Redmi Note 11 Pro: ಬರುತ್ತಿದೆ 108MP ಕ್ಯಾಮೆರಾದ ಮತ್ತೊಂದು ಭರ್ಜರಿ ಸ್ಮಾರ್ಟ್​​ಫೋನ್: ಯಾವುದು?, ಯಾವಾಗ ರಿಲೀಸ್?

108MP Cemar Phone: ಈಗಾಗಲೇ ಹಲವು 108 ಮೆಗಾಫಿಕ್ಸೆಲ್ ಕ್ಯಾಮೆರಾದ ಸ್ಮಾರ್ಟ್​ಫೋನ್ ಅನ್ನು ಪರಿಚಯಿಸಿ ಸೈ ಎನಿಸಿಕೊಂಡಿರುವ ಶವೋಮಿ ಇದೀಗ ತನ್ನ ಹೊಸ ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್‌ ಸರಣಿಯ ನೋಟ್‌ 11 ಪ್ರೊ (Redmi Note 11 Pro) ಮಾಡೆಲ್‌ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ.

Redmi Note 11 Pro: ಬರುತ್ತಿದೆ 108MP ಕ್ಯಾಮೆರಾದ ಮತ್ತೊಂದು ಭರ್ಜರಿ ಸ್ಮಾರ್ಟ್​​ಫೋನ್: ಯಾವುದು?, ಯಾವಾಗ ರಿಲೀಸ್?
Redmi Note 11 Pro Plus 5G
Follow us
TV9 Web
| Updated By: Vinay Bhat

Updated on: Feb 27, 2022 | 12:51 PM

ಭಾರತದಲ್ಲಿ ಈಗ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳದ್ದೇ ಹಾವಳಿ. ಅದರಲ್ಲೂ 108 ಮೆಗಾಫಿಕ್ಸೆಲ್​ನ ಫೋನ್​ಗಳು (108MP Camera Phone) ಮಾರುಕಟ್ಟೆಗೆ ಪ್ರವೇಶಿಸಿದ್ದೇ ತಂಡ ಭರ್ಜರಿ ಸೇಲ್ ಆಗುತ್ತಿದೆ. ಇದನ್ನೆ ಗಮನದಲ್ಲಿಟ್ಟುಕೊಂಡಿರುವ ಕಂಪನಿ ಒಂದರ ಹಿಂದೆ ಒಂದರಂತೆ ಆಕರ್ಷಕ ಕ್ಯಾಮೆರಾಗಳ ಮೊಬೈಲ್​ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಇದೀಗ ಶವೋಮಿ ಕಂಪನಿಯ ಸರದಿ. ಈಗಾಗಲೇ ಹಲವು 108 ಮೆಗಾಫಿಕ್ಸೆಲ್ ಕ್ಯಾಮೆರಾದ ಸ್ಮಾರ್ಟ್​ಫೋನ್ ಅನ್ನು ಪರಿಚಯಿಸಿ ಸೈ ಎನಿಸಿಕೊಂಡಿರುವ ಶವೋಮಿ (Xiaomi) ಇದೀಗ ತನ್ನ ಹೊಸ ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್‌ ಸರಣಿಯ ನೋಟ್‌ 11 ಪ್ರೊ (Redmi Note 11 Pro) ಮಾಡೆಲ್‌ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಇದು ಭಾರತದಲ್ಲಿ ಮಾರ್ಚ್ 9ರಂದು ಅನಾವರಣಗೊಳ್ಳಲದೆ. ಇದುಕೂಡ 108 ಮೆಗಾಫಿಕ್ಸೆಲ್​ ಕ್ಯಾಮೆರಾ ಹೊಂದಿರುವುದು ವಿಶೇಷ. ಹಾಗಾದ್ರೆ ಈ ಫೋನಿನ ಇತರೆ ವಿಶೇಷತೆ ಏನು?, ಬೆಲೆ ಎಷ್ಟು ಎಂಬುದನ್ನು ನೋಡೋಣ.

ರೆಡ್ಮಿ ನೋಟ್‌ 11ಪ್ರೊ ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್​ನಿಂದ ಕೂಡಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಮೀಡಿಯಾ ಟೆಕ್‌ ಹಿಲಿಯೋ G96 ಪ್ರೊಸೆಸರ್ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 11 ಆಧಾರಿತ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.

ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಉಳಿದಂತೆ ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸುವ ಸಾಧ್ಯತೆ ಕೂಡ ಇದೆ.

ದೀರ್ಘ ಸಮಯ ಬಳಿಕೆ ಬರುವ ಬಲಿಷ್ಠವಾದ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆಯಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್, ಕಂಪಾಸ್, ಗೈರೋಸ್ಕೋಪ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನಿ ಆರಂಭಿಕ ಬೆಲೆ 16,49 9 ರೂ. ಗಳಿಂದ ಪ್ರಾರಂಭವಾಗುವ ಸಾಧ್ಯತೆಯಿದೆಯಂತೆ. ಆದರೆ, ಖಚಿತ ಬೆಲೆ ಇನ್ನಷ್ಟೆ ಬಹಿರಂಗವಾಗಬೇಕಿದೆ.

Samsung Galaxy A03: ಕೇವಲ 10,499 ರೂ. ಗೆ ಬಿಡುಗಡೆ ಆದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್‌ ಖರೀದಿಸಬಹುದೇ?

Tips and Tricks: ಹುಟ್ಟುಹಬ್ಬಕ್ಕೆ ರಾತ್ರಿ 12 ಮೆಸೇಜ್ ಮಾಡಬೇಕೆಂಬ ಟೆನ್ಶನ್ ಬೇಡ: ಶೆಡ್ಯೂಲ್ ಮಾಡಿಟ್ಟು ಮಲಗಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?