫೋನ್ನಲ್ಲಿ ದೀರ್ಘ ಸಮಯ ಬಾಳಿಕೆ ಬರುವಂತಹ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 66W ಹುವೈ ಸೂಪರ್ ಚಾರ್ಜ್ ಬೆಂಬಲವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಇರುವ ಸಾಧ್ಯತೆ ಇದೆ. 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್ C ಯನ್ನು ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, GPS, AGPS, ಗ್ಲೋನಾಸ್ ಗ್ರಾವಿಟಿ ಸೆನ್ಸಾರ್, ಕಂಪಾಸ್ ಒಳಗೊಂಡಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ